ಮಧ್ಯಪ್ರದೇಶ | ಗ್ರಾಮಸ್ಥರಿಗೆ ತಮ್ಮ ಅಧಿಕಾರ-ಹಕ್ಕು ಹಸ್ತಾಂತರ; ಒಪ್ಪಂದಕ್ಕೆ ಸಹಿ ಹಾಕಿದ ಗ್ರಾ.ಪಂ. ಸದಸ್ಯೆ

Date:

ತಮ್ಮ ಅಧಿಕಾರ ಮತ್ತು ಹಕ್ಕುಗಳನ್ನು ಪುರುಷನಿಗೆ ಹಸ್ತಾಂತರಿಸುವುದಾಗಿ ಮಹಿಳಾ ಸರಪಂಚ್ ಒಬ್ಬರು 500 ರೂಪಾಯಿಯ ಪೇಪರ್ ಮೇಲೆ ಒಪ್ಪಂದಕ್ಕೆ ಸಹಿ ಹಾಕಿರುವ ಘಟನೆ ಮಧ್ಯಪ್ರದೇಶದ ನೀಮಚ್ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ದಾತು ಗ್ರಾಮ ಪಂಚಾಯತಿಯ ಸದಸ್ಯೆ (ಸರಪಂಚ್) ಕೈಲಾಶಿ ಬಾಯಿ ಕಛಾವಾ ಅವರು ಪಂಚಾಯತಿಯ ತಮ್ಮ ಸದಸ್ಯತ್ವದ ಅಧಿಕಾರ-ಹಕ್ಕುಗಳನ್ನು ಸುರೇಶ್ ಎಂಬಾತನಿಗೆ ವರ್ಗಾಯಿಸಿದ್ದಾರೆ. ಗ್ರಾಮಸ್ಥರೊಂದಿಗೆ ಒಪ್ಪಂದ ಮಾಡಿಕೊಂಡು ಅಧಿಕಾರ ಹಸ್ತಾಂತರಿಸಿರುವ ಕೈಲಾಶಿ ಅವರಿಗೆ ಜಿಲ್ಲಾ ಪಂಚಾಯತ್ ಸಿಇಒ ಅಮನ್ ವೈಷ್ಣವ್ ಅವರು ನೋಟಿಸ್ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಕೈಲಾಶಿ ಬಾಯಿ ಅವರು ತಮ್ಮ ಸರಪಂಚ್ ಹಕ್ಕುಗಳನ್ನು ಸುರೇಶ್ ಎಂಬಾತನಿಗೆ ಹಸ್ತಾಂತರಿಸಿದ್ದಾರೆ ಎಂಬ ದೂರು ಬಂದಿದೆ. ಪಂಚಾಯತ್ ರಾಜ್ ಕಾಯ್ದೆಯ ಸೆಕ್ಷನ್ 40ರ ಅಡಿಯಲ್ಲಿ ಸರಪಂಚ್ ಸ್ಥಾನದಿಂದ ಕೈಲಾಶಿ ಅವರನ್ನು ವಜಾಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಅದಕ್ಕೂ ಮುನ್ನ, ಆರೋಪಗಳ ಬಗ್ಗೆ ಕೈಲಾಶಿ ಅವರಿಂದ ಪ್ರತಿಕ್ರಿಯೆ ಕೇಳಿ ನೋಟಿಸ್ ನೀಡಲಾಗಿದೆ. ಗ್ರಾಮ ಪಂಚಾಯತಿ ಕಾರ್ಯದರ್ಶಿಗೂ ಶೋಕಾಸ್ ನೋಟಿಸ್‌ ಜಾರಿಗೊಳಿಸಲಾಗಿದೆ. ಉತ್ತರಗಳು ಬಂದ ಬಳಿಕ, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಅಮನ್ ವೈಷ್ಣವ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೈಲಾಶಿ ಬಾಯಿ ಅವರು ಸಹಿ ಮಾಡಿರುವ ಸ್ಟಾಂಪ್ ಪೇಪರ್‌ನ ಛಾಯಾಚಿತ್ರವನ್ನು ಪಡೆದಿದ್ದೇವೆ. ಆದರೆ ಉತ್ತರ ಬಂದ ನಂತರವೇ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಿಇಒ ಹೇಳಿದ್ದಾರೆ.

ಜನವರಿ 24ರಂದು ಕೈಲಾಶಿ ಅವರು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಒಪ್ಪಂದದ ಪ್ರಕಾರ, ಸರಪಂಚ್ ಕೈಲಾಶಿ ಬಾಯಿ ಕಛಾವಾ ಅವರು ದಾತಾ ಗ್ರಾಮದ ನಿವಾಸಿ ಸುರೇಶ್ ಗರಸಿಯಾ ಅವರಿಗೆ ತಮ್ಮ ಸರಪಂಚ್‌ ಹಕ್ಕುಗಳನ್ನು ಹಸ್ತಾಂತರಿಸಲು ಒಪ್ಪಿಗೆ ನೀಡಿದ್ದಾರೆ ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...