ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ, ಬ್ಯಾಕ್ಟೀರಿಯಾಮಯ: ಮಾಲಿನ್ಯ ನಿಯಂತ್ರಣ ಮಂಡಳಿ

Date:

ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ನ ಹಲವು ಕಡೆಗಳಲ್ಲಿ ನದಿ ನೀರು ಸ್ನಾನ ಮಾಡಲು ಯೋಗ್ಯವಾಗಿಲ್ಲ. ಗಂಗಾ ನದಿಯಲ್ಲಿ ಫೀಕಲ್ ಕೋಲಿಫಾರ್ಮ್ (faecal coliform) ಬ್ಯಾಕ್ಟೀರಿಯಾ ಅಧಿಕವಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮೂಲಕ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ತಿಳಿಸಿದೆ.

ವಿವಿಧ ಸ್ಥಳಗಳಲ್ಲಿ ಫೀಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾ ಅಧಿಕವಾಗಿರುವುದರಿಂದ ಈ ನೀರು ಸ್ನಾನ ಮಾಡಲು ಯೋಗ್ಯವಾಗಿಲ್ಲ ಎಂದು ವರದಿ ಹೇಳಿದೆ.

ಇದನ್ನು ಓದಿದ್ದೀರಾ? ಮಹಾ ಕುಂಭಮೇಳ ಕಾಲ್ತುಳಿತ | ಈವರೆಗೆ ಮೃತರ ನಿಖರ ಸಂಖ್ಯೆ ಯಾಕೆ ಬಹಿರಂಗಪಡಿಸಿಲ್ಲ: ಅಖಿಲೇಶ್ ಪ್ರಶ್ನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಳಚೆಯನ್ನು ಪ್ರಯಾಗ್‌ರಾಜ್‌ನಲ್ಲಿ ಗಂಗಾ ಮತ್ತು ಯಮುನಾ ನದಿಗೆ ಬಿಡುವುದನ್ನು ತಡೆಯಲು ಒತ್ತಾಯಿಸಿ ಸಲ್ಲಿಸಲಾದ ಅರ್ಜಿಯನ್ನು ಎನ್‌ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ, ನ್ಯಾಯಿಕ ಸದಸ್ಯ ಸುದೀರ್ ಅಗರ್ವಾಲ್ ಮತ್ತು ತಜ್ಞ ಎ ಸೆಂಥಿಲ್ ವೇಲ್ ಅವರ ಪೀಠವು ಆಲಿಸಿದೆ. ನದಿಯಲ್ಲಿ ಕೊಳಚೆ ನೀರು ಬಿಡಲಾಗುತ್ತಿದೆ ಎಂಬುದಕ್ಕೆ ಸಂಬಂಧಿಸಿದ ವರದಿಯನ್ನು ಸಿಪಿಸಿಬಿ ಫೆಬ್ರವರಿ 3ರಂದು ಸಲ್ಲಿಸಿದೆ ಎಂಬುದನ್ನು ಪೀಠ ಗಮನಿಸಿದೆ.

“ಪ್ರಯಾಗ್‌ರಾಜ್‌ನಲ್ಲಿ ಹಲವು ಸ್ಥಳಗಳಲ್ಲಿ ನದಿ ನೀರು ಸ್ನಾನ ಮಾಡಲು ಯೋಗ್ಯವಾಗಿಲ್ಲ. ಮಹಾ ಕುಂಭಮೇಳದ ಸಂದರ್ಭದಲ್ಲಿ, ಪವಿತ್ರ ಸ್ನಾನದ ಸಂದರ್ಭದಲ್ಲಿ ಹಲವು ಮಂದಿ ಪ್ರಯಾಗ್‌ರಾಜ್‌ನಲ್ಲಿ ಸ್ನಾನ ಮಾಡಿದ್ದಾರೆ. ಇದರಿಂದಾಗಿ ಫೀಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾ ಇನ್ನಷ್ಟು ಹೆಚ್ಚಾಗುತ್ತದೆ” ಎಂದು ವರದಿ ಹೇಳಿದೆ.

ಇನ್ನು ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರ ಮಂಡಳಿಗೆ (ಯುಪಿಪಿಸಿಬಿ) ತಿಳಿಸಿದ್ದರೂ ಯಾವುದೇ ಅಗತ್ಯ ಕ್ರಮವನ್ನು ಕೈಗೊಂಡಿಲ್ಲ. ಬದಲಾಗಿ ಕೆಲವು ಪ್ರದೇಶಗಳ ನೀರಿನ ಪರೀಕ್ಷೆ ನಡೆಸಿ ಪತ್ರ ಬರೆದಿದೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಾ ಕುಂಭಮೇಳವೆಂಬ ಸನಾತನ ಗರ್ವ, ಕಾಲ್ತುಳಿತದ ಪರ್ವ

“2025ರ ಜನವರಿ 28ರಂದು ಯುಪಿಪಿಸಿಬಿ ಕಳುಹಿಸಿದ ಪತ್ರದಲ್ಲಿರುವ ದಾಖಲೆಗಳಲ್ಲಿಯೂ ಕೆಲವು ಕಡೆಗಳಲ್ಲಿ ಬ್ಯಾಕ್ಟೀರಿಯಾ ಅಧಿಕವಾಗಿರುವುದು ಕಂಡುಬಂದಿದೆ” ಎಂದು ಪೀಠ ಹೇಳಿದೆ. ಇವೆಲ್ಲವುದರ ನಡುವೆ 1.5 ಲಕ್ಷ ಶೌಚಾಲಯದ ನೀರನ್ನು ನದಿಗೆ ಬಿಡಲಾಗುತ್ತಿಲ್ಲ ಎಂದು ಮಹಾ ಕುಂಭಮೇಳ ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ನದಿ ನೀರು ಸ್ನಾನ ಮಾಡಲು ಯೋಗ್ಯವಾಗಿಲ್ಲ ಎಂಬ ವರದಿ ಬಹಿರಂಗವಾಗುವ ಮುನ್ನವೇ ನಡೆದಿರುವ ಮಹಾ ಕುಂಭಮೇಳದಲ್ಲಿ ಲಕ್ಷಾಂತರ ಮಂದಿ ಪವಿತ್ರ ಸ್ನಾನ ಮಾಡಿದ್ದಾರೆ. ಕಲುಷಿತವಾದ ನೀರಿನಿಂದ ಜನರಿಗೆ ಚರ್ಮ ರೋಗಗಳು ಕಾಡಬಹುದು ಎಂದು ಹಲವು ತಜ್ಞರ ಅಭಿಪ್ರಾಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...