ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಯೂಟ್ಯೂಬರ್‌ಗೆ 50 ಲಕ್ಷ ರೂ. ದಂಡ

Date:

ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ ಪ್ರಕಟಿಸಿದ ಯೂಟ್ಯೂಬರ್‌ ಒಬ್ಬರಿಗೆ ಮದ್ರಾಸ್ ಹೈಕೋರ್ಟ್ 50 ಲಕ್ಷ ರೂ. ದಂಡ ವಿಧಿಸಿದೆ.

ಯೂಟ್ಯೂಬರ್ ಜಿಯೋ ಮೈಕಲ್ ಎಂಬಾತ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಕಾರ್ಯಕರ್ತೆಯೂ ಆಗಿರುವ ಲಿಂಗತ್ವ ಅಲ್ಪಸಂಖ್ಯಾತರಾದ ಅಪ್ಸರಾ ರೆಡ್ಡಿ ವಿರುದ್ಧ ಆಕ್ಷೇಪಾರ್ಹ ವಿಡಿಯೋಗಳನ್ನು ಪೋಸ್ಟ್‌ ಮಾಡಿದ್ದಕ್ಕಾಗಿ ನ್ಯಾಯಮೂರ್ತಿ ಎನ್‌ ಸತೀಶ್ ಕುಮಾರ್ ನೇತೃತ್ವದ ಏಕ ಸದಸ್ಯ ಪೀಠ ದಂಡ ವಿಧಿಸಿ ತೀರ್ಪು ನೀಡಿದೆ.

ಅಪ್ಸರಾ ರೆಡ್ಡಿ ಅವರು ಸೆಲೆಬ್ರಿಟಿ ಭಾಷಣಕಾರರು, ಪತ್ರಕರ್ತೆ ಹಾಗೂ ಎಐಎಡಿಎಂಕೆ ವಕ್ತಾರರು ಆಗಿದ್ದಾರೆ. ಯೂಟ್ಯೂಬರ್‌ ಜಿಯೋ ಮೈಕಲ್ ಪದೇಪದೆ ತಮ್ಮ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಪ್ರಕಟಿಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವಾರದಲ್ಲಿ ಈ ತೀರ್ಪು ಪ್ರಕಟವಾಗಿದ್ದು, ಸ್ವತಃ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎನ್ ಸತೀಶ್ ಕುಮಾರ್ ಅವರು ಅಪ್ಸರಾ ವಿರುದ್ಧ ಯೂಟ್ಯೂಬ್‌ನಲ್ಲಿ ಪ್ರಕಟವಾಗಿರುವ ಹಲವು ವಿಡಿಯೋಗಳು ಹಾಗೂ ಪೋಸ್ಟ್‌ಗಳನ್ನು ವೀಕ್ಷಿಸಿ ಆಕ್ಷೇಪಾರ್ಹ ಸಂಗತಿಗಳಿರುವುದನ್ನು ಗಮನಿಸಿದರು. ಅಲ್ಲದೆ ಆರೋಪಿಯು ಸತ್ಯವನ್ನು ಪರಿಶೀಲನೆಗೊಳಪಡಿಸದೆ ಯುಟ್ಯೂಬ್‌ನಲ್ಲಿ ಪೋಸ್ಟ್‌ ಮಾಡಿರುವುದನ್ನು ಕಂಡುಕೊಂಡರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂದು ಪಕೋಡ, ಇಂದು ಶ್ರೀರಾಮ ಭಜನೆ; ನಿರುದ್ಯೋಗ ನಿವಾರಣೆಯಾಯಿತೇ?

