ಪಕ್ಷದ ಕಚೇರಿಯಲ್ಲಿ ಬಿಎಸ್‌ಪಿ ನಾಯಕನ ಅಂತಿಮ ಸಂಸ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನಿರಾಕರಣೆ

Date:

ತಮಿಳುನಾಡು ರಾಜ್ಯ ಬಿಎಸ್‌ಪಿ ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್‌ ಅವರನ್ನು ಚೆನ್ನೈನ ಪಕ್ಷದ ಕಚೇರಿಯಲ್ಲಿ ಅಂತಿಮ ಸಂಸ್ಕಾರ ನಡೆಸುವುದಕ್ಕೆ ಸಲ್ಲಿಸಲಾಗಿದ್ದ ಮನವಿಯನ್ನು ಮದ್ರಾಸ್‌ ಹೈಕೋರ್ಟ್ ನಿರಾಕರಿಸಿದೆ. ಆರ್ಮ್‌ಸ್ಟ್ರಾಂಗ್‌ ಅವರನ್ನು ತಿರುವಳ್ಳೂರ್‌ ಜಿಲ್ಲೆಯ ಪೊತೂರ್‌ ಗ್ರಾಮದಲ್ಲಿ ಅಂತಿಮ ಸಂಸ್ಕಾರ ನಡೆಸುವುದಕ್ಕೆ ಕೋರ್ಟ್ ಅನುಮತಿ ನೀಡಿದೆ.

ಮದ್ರಾಸ್‌ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ವಿ ಭವಾನಿ ಸುಬ್ರಮಣಿಯಂ ಅವರು ಚೆನ್ನೈನ ಪಕ್ಷದ ಕಚೇರಿಯಲ್ಲಿ ಅಂತಿಮ ಸಂಸ್ಕಾರಕ್ಕೆ ಅವಕಾಶ ನೀಡಬೇಕೆಂದು ಆರ್ಮ್‌ಸ್ಟ್ರಾಂಗ್‌ ಅವರ ಪತ್ನಿ ಕೆ ಪೋರ್ಕಡಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿ ತೀರ್ಪು ನೀಡಿದರು.

ವಸತಿ ಪ್ರದೇಶವಾದ ಕಾರಣ ಪಕ್ಷದ ಕಚೇರಿಯಲ್ಲಿ ಅಂತಿಮ ಸಂಸ್ಕಾರಕ್ಕೆ ಅವಕಾಶ ನೀಡಬಾರದು ಎಂದು ಆಡಳಿತರಾರೂಢ ಡಿಎಂಕೆ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ಪೆರಂಬೂರ್‌ನಲ್ಲಿನ ಪಾಲಿಕೆ ಶಾಲೆಯಲ್ಲಿ ಆರ್ಮ್‌ಸ್ಟ್ರಾಂಗ್‌ ಅವರ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’

ಬಿಎಸ್‌ಪಿ ಅಧ್ಯಕ್ಷೆ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಚೆನ್ನೈಗೆ ಆಗಮಿಸಿ ಕೆ ಆರ್ಮ್‌ಸ್ಟ್ರಾಂಗ್‌ ಅಂತಿಮ ದರ್ಶನ ಮಾಡಿದರು.

ಅದಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೆ ಬಂಧಿಸಿದವರು ನಿಜವಾದ ಅಪರಾಧಿಗಳಲ್ಲ. ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು. ಆರ್ಮ್‌ಸ್ಟ್ರಾಂಗ್‌ ಹತ್ಯೆಯ ರೀತಿಯನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇಲ್ಲ ಎಂಬುವುದನ್ನು ತೋರಿಸುತ್ತದೆ. ಆರ್ಮ್‌ಸ್ಟ್ರಾಂಗ್‌ಗೆ ನ್ಯಾಯ ದೊರೆಯುವಂತೆ ಸ್ಟಾಲಿನ್ ನೋಡಿಕೊಳ್ಳಬೇಕು. ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕು” ಎಂದು ತಮಿಳುನಾಡು ಸಿಎಂ ಅವರಿಗೆ ಮನವಿ ಮಾಡಿದರು.

52 ವರ್ಷದ ಕೆ ಆರ್ಮ್‌ಸ್ಟ್ರಾಂಗ್‌ ಅವರು ಚೆನ್ನೈನ ತಮ್ಮ ನಿವಾಸದ ಎದುರು ಶುಕ್ರವಾರ ಸಂಜೆ ಅಪರಿಚಿತರಿಂದ ಭೀಕರವಾಗಿ ಹತ್ಯೆಗೀಡಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...