ಮಧ್ಯಪ್ರದೇಶ । ಹಾಡಹಗಲೇ ಮಹಿಳೆ ಮೇಲೆ ಅತ್ಯಾಚಾರ; ಕಾಮುಕನ ಕೃತ್ಯ ನೋಡುತ್ತ ನಿಂತ ಜನ

Date:

ಕಾಮುಕನೊಬ್ಬ ಮಹಿಳೆಯ ಮೇಲೆ ಹಾಡಹಗಲೆ ಸಾರ್ವಜನಿಕ ಸ್ಥಳದಲ್ಲಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ
ಮಧ್ಯಪ್ರದೇಶ ಉಜ್ಜಯಿನಿಯಲ್ಲಿ ನಡೆದಿದೆ. ವಿಕೃತ ಕಾಮುಕ ಅತ್ಯಾಚಾರ ಎಸಗುತ್ತಿರುವುದನ್ನು ಕಂಡ ಜನರು ಮಹಿಳೆಯ ರಕ್ಷಣೆ ಬಾರದೆ, ಕೃತ್ಯವನ್ನು ನೋಡುತ್ತಾ ನಿಂತಿದ್ದರು ಎಂದು ಹೇಳಲಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಬುಧವಾರ ಮಧ್ಯಾಹ್ನ ಉಜ್ಜಯಿನಿಯ ಜನನಿಬಿಡ ಪ್ರದೇಶ ಕೋಯ್ಲಾ ಪಾಠಜಕ್‌ನಲ್ಲಿ ಪಾದಚಾರಿ ಮಾರ್ಗದ ಮೇಲೆಯೇ ಕಾಮುಕ ಮಹಿಳೆಯ ಮೇಲ ಅತ್ಯಾಚಾರ ಎಸಗಿದ್ದಾನೆ. ಕೃತ್ಯದ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೃತ್ಯವನ್ನು ಕಂಡ ಜನರು ಮಹಿಳೆಯ ರಕ್ಷಣೆಗೆ ಧಾವಿಸದೆ, ವಿಡಿಯೋ ಚಿತ್ರೀರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆಯನ್ನು ಪತ್ತೆ ಹಚ್ಚಿರುವ ಪೊಲೀಸರು, ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆಕೆಯಿಂದ ಹೇಳಿಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನನ್ನು ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿದ್ದ ಆರೋಪಿ ಲೋಕೇಶ್, ನನಗೆ ಬಲವಂತವಾಗಿ ಮದ್ಯ ಕುಡಿಸಿದ್ದ. ಬಳಿಕ, ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ” ಎಂದು ಸಂತ್ರಸ್ತೆ ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ಎಸಗಿ, ಬಳಿಕ ಸಂತ್ರಸ್ತೆಗೆ ಬೆದರಿಕೆವೊಡ್ಡಿ ಆರೋಪಿ ಲೋಕೇಶ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ಮಧ್ಯಪ್ರದೇಶದ ಉಜ್ಜಯಿನಿಯ ರಸ್ತೆಯಲ್ಲಿ ಹಗಲು ಹೊತ್ತಿನಲ್ಲಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ನಡೆದಿದೆ. ನೆರೆದಿದ್ದವರು ಸಹಾಯ ಮಾಡುವ ಬದಲು ಕೃತ್ಯವನ್ನು ವಿಡಿಯೋ ಮಾಡಿದ್ದಾರೆ. ಸಮಾಜ ಎತ್ತ ಸಾಗುತ್ತಿದೆ. ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಈ ಕೃತ್ಯ ನಡೆದಿದ್ದು, ಮುಖ್ಯವಾಹಿನಿಯ ಮಾಧ್ಯಮಗಳು ಮತ್ತು ಬಿಜೆಪಿ ನಾಯಕರು ಘಟನೆ ಬಗ್ಗೆ ಮಾತನಾಡುತ್ತಿಲ್ಲ” ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...