ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ ನೀಟ್-ಯುಜಿ ಬರೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ಕಡಿತದಿಂದಾಗಿ ತನಗೆ ಪರೀಕ್ಷೆ ಬರೆಯಲು ತೊಂದರೆಯಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು ಪುರಸ್ಕರಿಸಿದೆ. ನೀಟ್- ಯುಜಿ ಫಲಿತಾಂಶ ಘೋಷಣೆಗೆ ಮಧ್ಯಂತರ ತಡೆ ನೀಡಿದೆ.
ವೈದ್ಯಕೀಯ ಪದವಿಪೂರ್ವ ಕೋರ್ಸ್‌ಗಳಿಗೆ ಮೇ 4ರಂದು ಪರೀಕ್ಷೆಯನ್ನು ನಡೆಸಲಾಗಿದೆ. ಆ ಸಮಯದಲ್ಲಿ ಇಂದೋರ್‌ನ ಹಲವಾರು ಭಾಗಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಿತ್ತು. ಆ ಸಮಯದಲ್ಲಿ ಇಂದೋರ್‌ನ ಹಲವಾರು ಭಾಗಗಳಲ್ಲಿ ವಿದ್ಯುತ್ ಕಡಿತಗೊಂಡಿತ್ತು.
ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಸಮ್ಮತಿಯ ಸೆಕ್ಸ್‌ನಲ್ಲಿ ಮಹಿಳೆಯರ ವಯೋಮಿತಿ 16ಕ್ಕೆ ಇಳಿಸಲು ಹೈಕೋರ್ಟ್ ಕೇಂದ್ರಕ್ಕೆ ಮನವಿ
ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಪರೀಕ್ಷೆಗೆ ಮತ್ತೆ ಹಾಜರಾಗಲು ಅವಕಾಶ ನೀಡಬೇಕೆಂದು ಕೋರಿದರು. ಈ ಅರ್ಜಿ ಪರಿಶೀಲಿಸಿದ ಕೋರ್ಟ್ ಸದ್ಯ ಫಲಿತಾಂಶಕ್ಕೆ ಮಧ್ಯಂತರ ತಡೆ ನೀಡಿದೆ. ಈ ಆದೇಶವು ದೇಶದ ಸುಮಾರು 21 ಲಕ್ಷ ಅಭ್ಯರ್ಥಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ನ್ಯಾಯಮೂರ್ತಿ ಸುಬೋಧ್ ಅಭ್ಯಂಕರ್, “ವಿದ್ಯುತ್ ಕಡಿತದಿಂದಾಗಿ ಆಕೆಯ ಪ್ರವೇಶ ಪರೀಕ್ಷೆಯಲ್ಲಿ ತೊಂದರೆ ಉಂಟಾಗಿದೆ. ಪರೀಕ್ಷೆ ವೇಳೆ ಅಭ್ಯರ್ಥಿಗೆ ಸರಿಯಾದ ಸವಲತ್ತು ಒದಗಿಸಲು ಅಧಿಕಾರಿಗಳು ವಿಫಲರಾಗಿದ್ದಾರೆ” ಎಂದು ಅಭಿಪ್ರಾಯಿಸಿದ್ದಾರೆ. ಹಾಗೆಯೇ ಮುಂದಿನ ವಿಚಾರಣೆವರೆಗೂ ಫಲಿತಾಂಶವನ್ನು ಘೋಷಿಸಬಾರದು ಎಂದು ಹೇಳಿದ್ದಾರೆ.
ಈ ಅರ್ಜಿಯ ವಿಚಾರಣೆಯನ್ನು ಜೂನ್ 30ರಂದು ನಡೆಸುವ ಸಾಧ್ಯತೆಯಿದೆ. ಕೋರ್ಟ್ ಪ್ರತಿವಾದಿಗಳಾಗಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ), ಕೇಂದ್ರ ಸರ್ಕಾರ ಮತ್ತು ಮಧ್ಯಪ್ರದೇಶ ಪಶ್ಚಿಮ ವಲಯ ವಿದ್ಯುತ್ ವಿತರಣಾ ಕಂಪನಿ ಈಗಾಗಲೇ ನೋಟಿಸ್ ಜಾರಿ ಮಾಡಿದೆ. ಹಾಗೆಯೇ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡಲು ಸೂಚಿಸಿದೆ. ಇನ್ನು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದರೂ ಪ್ರತಿವಾದಿಗಳು ಹಾಜರಾಗಿಲ್ಲ ಎಂದು ವರದಿಯಾಗಿದೆ.





