VIRAL VIDEO | ವಿದ್ಯಾರ್ಥಿಗಳಿಗೆ ಮದ್ಯ ನೀಡಿದ ಶಾಲಾ ಶಿಕ್ಷಕ; ವಿಡಿಯೋ ವೈರಲ್ ಆದ ಬೆನ್ನಲ್ಲೇ ಅಮಾನತು

Date:

ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ತನ್ನ ವಿದ್ಯಾರ್ಥಿಗಳಿಗೆ ಮದ್ಯ ನೀಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಬರ್ವಾರಾ ಬ್ಲಾಕ್‌ನ ಖಿರ್ಹಾನಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಲಾಲ್ ನವೀನ್ ಪ್ರತಾಪ್ ಸಿಂಗ್ ಅವರು ವಿದ್ಯಾರ್ಥಿಗಳಿಗೆ ಮದ್ಯ ನೀಡಿದ್ದಾರೆ. ಅವರ ವಿಡಿಯೋ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.

ಇದನ್ನು ಓದಿದ್ದೀರಾ? ಏರ್ ಇಂಡಿಯಾ ವಿಮಾನದಲ್ಲಿ ಸೋರಿದ ನೀರು: ವೈರಲ್ ಆದ ವಿಡಿಯೋ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ದಿಲೀಪ್ ಕುಮಾರ್ ಯಾದವ್ ಅವರು ಜಿಲ್ಲಾ ಶಿಕ್ಷಣ ಅಧಿಕಾರಿ ಒಪಿ ಸಿಂಗ್ ಅವರಿಗೆ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಡಿಯೋವನ್ನು ವಿವಿಧ ವಿಭಾಗದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬಳಿಕ ಶಿಕ್ಷಕನನ್ನು ಲಾಲ್ ನವೀನ್ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ.

ದುರ್ನಡತೆ, ಮಕ್ಕಳನ್ನು ಮದ್ಯ ಕುಡಿಯಲು ಪ್ರೋತ್ಸಾಹಿಸುವುದು ಮತ್ತು ಶಿಕ್ಷಕರ ಘನತೆಗೆ ಕುಂದುಂಟು ಮಾಡಿದ ಆರೋಪದ ಮೇಲೆ ಸಿಂಗ್ ವಿರುದ್ಧ ಮಧ್ಯಪ್ರದೇಶ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳ ಅಡಿಯಲ್ಲಿ ತಕ್ಷಣವೇ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಕೋಣೆಯೊಂದರಲ್ಲಿ ಕಪ್‌ಗಳಲ್ಲಿ ಸಣ್ಣ ಹುಡುಗರಿಗೆ ಮದ್ಯ ನೀಡುತ್ತಿರುವುದು ಕಂಡುಬಂದಿದೆ. ಹಾಗೆಯೇ ಅವರಲ್ಲಿ ಒಬ್ಬರು ಮದ್ಯ ಸೇವಿಸುವ ಮುನ್ನ ನೀರು ಬೆರೆಸುವಂತೆ ಹೇಳುತ್ತಿರುವುದು ಕೇಳಿಬರುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...