ಹೆದ್ದಾರಿಯಲ್ಲೇ ನಿಂತು ಮಹಿಳೆಯೊಂದಿಗೆ ಕಾಮಕೃತ್ಯ: ವಿಡಿಯೋ ವೈರಲ್ ಬೆನ್ನಲ್ಲೇ ಮಧ್ಯಪ್ರದೇಶ ಬಿಜೆಪಿ ಮುಖಂಡನ ಬಂಧನ

Date:

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಮಹಿಳೆಯೊಬ್ಬರ ಜೊತೆ ಮಧ್ಯಪ್ರದೇಶ ಬಿಜೆಪಿ ಮುಖಂಡರೊಬ್ಬರು ಲೈಂಗಿಕ ಕ್ರಿಯೆ ನಡೆಸಿದ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಇದಾದ ಬೆನ್ನಲ್ಲೇ ಮನೋಹರ್ ಲಾಲ್ ಧಕಾಡ್ ಅವರನ್ನು ಭಾನುವಾರ ಬಂಧಿಸಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾನ್ಪುರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಮನೋಹರ್ ಲಾಲ್ ಧಕಾಡ್ ಮಧ್ಯಪ್ರದೇಶದ ಮಂದ್ಸೌ‌ರ್ ಬಿಜೆಪಿಯಲ್ಲಿ ಸಕ್ರಿಯನಾಗಿದ್ದು, ಬಿಜೆಪಿಯ ರಾಷ್ಟ್ರೀಯ ಯುವಮೋರ್ಚಾ ಘಟಕದಲ್ಲೂ ಜವಾಬ್ದಾರಿ ಹೊಂದಿದ್ದ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಹೆದ್ದಾರಿಯಲ್ಲೇ ನಿಂತು ಮಹಿಳೆಯೊಂದಿಗೆ ಕಾಮಕೃತ್ಯ ನಡೆಸಿದ ಬಿಜೆಪಿ ಮುಖಂಡ: ಸಿಸಿಟಿವಿ ದೃಶ್ಯ ವೈರಲ್; ಎಫ್‌ಐಆರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಮನೋಹರ್ ಪ್ರಾಥಮಿಕ ಸದಸ್ಯನೂ ಆಗಿರಲಿಲ್ಲ ಎಂದು ಹೇಳಿಕೊಂಡಿದೆ. ಮೊಬೈಲ್ ಸಂಖ್ಯೆಗೆ ‘ಮಿಸ್ಡ್ ಕಾಲ್’ ನೀಡುವ ಮೂಲಕ ಯಾರಾದರೂ ಸದ್ಯಸರಾಗಬಹುದು ಎಂದು ಬಿಜೆಪಿ ವಕ್ತಾರ ಮತ್ತು ಮಂದಸೌರ್‌ನ ಮಾಜಿ ಶಾಸಕ ಯಶ್‌ಪಾಲ್ ಸಿಂಗ್ ಸಿಸೋಡಿಯಾ ಹೇಳಿದ್ದಾರೆ. ಆದರೆ ಮನೋಹರ್ ಲಾಲ್ ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಹಲವು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಭಾನ್ಪುರ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ತನಿಖಾಧಿಕಾರಿ ಆರ್.ಸಿ. ಡಾಂಗಿ, “ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 296, 285 ಮತ್ತು 3(5)ರ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ. ಈ ವಿಡಿಯೋ ವೈರಲ್ ಮಾಡಿದವರು ಯಾರು ಮತ್ತು ಅದರ ಹಿಂದಿನ ಉದ್ದೇಶವೇನು ಎಂದು ತಿಳಿಯಬೇಕಾಗಿರುವುದರಿಂದ ತನಿಖೆ ಮುಂದುವರೆದಿದೆ” ಎಂದು ಹೇಳಿದ್ದಾರೆ.

“ಇಂತಹ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದರೂ ಸಹ, ಅದನ್ನು ಹೊಂದಿರುವವರು ಪೊಲೀಸರಿಗೆ ಹಸ್ತಾಂತರಿಸಬೇಕು. ಹಾಗಾಗಿ ಇತರ ವ್ಯಕ್ತಿಗಳು ಈ ಅಪರಾಧದಲ್ಲಿ ಭಾಗಿಯಾಗಿದ್ದಾರೆಯೇ ಎಂದು ನಾವು ಖಚಿತಪಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ಇನ್ನು ಮಹಿಳೆಯನ್ನು ಬಂಧಿಸಿಲ್ಲ. “ಆಕೆಯ ವಿರುದ್ಧ ಯಾವ ಕಾನೂನು ಕ್ರಮ ಕೈಗೊಳ್ಳಬಹುದು ಎಂಬುದನ್ನು ನಿರ್ಧರಿಸುವ ಮೊದಲು ನಾವು ಸಂಪೂರ್ಣ ತನಿಖೆ ನಡೆಸಬೇಕಾಗಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...