ಮಧ್ಯಪ್ರದೇಶ| ಎರಡು ದಿನಗಳ ಹಿಂದೆ ಬೋರ್‌ವೆಲ್‌ಗೆ ಬಿದ್ದ 6 ವರ್ಷದ ಬಾಲಕ ಮೃತ್ಯು

Date:

ಮಧ್ಯಪ್ರದೇಶದ ರೇವಾ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಎರಡು ದಿನಗಳ ಹಿಂದೆ ತೆರೆದ ಬೋರ್‌ವೆಲ್‌ಗೆ ಬಿದ್ದಿದ್ದ ಆರು ವರ್ಷದ ಬಾಲಕ ಮೃತಪಟ್ಟಿರುವುದಾಗಿ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಬಾಲಕನನ್ನು ರಕ್ಷಿಸಲು ಹಲವು ಸಂಸ್ಥೆಗಳು ತೀವ್ರ ಪ್ರಯತ್ನ ಮಾಡಿದ್ದರೂ ಬಾಲಕನನ್ನು ಜೀವಂತವಾಗಿ ಹೊರತರಲು ಸಾಧ್ಯವಾಗಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.

ರಾಜ್ಯ ವಿಪತ್ತು ತುರ್ತು ನಿರ್ವಹಣಾ ಪಡೆ (ಎಸ್‌ಡಿಇಆರ್‌ಎಫ್), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಸ್ಥಳೀಯ ತಂಡಗಳು ಬಾಲಕನನ್ನು ಬೋರ್‌ವೆಲ್‌ನಿಂದ ಹೊರತರುವ ಕಾರ್ಯಾಚರಣೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಪ್ರದೇಶದ ಗಡಿಗೆ ಸಮೀಪವಿರುವ ಮಾಣಿಕಾ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಬಾಲಕ ಆಟವಾಡುತ್ತಿದ್ದಾಗ ಬೋರ್‌ವೆಲ್‌ಗೆ ಬಿದ್ದಿದ್ದು ಸುಮಾರು 40 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ ಎಂದು ಅಧಿಕಾರಿಗಳು ಈ ಹಿಂದೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಮಧ್ಯಪ್ರದೇಶ| ಬೋರ್‌ವೆಲ್‌ಗೆ ಬಿದ್ದ 6 ವರ್ಷದ ಬಾಲಕ, ರಕ್ಷಣಾ ಕಾರ್ಯ ಪ್ರಾರಂಭ

ಬಾಲಕ ತನ್ನ ಸ್ನೇಹಿತರೊಂದಿಗೆ ಕಟಾವು ಮಾಡಿದ ಗೋಧಿ ಹೊಲದಲ್ಲಿ ಆಟವಾಡುತ್ತಿದ್ದಾಗ ಬೋರ್‌ವೆಲ್‌ಗೆ ಬಿದಿದ್ದಾನೆ ಎನ್ನಲಾಗಿದೆ. ಇತರ ಮಕ್ಕಳು ಬಾಲಕನನ್ನು ಮೇಲೆತ್ತಲು ಪ್ರಯತ್ನಿಸಿದ್ದು ಸಾಧ್ಯವಾಗದಿದ್ದಾಗ ಬಾಲಕನ ಪೋಷಕರಿಗೆ ಮಾಹಿತಿ ನೀಡಿದ್ದರು ಎಂದು ಈ ಹಿಂದೆ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ರಕ್ಷಣಾ ತಂಡಗಳು 70 ಅಡಿ ಆಳದ ಬೋರ್‌ವೆಲ್‌ಗೆ ಆಕ್ಸಿಜನ್ ಅನ್ನು ಪೂರೈಸಿದೆ. ಹಾಗೆಯೇ ಬಾಲಕನ ರಕ್ಷಣೆಗಾಗಿ ಸಮಾನಾಂತರ ಹೊಂಡಗಳನ್ನು ಅಗೆದಿತ್ತು. “40 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ಮಗುವನ್ನು ಭಾನುವಾರ ಪತ್ತೆ ಮಾಡಲಾಗಿದೆ. ಆದರೆ ಮಗು ಯಾವುದೇ ಪ್ರತಿಕ್ರಿಯೆ ನೀಡಿಲ್ಲ” ಎಂದು ಕಲೆಕ್ಟರ್ ಪ್ರತಿಭಾ ಪಾಲ್ ತಿಳಿಸಿದರು.

“ಬೆಳಿಗ್ಗೆ 8 ಗಂಟೆ ಸುಮಾರಿಗೆ ಬಾಲಕ ಪತ್ತೆಯಾಗಿದ್ದಾರೆ. ನಾವು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇವೆ ಆದರೆ ಬೋರ್‌ವೆಲ್ ತುಂಬಾ ಕಿರಿದಾಗಿರುವ ಕಾರಣ ಮಗುವನ್ನು ಉಳಿಸಲು ಸಾಧ್ಯವಾಗಲಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ” ಎಂದರು.

ಇತ್ತೀಚೆಗೆ ಕರ್ನಾಟಕದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು 18 ಗಂಟೆಗಳ ನಿರಂತರ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...