ಹೆಲ್ಮೆಟ್ ಧರಿಸಿಲ್ಲವೆಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸರು

Date:

ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಹೆಲ್ಮೆಟ್ ಧರಿಸಿಲ್ಲವೆಂದು ದಂಡ ವಿಧಿಸಿರುವ ವಿಚಿತ್ರ ಘಟನೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಅಜಯ್‌ಘಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಇಲ್ಲಿನ ನಿವಾಸಿಯಾಗಿರುವ ಸುಶೀಲ್ ಕುಮಾರ್ ಶುಕ್ಲಾ ಅವರು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿರುವಾಗ ಪೊಲೀಸ್ ಸಿಬ್ಬಂದಿಯೊಬ್ಬ ಹೆಲ್ಮೆಟ್ ಧರಿಸಿಲ್ಲ ಎಂದು 300 ರೂ. ದಂಡ ವಿಧಿಸಿ ಚಲನ್ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಯ ಕಾರ್ಯದಿಂದ ತಬ್ಬಿಬ್ಬಾದ ಸುಶೀಲ್ ಕುಮಾರ್ ನ್ಯಾಯಕ್ಕಾಗಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿ ನಡೆದ ಘಟನೆ ಕುರಿತು ದೂರು ನೀಡಿದ್ದಾರೆ. ಜೊತೆಗೆ ಪೊಲೀಸ್ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಶುಕ್ಲಾ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ, ‘ಅಜಯಗಢ ನಿವಾಸಿ ಸುಶೀಲ್ ಕುಮಾರ್ ಶುಕ್ಲಾ ಅವರು ಮಗಳ
ಹುಟ್ಟುಹಬ್ಬಕ್ಕೆಂದು ಜನವರಿ 4 ರಂದು ಬಹದ್ದೂರ್‌ಗಂಜ್‌ಗೆ ಬಂದಿದ್ದರು ಇದಾದ ಬಳಿಕ ರಾತ್ರಿ ಸುಮಾರು 7.30ಕ್ಕೆ ವಾಪಸ್‌ ತನ್ನ ಊರಿಗೆ ಹೋಗಲು ನಡೆದುಕೊಂಡು ಹೋಗುವ ವೇಳೆ ಪೊಲೀಸ್ ಜೀಪಿನಲ್ಲಿ ಬಂದ ನಾಲ್ವರು ಸಿಬ್ಬಂದಿಗಳು ನನ್ನನ್ನು ಜೀಪಿನಲ್ಲಿ ಬಲವಂತವಾಗಿ ಕೂರಿಸಿ ಅಜಯ್‌ಘಡ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಕೆಲ ಸಮಯ ಇರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ

ಈ ವೇಳೆ ನಾನು ಮಗಳ ಹುಟ್ಟುಹಬ್ಬಕ್ಕೆ ಬಂದವನು ನನ್ನ ಊರಿಗೆ ಮರಳಬೇಕಿದೆ ಎಂದೂ ಹೇಳಿದರೂ ಕೇಳದೆ ರಸ್ತೆ ಬದಿ ನಿಲ್ಲಿಸಿದ್ದ ಬೇರೊಬ್ಬರ ಬೈಕ್ ಸಂಖ್ಯೆ ಬರೆದು ಹೆಲ್ಮೆಟ್ ಧರಿಸದೆ ಬೈಕ್ ಸವರಿ ಮಾಡಿದ್ದಕ್ಕೆ 500 ರೂಪಾಯಿ ದಂಡ ಕಟ್ಟಬೇಕು ಎಂದು ಚಲನ್‌ ಬರೆದು ಕೊಟ್ಟಿದ್ದಾರೆ. ಇದಕ್ಕೆ ನನ್ನ ಬಳಿ ಬೈಕ್ ಇಲ್ಲ ನಾನು ನಡೆದುಕೊಂಡು ಬಂದಿರುವುದಾಗಿ ಹೇಳಿದರೂ ಕೇಳದ ಸಿಬ್ಬಂದಿಗಳು ದಂಡ ಕಟ್ಟದಿದ್ದರೆ ಆರು ತಿಂಗಳು ಜೈಲು ವಾಸ ಅನುಭವಿಸಬೇಕಾಗುತ್ತದೆ ಎಂದು ಹೆದರಿಸಿ ಮುನ್ನೂರು ರೂಪಾಯಿ ದಂಡದ ಮೊತ್ತ ಪಡೆದುಕೊಂಡಿದ್ದಾರೆ ಎಂದು ದೂರು ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮಾಹಿತಿ ನೀಡಿದ ಅಜಯಗಢ ಪೊಲೀಸ್ ಠಾಣೆಯ ಪ್ರಭಾರಿ ರವಿ ಜಾದೌನ್, ‘ಹೆಲ್ಮೆಟ್ ಧರಿಸದ ಪಾದಚಾರಿಗಳಿಗೆ ಚಲನ್ ಜಾರಿ ಮಾಡುವ ಸಾಧ್ಯತೆ ಕಡಿಮೆ. ಆದರೂ ಶುಕ್ಲಾ ಅವರು ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿ ತಪ್ಪಾಗಿದ್ದರೆ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...