ಮಹಾ ಕುಂಭಮೇಳ ಕಾಲ್ತುಳಿತ | ಕೇಂದ್ರ, ಯೋಗಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Date:

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಉಂಟಾಗಿದ್ದು ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ಸರಿಯಾದ ವ್ಯವಸ್ಥೆಯನ್ನು ಮಾಡದ ಕೇಂದ್ರ ಸರ್ಕಾರ ಮತ್ತು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಬುಧವಾರ ಮಹಾ ಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆ ಸ್ನಾನ ಜರುಗಲಿತ್ತು. ಆದರೆ ಭಕ್ತರ ಸಂಖ್ಯೆ ಹೆಚ್ಚಳವಾಗಿ ಕಾಲ್ತುಳಿತದಂತಹ ಸ್ಥಿತಿ ಉಂಟಾದ ಕಾರಣ ಈ ಅಮೃತ ಸ್ನಾನವನ್ನು ಅಖಾರಗಳು ರದ್ದು ಮಾಡಿದ್ದಾರೆ. ಆದರೆ ಕಾಲ್ತುಳಿತದಿಂದಾಗಿ ಹಲವು ಮಂದಿ ಗಾಯಗೊಂಡಿದ್ದು, ಸಾವುಗಳೂ ಸಂಭವಿಸಿದೆ.

ಇದನ್ನು ಓದಿದ್ದೀರಾ? ಮಹಾ ಕುಂಭಮೇಳ | ವಿವಾದಕ್ಕೆ ತಿರುಗಿದ ಖರ್ಗೆ ಹೇಳಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆನ್ನಲ್ಲೇ ಕಾಂಗ್ರೆಸ್ ಮಹಾ ಕುಂಭಮೇಳದ ನಿರ್ವಹಣೆಯನ್ನು ಯೋಗಿ ಸರ್ಕಾರದ ಬದಲಾಗಿ ಉತ್ತಮ ನಿರ್ವಹಣಾಕಾರರಿಗೆ ನೀಡುವಂತೆ ಒತ್ತಾಯಿಸಿದೆ. ಹಾಗೆಯೇ ವಿವಿಐಪಿಗಳ ಆಗಮನಕ್ಕೆ ನಿರ್ಬಂಧ ವಿಧಿಸುವಂತೆ ಆಗ್ರಹಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಮಹಾ ಕುಂಭಮೇಳದ ತ್ರೀವೇಣಿ ಸಂಗಮದಲ್ಲಿ ಕಾಲ್ತುಳಿತದಿಂದಾಗಿ ಹಲವು ಮಂದಿ ಸಾವನ್ನಪ್ಪಿರುವುದು, ಹಲವರಿಗೆ ಗಾಯವಾಗಿರುವ ಹೃದಯವಿದ್ರಾವಕ ಸುದ್ದಿ ತಿಳಿಯಿತು. ಭಕ್ತರ ಕುಟುಂಬಸ್ಥರಿಗೆ ನಮ್ಮ ತೀವ್ರ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ನಾವು ಪ್ರಾರ್ಥಿಸುತ್ತೇವೆ” ಎಂದು ಹೇಳಿದ್ದಾರೆ.

“ಕುಂಭಮೇಳದಲ್ಲಿ ಅಪೂರ್ಣ ವ್ಯವಸ್ಥೆ ಮಾಡಿರುವುದು, ವಿಐಪಿಗಳ ಓಡಾಟ, ವೈಯಕ್ತಿಕ ಪ್ರಚಾರಕ್ಕೆ ಹೆಚ್ಚು ಒತ್ತು ನೀಡುವುದು ಮತ್ತು ಸರಿಯಾಗಿ ನಿರ್ವಹಣೆ ಮಾಡದಿರುವುದೇ ಈ ಕಾಲ್ತುಳಿತಕ್ಕೆ ಕಾರಣವಾಗಿದೆ. ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದರೂ ಈ ರೀತಿ ಅಪೂರ್ಣ ವ್ಯವಸ್ಥೆ ಮಾಡಿರುವುದು ಖಂಡನಾರ್ಹ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: 10 ಸಾವು ಶಂಕೆ

“ಇನ್ನು ಹಲವು ಪ್ರಮುಖ ‘ಶಾಹಿ ಸ್ನಾನಗಳು’ ಬಾಕಿ ಉಳಿದಿದೆ. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ವ್ಯವಸ್ಥೆಯನ್ನು ಉತ್ತಮಗೊಳಿಸಿ ಇಂತಹ ಘಟನೆಗಳು ಮುಂದೆ ನಡೆಯದಂತೆ ನೋಡಿಕೊಳ್ಳಬೇಕು” ಎಂದು ಖರ್ಗೆ ಆಗ್ರಹಿಸಿದ್ದಾರೆ. ಹಾಗೆಯೇ ಸಂತ್ರಸ್ತರಿಗೆ ಸಾಧ್ಯವಾದ ಸಹಾಯ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಖರ್ಗೆ ಕರೆ ನೀಡಿದ್ದಾರೆ.

ಇನ್ನು ಕಾಂಗ್ರೆಸ್ ನಾಯಕ ಪವನ್ ಖೇರಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಮಹಾ ಕುಂಭಮೇಳದಲ್ಲಿ ಹಲವು ಭಕ್ತರ ಸಾವು ತೀವ್ರ ದುಃಖಕರವಾದುದ್ದು. ಸರಿಯಾದ ವ್ಯವಸ್ಥೆಯನ್ನು ಮಾಡದಿರುವುದೇ ಈ ಕಾಲ್ತುಳಿತಕ್ಕೆ ಕಾರಣ” ಎಂದು ದೂರಿದ್ದಾರೆ. ಇನ್ನು ವಿಐಪಿಗಳಿಗೆ ಅವಕಾಶ ನೀಡಿರುವುದೇ ಇದಕ್ಕೆ ಕಾರಣ ಎಂದು ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...