ಮಧ್ಯಪ್ರದೇಶ | ಬಿಜೆಪಿ ಸದಸ್ಯನಾಗಲು ನಿರಾಕರಿಸಿದ್ದಕ್ಕೆ ವ್ಯಕ್ತಿಗೆ ಥಳಿಸಿದ ಗುಂಪು!

Date:

ಬಿಜೆಪಿ ಸದಸ್ಯನಾಗಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ನಾಲ್ವರು ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ. “ನಾನು ಬಿಜೆಪಿ ಸೇರಲು ನಿರಾಕರಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ” ಎಂದು ದೂರುದಾರರಾದ ಮಾನವೇಂದ್ರ ಸಿಂಗ್ ಯಾದವ್ (27) ಆರೋಪಿಸಿದ್ದಾರೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಮಿತಾ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-39ರ ಟೋಲ್ ಪ್ಲಾಜಾದಲ್ಲಿ ಸೋಮವಾರ ಈ ಘಟನೆ ನಡೆದಿದೆ.

ಮಾನವೇಂದ್ರ ಸಿಂಗ್ ಯಾದವ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಇಂಜಿನಿಯರ್‌ನ ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಒಂದೇ ಕುಟುಂಬದ ಮೂವರು ಮಹಿಳೆಯರು, ಓರ್ವ ಬಾಲಕಿ ಬಾವಿಯಲ್ಲಿ ಶವವಾಗಿ ಪತ್ತೆ

“ಸೋಮವಾರ ಮಧ್ಯಾಹ್ನದ ಸುಮಾರಿಗೆ ನಾಲ್ಕು ಜನರು ಟೋಲ್ ಪ್ಲಾಜಾದ ಬಳಿ ಬಂದರು. ನನ್ನ ಮೊಬೈಲ್ ಫೋನ್ ನೀಡುವಂತೆ ಒತ್ತಾಯಿಸಿದರು. ಬಿಜೆಪಿ ಸದಸ್ಯರಾಗಲು ಮೊಬೈಲ್ ಫೋನ್‌ನಿಂದ ಮಿಸ್ಡ್‌ ಕಾಲ್ ನೀಡಬೇಕೆಂದು ಒತ್ತಾಯಿಸಿದರು” ಎಂದು ದೂರುದಾರರು ಹೇಳಿದ್ದಾರೆ.

ಈ ವೇಳೆ ಯಾದವ್ ಬಿಜೆಪಿ ಸದಸ್ಯನಾಗುವುದನ್ನು ನಿರಾಕರಿಸಿದ್ದು ಅದಕ್ಕೆ ಅವರನ್ನು ನಿಂದಿಸಲಾಗಿದೆ ಮತ್ತು ಥಳಿಸಲಾಗಿದೆ. ಅವರ ಮೊಬೈಲ್ ಫೋನ್ ಅನ್ನು ನಾಲ್ವರು ಕಿತ್ತುಕೊಂಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಯಾದವ್ ಎಫ್‌ಐಆರ್ ದಾಖಲಿಸಿದ ನಂತರ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಬಮಿತಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಛತ್ತರ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಆಗಮ್ ಜೈನ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...