ಮಧ್ಯಪ್ರದೇಶ | ರೈತನನ್ನು ಕ್ರೂರವಾಗಿ ಥಳಿಸಿ ಕೊಂದ ಬಿಜೆಪಿ ನಾಯಕ; ಹೆಣ್ಣು ಮಕ್ಕಳ ಮೇಲೂ ದೌರ್ಜನ್ಯ

Date:

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ರೈತರೊಬ್ಬರನ್ನು ಬಿಜೆಪಿ ನಾಯಕ ಮತ್ತು ಆತನ ಸಹಚರರು ಕ್ರೂರವಾಗಿ ಥಳಿಸಿ ಕೊಂದಿರುವ ಅಮಾನವೀಯ, ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಗಣೇಶಪುರ ಗ್ರಾಮದ 40 ವರ್ಷದ ರೈತ ರಾಮಸ್ವರೂಪ್ ಧಕಾಡ್ ಅವರನ್ನು ಬಿಜೆಪಿ ನಾಯಕ ಮಹೇಂದ್ರ ನಗರ್ ಮತ್ತು ಆತನ ಸಹಚರರು ಕೋಲುಗಳು ಮತ್ತು ರಾಡ್‌ಗಳಿಂದ ಥಳಿಸಿದ್ದಾರೆ. ಬಳಿಕ, ರೈತನ ಮೇಲೆ ಕಾರು ಹತ್ತಿಸಿ ಬರ್ಬರವಾಗಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ.

ರೈತನನ್ನು ರಕ್ಷಿಸಲು ಗ್ರಾಮಸ್ಥರು ಮುಂದಾದಾಗ ಅವರಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ. ಬಂದೂಕು ಹಿಡಿದಿದ್ದ ಆರೋಪಿಗಳಿಗೆ ಹೆದರಿದ ಗ್ರಾಮಸ್ಥರು ನಿಸ್ಸಹಾಯಕರಾಗಿ ಕೃತ್ಯವನ್ನು ನೋಡುತ್ತಾ ನಿಂತಿದ್ದರು. ಆದಾಗ್ಯೂ, ರೈತನ ಹೆಣ್ಣು ಮಕ್ಕಳು ತಮ್ಮ ತಂದೆಯ ರಕ್ಷಣೆಗೆ ಧಾವಿಸಿದ್ದು, ಅವರ ಮೇಲೂ ಆರೋಪಿಗಳು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಮತ್ತು ಅವಮಾನಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ನನ್ನ ತಂದೆಯನ್ನು ಉಳಿಸಲು ಹೋದಾಗ, ಅವರು ನನ್ನನ್ನು ಕೆಳಗೆ ತಳ್ಳಿದರು. ನನ್ನ ಮೇಲೆ ಕುಳಿತು, ನನ್ನ ಬಟ್ಟೆಗಳನ್ನು ಹರಿದರು ನಮ್ಮನ್ನು ಹೆದರಿಸಲು ಗುಂಡು ಹಾರಿಸಿದರು. ನನ್ನ ತಾಯಿ ಮತ್ತು ತಂದೆ ಹೊಲಗಳಿಗೆ ಹೋಗುತ್ತಿದ್ದಾಗ ಅವರ ಮೇಲೆ ನಗರ್‌ನ ಸಹಚರರಾದ ಮಹೇಂದ್ರ, ಹರೀಶ್ ಮತ್ತು ಗೌತಮ್ ದಾಳಿ ಮಾಡಿದರು. ನಂತರ ಅವರು ನನ್ನ ತಂದೆಯ ಮೇಲೆ ಕಾರು ಹರಿಸಿದ್ದಾರೆ. ದಾಳಿಕೋರರು ಬಂದೂಕುಗಳನ್ನು ಹೊಂದಿದ್ದರಿಂದ, ಯಾರೂ ಸಹಾಯ ಮಾಡಲು ಧೈರ್ಯ ಮಾಡಲಿಲ್ಲ” ಎಂದು ಮೃತ ರೈತನ ಮಗಳು ವಿವರಿಸಿದ್ದಾರೆ.

ಸ್ಥಳೀಯರ ಪ್ರಕಾರ, ಬಿಜೆಪಿಯ ಸ್ಥಳೀಯ ಬೂತ್ ಸಮಿತಿ ಮುಖ್ಯಸ್ಥ ಮತ್ತು ಗುಣ ಜಿಲ್ಲೆಯ ಬಿಜೆಪಿ ರೈತ ವಿಭಾಗದ ಮಾಜಿ ಪದಾಧಿಕಾರಿ ಮಹೇಂದ್ರ ನಗರ್ ಎಂಬಾತ ಗಣೇಶಪುರ ಗ್ರಾಮದಲ್ಲಿ ದೀರ್ಘಕಾಲದಿಂದ ದಬ್ಬಾಳಿಕೆ ನಡೆಸುತ್ತಿದ್ದಾರೆ.

