ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿದ ಶಿಕ್ಷಕ ಅಮಾನತು

Date:

ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿರುವ ಘಟನೆ ಮಧ್ಯಪ್ರದೇಶದ ಕತ್ನಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಆರೋಪಿ ಶಿಕ್ಷಕನನ್ನು ಲಾಲ್ ನವೀನ್ ಪ್ರತಾಪ್ ಸಿಂಗ್ ಎಂದು ಹೆಸರಿಸಲಾಗಿದೆ. ಆರೋಪಿಯು ಕತ್ನಿ ಜಿಲ್ಲೆಯ ಖಿರ್ಹಾನಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶಿಕ್ಷಕ ತನ್ನ ವಿದ್ಯಾರ್ಥಿಗಳಿಗೆ ಮದ್ಯ ನೀಡುತ್ತಿದ್ದ ವಿಡಿಯೋ ಶುಕ್ರವಾರ ಬೆಳಕಿಗೆ ಬಂದಿತ್ತು.

ವಿಡಿಯೊದಲ್ಲಿ, ಕೊಠಡಿಯೊಂದರಲ್ಲಿ ಕುಳಿತಿರುವ ಶಿಕ್ಷಕ ಸಣ್ಣ ಮಕ್ಕಳಿಗೆ ಲೋಟಗಳಲ್ಲಿ ಮದ್ಯವನ್ನು ನೀಡಿದ್ದಾರೆ. ಅದನ್ನು ಕುಡಿಯುವುದಕ್ಕೂ ಮುನ್ನ ನೀರು ಬೆರೆಸಿಕೊಳ್ಳುವಂತೆ ಸೂಚಿಸುತ್ತಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋವನ್ನು ಗಮನಿಸಿ, ಇದು ಗಂಭೀರ ಕೃತ್ಯವೆಂದು ಪರಿಗಣಿಸಿದ ಕತ್ನಿ ಜಿಲ್ಲಾಧಿಕಾರಿ ದಿಲೀಪ್ ಕುಮಾರ್ ಯಾದವ್ ಅವರು ಆರೋಪಿ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಶಿಕ್ಷಣಾಧಿಕಾರಿ ಒ‌.ಪಿ ಸಿಂಗ್‌ ಅವರಿಗೆ ನಿರ್ದೇಶನ ನೀಡಿದ್ದರು. ಅವರ ನಿರ್ದೇಶನದಂತೆ ಆರೋಪಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...