ದೆಹಲಿಯಲ್ಲಿ ತೀವ್ರವಾಗಿ ಕಂಪಿಸಿದ ಭೂಮಿ: ಜನರ ಆತಂಕ

Date:

ದೆಹಲಿ ಎನ್‌ಸಿಆರ್‌ ಪ್ರದೇಶದಲ್ಲಿ 4.6 ತೀವ್ರತೆಯಲ್ಲಿ ಪ್ರಬಲವಾಗಿ ಭೂಮಿ ಕಂಪಿಸಿದ್ದು, ಜನರು ಆತಂಕಗೊಂಡಿದ್ದಾರೆ.

ಭೂಮಿ ಕಂಪಿಸುತ್ತಿದ್ದಂತೆ ಜನರು ಭಯಭೀತರಾಗಿ ಓಡಿದ್ದಾರೆ. ಪ್ರಾಥಮಿಕ ಅಂಕಿಅಂಶಗಳ ಪ್ರಕಾರ, ಭೂಕಂಪದ ಕೇಂದ್ರಬಿಂದು ನೇಪಾಳದಲ್ಲಿ 5 ಕಿಮೀ ದೂರದಲ್ಲಿದೆ ಎಂದು ಕಂಡುಬಂದಿದೆ.

ಭೂಮಿಯು ಕಂಪಿಸಿದ ಹಿನ್ನೆಲೆಯಲ್ಲಿ ಕಚೇರಿಗಳಲ್ಲಿ ಹಾಗೂ ಮನೆಗಳಲ್ಲಿದ್ದ ಜನರು ಆಚೆಗೆ ಓಡಿ ಬಂದಿದ್ದಾರೆ. ದೆಹಲಿ ಮಾತ್ರವಲ್ಲದೆ ಪಂಜಾಬ್‌, ಹರಿಯಾಣ, ಛತ್ತೀಸ್‌ಗಢದ ಕೆಲ ಭಾಗಗಳಲ್ಲಿಯೂ ಭಕಂಪವಾಗಿದೆ. ಅಲ್ಲದೆ ಉತ್ತರ ಪ್ರದೇಶದ ನೋಯ್ಡಾದಲ್ಲೂ ಕಂಪನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಪ್ರದೇಶದ ನೋಯ್ಡಾ ಸೆಕ್ಟರ್ 75 ರ ಭೂಕಂಪನದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದ ಇತರ ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ.

ಈ ಸುದ್ದಿ ಓದಿದ್ದೀರಾ? ಅಮೆರಿಕ | ಅಕ್ಟೋಬರ್ 14 ರಂದು ಮೇರಿಲ್ಯಾಂಡ್‌ನಲ್ಲಿ ಡಾ. ಬಿ ಆರ್ ಅಂಬೇಡ್ಕರ್‌ರ ಬೃಹತ್ ಪುತ್ಥಳಿ ಅನಾವರಣ

ಉತ್ತರ ಪ್ರದೇಶದ ಲಖನೌ, ಹಾಪುರ್ ಮತ್ತು ಅಮ್ರೋಹಾದಲ್ಲಿಯೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪನದ ಅನುಭವವಾದ ತಕ್ಷಣ ಜನರು ಕಟ್ಟಡಗಳಿಂದ ಹೊರಗೆ ಬಂದು ನಿಂತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಕಂಡುಬಂದಿದೆ.

ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ದೆಹಲಿ ಪೊಲೀಸರು, “ನಾಗರಿಕರೆ, ನೀವೆಲ್ಲರೂ ಸುರಕ್ಷಿತವಾಗಿರುತ್ತೀರಿ ಎಂದು ನಾವು ಭಾವಿಸುತ್ತೇವೆ. ದಯವಿಟ್ಟು ನಿಮ್ಮ ಕಟ್ಟಡಗಳಿಂದ ಸುರಕ್ಷಿತ ಸ್ಥಳಕ್ಕೆ ಬನ್ನಿ. ಆದರೆ ಭಯಪಡಬೇಡಿ. ಎಲಿವೇಟರ್‌ಗಳನ್ನು ಬಳಸಬೇಡಿ! ಯಾವುದೇ ತುರ್ತು ಸಹಾಯಕ್ಕಾಗಿ, 112 ಅನ್ನು ಡಯಲ್ ಮಾಡಿ” ಎಂದಿದ್ದಾರೆ.

ಭಾನುವಾರ, ಹರ್ಯಾಣದ ಕೆಲವು ಭಾಗಗಳಲ್ಲಿ ಲಘು ಭೂಕಂಪನ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭಾನುವಾರ ರಾತ್ರಿ 11.26 ಕ್ಕೆ 2.6 ತೀವ್ರತೆಯಲ್ಲಿ ಭೂಕಂಪಿಸಿದೆ. ಈ ಭೂಕಂಪನದ ಕೇಂದ್ರಬಿಂದು ಹರ್ಯಾಣದ ರೋಹ್ಟಕ್‌ನ ಪೂರ್ವ ಆಗ್ನೇಯದ 7 ಕಿಮೀ ದೂರದಲ್ಲಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...