“ಅವರು ಕೆಲವು ವರ್ಷಗಳಿಂದ ರೈತರ ಭೂಮಿಯನ್ನು ಕಬಳಿಸುತ್ತಿದ್ದಾರೆ. ಕನಿಷ್ಠ 25 ರೈತರು ತಮ್ಮ ಭೂಮಿಯನ್ನು ಕಡಿಮೆ ಬೆಲೆಗೆ ಮಾರಿ ಗ್ರಾಮವನ್ನೇ ತೊರೆದಿದ್ದಾರೆ. ಆತನ ಕೃತ್ಯಗಳನ್ನು ವಿರೋಧಿಸಲು ಧೈರ್ಯ ಮಾಡಿದವರ ಮೇಲೆ ಭೀಕರ ಹಲ್ಲೆಗಳು ನಡೆದಿವೆ. ರಾಮಸ್ವರೂಪ್ ಅವರು ನಗರ್‌ನ ಭಯೋತ್ಪಾದನಾ ಕೃತ್ಯಕ್ಕೆ ಮಣಿಯಲು ನಿರಾಕರಿಸಿದ್ದರು. ತಮ್ಮ ಜಮೀನನ್ನು ನಗರ್‌ಗೆ ಕೊಡುವುದಿಲ್ಲವೆಂದು ದೃಢನಿರ್ಧಾರ ಮಾಡಿದ್ದರು. ಭೂ ಉಳಿಸಿಕೊಳ್ಳುವ ಹೋರಾಟದಲ್ಲಿ ಅವರು ಪ್ರಾಣವನ್ನೇ ಕಳೆದುಕೊಳ್ಳಬೇಕಾಯಿತು” ಎಂದು ಗ್ರಾಮಸ್ಥರು ಹೇಳಿರುವುದಾಗಿ ವರದಿಯಾಗಿದೆ.

ಉಪ-ವಿಭಾಗೀಯ ಪೊಲೀಸ್ ಅಧಿಕಾರಿ (SDOP–ಬಮೋರಿ) ವಿವೇಕ್ ಅಸ್ಥಾನಾ ಅವರು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, “ಮೃತ ರೈತ ಮತ್ತು ಸ್ಥಳೀಯ ಬಿಜೆಪಿ ನಾಯಕನ ನಡುವಿನ ದೀರ್ಘಕಾಲದ ಭೂ ದ್ವೇಷವೇ ಈ ಕ್ರೂರ ಹತ್ಯೆಗೆ ಕಾರಣ” ಎಂದು ಹೇಳಿದ್ದಾರೆ.

“ಮಹೇಂದ್ರ, ಕನ್ಹಯ್ಯಾ ಹಾಗೂ ಕೆಲವು ಮಹಿಳೆಯರು ಸೇರಿದಂತೆ 13–14 ಜನರು ರಾಮಸ್ವರೂಪ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ, ರಾಮಸ್ವರೂಪ್ ಅವರ ದೇಹದ ಹಲವು ಮೂಳೆಗಳು ಮುಗಿದುಹೋಗಿವೆ. ಅವರ ಹೆಣ್ಣುಮಕ್ಕಳ ಮೇಲೂ ಹಲ್ಲೆ ನಡೆಸಲಾಗಿದೆ. ಗಾಯಗೊಂಡಿದ್ದವರನ್ನು ಗುಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ವಿವೇಕ್ ತಿಳಿಸಿದ್ದಾರೆ.

ಮಹೇಂದ್ರ ನಗರ್, ಅವರ ಪುತ್ರರಾದ ನಿತೇಶ್ ಮತ್ತು ದೇವೇಂದ್ರ, ಪತ್ನಿ ಕಮಲೇಶ್ ಬಾಯಿ ನಗರ್, ಸೋದರಳಿಯ ಜಿತೇಂದ್ರ ಮತ್ತು ನಗರ್ ಕುಟುಂಬದ ಇತರ ಇಬ್ಬರು ಮಹಿಳೆಯರು ಸೇರಿದಂತೆ 14 ಜನರ ವಿರುದ್ಧ ಕೊಲೆ, ಕ್ರಿಮಿನಲ್ ಪಿತೂರಿ, ಹಲ್ಲೆ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ನಿತೀಶ್ ಕುಮಾರ್ ಮತ್ತು ಬಿಜೆಪಿಯ ಸ್ವಯಂ ಸೋಲು

ಆರೋಪಿಗಳಲ್ಲಿ ಒಬ್ಬರಾದ ಮಹೇಂದ್ರ ಎಂಬಾತನ ಅಣ್ಣ ಹುಕುಮ್ ಸಿಂಗ್ ಅವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಆರೋಪಿಗಳನ್ನು ಬಂಧಿಸಲು ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಮಹೇಂದ್ರ ನಗರ್ ಪಕ್ಷದ ಕಾರ್ಯಕರ್ತ ಮತ್ತು ಸ್ಥಳೀಯ ಬೂತ್ ಮುಖ್ಯಸ್ಥನಾಗಿದ್ದಾರೆ. ಅವರನ್ನು ತಕ್ಷಣವೇ ಪಕ್ಷದಿಂದ ತೆಗೆದುಹಾಕುವಂತೆ ನಾವು ಪಕ್ಷದ ಹಿರಿಯ ನಾಯಕರಿಗೆ ಪತ್ರ ಬರೆದಿದ್ದೇವೆ” ಎಂದು ಗುಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಧರ್ಮೇಂದ್ರ ಸಿಕಾರ್ವಾರ್ ಹೇಳಿದ್ದಾರೆ.

ಬಲ್ಲ ಮೂಲಗಳ ಪ್ರಕಾರ, 2020ರಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ 22 ಬೆಂಬಲಿಗರು ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರುವ ಮೂಲಕ ಕಮಲ್ ನಾಥ್ ನೇತೃತ್ವದ ಸರ್ಕಾರವನ್ನು ಉರುಳಿಸಿದಾಗ, ಬಿಜೆಪಿಗೆ ಸೇರಿದ ಕಾರ್ಯಕರ್ತರಲ್ಲಿ ಮಹೇಂದ್ರ ನಗರ್ ಕೂಡ ಒಬ್ಬರು. ಮಹೇಂದ್ರ ನಗರ್‌ ವಾಸವಾಗಿರುವ ಗುಣಾ ಲೋಕಸಭಾ ಕ್ಷೇತ್ರವನ್ನು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರೇ ಪ್ರತಿನಿಧಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...