ಕ್ರೈಸ್ತರ ವಿರುದ್ಧ ದ್ವೇಷ ಭಾಷಣ: ಅಣ್ಣಾಮಲೈ ವಿರುದ್ಧ ಪ್ರಕರಣ ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

Date:

ಕ್ರೈಸ್ತ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿದ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ.

ಯೂಟ್ಯೂಬ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಣ್ಣಾಮಲೈ, ದೀಪಾವಳಿ ಸಂದರ್ಭದಲ್ಲಿ ಪಟಾಕಿಗಳನ್ನು ನಿಷೇಧಿಸಬೇಕೆಂದು ಸುಪ್ರೀಂ ಕೋರ್ಟ್ ನಿಷೆಧಿಸುವುದಕ್ಕೆ ಮುನ್ನ ಕ್ರೈಸ್ತ ಮಿಷಿನರಿ ನಡೆಸುತ್ತಿರುವ ಸರ್ಕಾರೇತರ ಸಂಸ್ಥೆ ಅರ್ಜಿ ಸಲ್ಲಿಸಿತ್ತು ಎಂದು ಹೇಳಿದ್ದರು.

ನ್ಯಾಯಮೂರ್ತಿ ಎನ್‌ ಆನಂದ್ ವೆಂಕಟೇಶ್ ಅವರು ಪ್ರಕರಣ ರದ್ದುಗೊಳಿಸುವ ಅರ್ಜಿಯನ್ನು ವಜಾಗೊಳಿಸಿ ಸೇಲಂನ ನ್ಯಾಯಾಂಗ ಮ್ಯಾಜಿಸ್ಟ್ರೇಟರಿಗೆ ಹೈಕೋರ್ಟ್ ವಿಷಯಗಳಿಂದ ಪ್ರಭಾವಿತರಾಗದೆ ವಿಚಾರಣೆ ನಡೆಸುವಂತೆ ನಿರ್ದೇಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಣ್ಣಾಮಲೈ ವಿಷಯವು ಬೇರೆ ಪ್ರಕರಣದಂತಲ್ಲ ಅಧಿಕಾರ ಹಾಗೂ ಪ್ರಭಾವದ ಹುದ್ದೆ ಹೊಂದಿರುವವರು ನೆನಪಿನಲ್ಲಿ ಇಟ್ಟುಕೊಂಡು ಮಾತನಾಡಬೇಕು. ಪ್ರಭಾವ ಹೊಂದಿರುವ ಹಿಂದೂ ಸಮುದಾಯದ ಇವರು ಬೇರೆ ಸಮುದಾಯದ ಮೇಲೆ ಮಾತನಾಡುವ ಭಾಷೆಯು ಈ ದೇಶದ ನಾಗರಿಕರ ಮೇಲೆ ವಿಸ್ತಾರವಾಗಿ ತಲುಪುವುದಲ್ಲದೆ ಗಂಭೀರ ಪರಿಣಾಮ ಬೀರುತ್ತದೆ. ಬಹು ಸಂಖ್ಯಾತ ಸಮುದಾಯಕ್ಕೆ ಅವರು ಮಾಡಿದ ಭಾಷಣವು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸಂಸ್ಕೃತಿಯನ್ನು ನಾಶಗೊಳಿಸಲು ಪ್ರಯತ್ನಿಸಿದೆ ಎಂದು ನ್ಯಾಯಮೂರ್ತಿ ವೆಂಕಟೇಶ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಸಿಗೆ ಬೇಗ ಬಂದಿದೆ; ಜೀವಜಲಕ್ಕೆ ತತ್ವಾರ ತಂದಿದೆ

ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಅಣ್ಣಾಮಲೈ ಅವರು ಉದ್ದೇಶಪೂರ್ವಕವಾಗಿ ಹಾಗೂ ಅನುಕೂಲಕರವಾಗಿ ಕೋಮು ದ್ವೇಷದ ಅಸ್ತ್ರವಾಗಿ ಬಳಸಿಕೊಂಡರು ಎಂದು ಕೋರ್ಟ್ ಈ ಸಂದರ್ಭದಲ್ಲಿ ತಿಳಿಸಿತು.

ಸಾಮಾಜಿಕ ಕಾರ್ಯಕರ್ತರಾದ ವಿ ಪಿಯೂಶ್ ಅವರು 2022ರ ಅಕ್ಟೋಬರ್‌ 22ರಂದು ಯೂಟ್ಯೂಬ್‌ ಚಾನಲ್‌ನಲ್ಲಿ ಮಾಡಿದ ಕ್ರೈಸ್ತ ಸಮುದಾಯದ ವಿರುದ್ಧ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಸೇಲಂ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

ಸೇಲಂ ಕೋರ್ಟ್ ಸಮನ್ಸ್ ನೀಡಿದ ಹಿನ್ನೆಲೆ ಅಣ್ಣಾಮಲೈ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಕೀಲ ಸಿ ವಿ ಶ್ಯಾಮ್‌ ಸುಂದರ್‌ ಅಣ್ಣಾಮಲೈ ಪರವಾಗಿ ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...