ಜಮ್ಮು ಮತ್ತು ಕಾಶ್ಮೀರ | 5.4 ತೀವ್ರತೆಯ ಭೂಕಂಪ, ದೆಹಲಿ ಸೇರಿ ಉತ್ತರ ಭಾರತದ ಹಲವೆಡೆ ಕಂಪಿಸಿದ ಭೂಮಿ

Date:

  • ಜಮ್ಮು ಮತ್ತು ಕಾಶ್ಮೀರ ರಾಜ್ಯದ ದೋಡಾದಲ್ಲಿ ನಡುಗಿದ ಭೂಮಿ
  • ಹಿಮಾಚಲ ಪ್ರದೇಶ, ಚಂಡೀಗಢ, ಪಂಜಾಬ್‌ನಲ್ಲಿ ಕಂಪನ ಅನುಭವ

ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಮಂಗಳವಾರ (ಜೂನ್‌ 13) 5.4 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿ ಹಾಗೂ ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಮಿ ನಡುಗಿದ ಅನುಭವವಾಗಿದೆ ಎಂದು ವರದಿಯಾಗಿದೆ.

ಕಂಪನದ ಕೇಂದ್ರ ಬಿಂದು ಜಮ್ಮು-ಕಾಶ್ಮೀರದ ದೋಡಾದಲ್ಲಿ ಪತ್ತೆಯಾಗಿದೆ. ಯಾವುದೇ ರೀತಿಯ ಹಾನಿ ಉಂಟಾಗಿಲ್ಲ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

“ಮಧ್ಯಾಹ್ನ 1.33ರ ಸುಮಾರಿಗೆ ಭೂಮಿಯು ನಡುಗಿದ ಅನುಭವವಾಗಿದ್ದು ಜಮ್ಮು ಮತ್ತು ಕಾಶ್ಮೀರದ ರಾಜ್ಯದ ದೋಡಾ ಜಿಲ್ಲೆಯ ಗಂಡೋ ಭಲೆಸ್ಸಾ ಗ್ರಾಮದಲ್ಲಿ ಅದರ ಬಿಂದು ಕಂಡು ಬಂದಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೂಮಿ ಕಂಪನದಿಂದ ಶಾಲೆಗಳಲ್ಲಿ ಮಕ್ಕಳನ್ನು ಭಯಭೀತರನ್ನಾಗಿಸಿತು. ಅಂಗಡಿ, ಮನೆಗಳಲ್ಲಿ ಇದ್ದವರು ಹೊರಗೆ ಓಡಿ ಬಂದರು ಎಂದು ಮಾಧ್ಯಮಗಳು ವರದಿ ಮಾಡಿವೆ.

“ಮಧ್ಯಾಹ್ನ ಭೂಮಿ ನಡುಕದ ಅನುಭವವಾಯಿತು. ಕೂಡಲೇ ನಾವು ಮನೆಯಿಂದ ಓಡಿ ಬಂದೆವು” ಎಂದು ಶ್ರೀನಗರದ ಸ್ಥಳೀಯ ನಿವಾಸಿ ಬಶೀರ್ ಹೇಳಿದ್ದಾರೆ.

“ಹಿಮಾಚಲ ಪ್ರದೇಶ, ಚಂಡೀಗಢ, ಪಂಜಾಬ್‌ ಮತ್ತು ಹತ್ತಿರದ ಪ್ರದೇಶಗಳಲ್ಲಿಯೂ ಭೂಮಿ ಕಂಪಿಸಿದೆ. ಇದು ಲಘು ಪ್ರಮಾಣದ ಕಂಪನವಾಗಿದೆ” ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ನಿರ್ದೇಶಕ ಡಾ.ಒ.ಪಿ. ಮಿಶ್ರಾ ಹೇಳಿದರು.

ಭೂಕಂಪ ಕೇಂದ್ರವು ಈ ಬಗ್ಗೆ ಟ್ವೀಟ್‌ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಬೆಲೆ ಹೆಚ್ಚಳ: ಗೋಧಿ ದಾಸ್ತಾನಿಗೆ ಮಿತಿ ಹೇರಿದ ಕೇಂದ್ರ ಸರ್ಕಾರ

ಜಮ್ಮು ಮತ್ತು ಕಾಶ್ಮೀರ ರಾಜ್ಯದಿಂದ ಆಗ್ನೇಯಕ್ಕೆ 30 ಕಿ.ಮೀ ದೂರದ ಕಿಶ್ತ್ವಾರ ಬಳಿ ಭೂಕಂಪ ಉಂಟಾಗಿದೆ ಎಂದು ಐರೋಪ್ಯ ಮೆಡಿಟರೇನಿಯನ್‌ ಭೂಕಂಪ ಕೇಂದ್ರ ತಿಳಿಸಿದೆ.

ಭೂಕಂಪವು 60 ಕಿ.ಮೀ (37.28 ಮೈಲು) ಆಳದಲ್ಲಿತ್ತು. ಇದರ ಕೇಂದ್ರಬಿಂದು ಪಠಾಣ್ಕೊಟ್‌ನಿಂದ ಉತ್ತರಕ್ಕೆ 99 ಕಿ.ಮೀ ದೂರದಲ್ಲಿತ್ತು ಎಂದು ಕೇಂದ್ರ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...