“ಆಕ್ಷೇಪಾರ್ಹ ವಿಡಿಯೋಗಳು ಅರ್ಜಿದಾರರನ್ನು ದುರುದ್ದೇಶಪೂರ್ವಕ ಹಾಗೂ ಮಾನಹಾನಿಗೊಳಿಸುವುದನ್ನು ಬಿಟ್ಟರೆ ಬೇರೆ ಯಾವುದೇ ವಿಷಯವಿಲ್ಲ. ಪೋಸ್ಟ್ ಪ್ರಕಟ ಮಾಡುವ ಸಂದರ್ಭದಲ್ಲಿ ಆರೋಪಿ ಇತತರ ಖಾಸಗಿ ಜೀವನದಲ್ಲಿ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ. ಪ್ರಕಟ ಮಾಡುವುದು ಒಂದು ಹಕ್ಕು ಆದರೂ, ಕೆಲವೊಂದು ವಿಷಯಗಳಲ್ಲಿ ನಿರ್ಬಂಧಗಳು ಒಳಗೊಂಡಿರುತ್ತವೆ. ಅಲ್ಲದೆ ಖಾಸಗಿ ವಿಚಾರದಲ್ಲಿ ತನ್ನ ಗಡಿಯನ್ನು ದಾಟಬಾರದು. ನಿರ್ದಿಷ್ಟವಾಗಿ ಯೂಟ್ಯೂಬ್‌ನಂಥ ಸಾಮಾಜಿಕ ಮಾಧ್ಯಮಗಳಲ್ಲಿ ನಡವಳಿಕೆ, ವರ್ತನೆ ಹಾಗೂ ಖಾಸಗಿ ವಿಚಾರಗಳಂಥ ಇಂತಹ ವಿಷಯಗಳು ಕಾಣಿಸಿಕೊಂಡಾಗ ನಿರ್ದಿಷ್ಟ ಸಮುದಾಯದ ಮೇಲೆ ಗಂಭೀರ ಪರಿಣಾಮ ಉಂಟು ಮಾಡುತ್ತದೆ. ಆದ ಕಾರಣ ಇದು ಮಾನಹಾನಿಯೆಂದು ಕೋರ್ಟ್ ಪರಿಗಣಿಸಿದ್ದು, ಮಾನನಷ್ಟವನ್ನು ತುಂಬಿಕೊಡುವ ಸಲುವಾಗಿ ಆರೋಪಿಗೆ ದಂಡ ವಿಧಿಸಿದೆ” ಎಂದು ನ್ಯಾಯಾಧೀಶರು ತಿಳಿಸಿದರು.

ಸಮಾಜದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯ ಎದುರಿಸುತ್ತಿರುವ ತೊಂದರೆಗಳು ಮತ್ತು ಕಷ್ಟಗಳನ್ನು ಪ್ರಸ್ತಾಪಿಸಿದ ನ್ಯಾಯಮೂರ್ತಿಗಳು ಇಂತಹ ಘಟನೆಗಳು ಮತ್ತೆ ಮರುಕಳುಸದಂತೆ ಸೂಚಿಸಿದರು. ಅಲ್ಲದೇ ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳಿಗೆ ಧಕ್ಕೆಯಾಗದಂತೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಗೌರವಯುತವಾದ ಪೋಸ್ಟ್ ಮಾಡುವಂತೆ, ತನ್ನ ಬಳಕೆದಾರರಿಗೆ ನಿರ್ದೇಶನ ನೀಡುವಂತೆ ಹಾಗೂ ಮಾರ್ಗದರ್ಶನ ಮಾಡುವಂತೆ ಗೂಗಲ್ ಮತ್ತು ಯೂಟ್ಯೂಬ್‌ಗೆ ಸಹ ನಿರ್ದೇಶನ ನೀಡಿದೆ.

ಅಪ್ಸರಾ ಅವರು 1.25 ಕೋಟಿ ರೂ. ಪರಿಹಾರಕ್ಕಾಗಿ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು. ಆದರೆ ಕೋರ್ಟ್ ವಾದವಿವಾದಗಳನ್ನು ಪರಿಗಣಿಸಿ 50 ಲಕ್ಷ ರೂ. ದಂಡ ವಿಧಿಸಿತು. ಅಲ್ಲದೆ ಪ್ರಕಟಿಸಲಾಗಿದ್ದ ಎಲ್ಲ ಪೋಸ್ಟ್‌ಗಳನ್ನು ಅಳಿಸಿಹಾಕುವಂತೆ ಆದೇಶಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...