ಮಹಾಲಕ್ಷ್ಮೀ ಕೊಲೆ ಪ್ರಕರಣ | ಶಂಕಿತ ಆರೋಪಿ ಮುಕ್ತಿರಂಜನ್ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

Date:

ಬೆಂಗಳೂರು ನಗರದ ವೈಯಾಲಿಕಾವಲ್‌ನಲ್ಲಿ ನಡೆದ ಮಹಾಲಕ್ಷ್ಮೀ ಕೊಲೆ ಪ್ರಕರಣದಲ್ಲಿ ಪ್ರಧಾನ ಶಂಕಿತ ಆರೋಪಿ ಮುಕ್ತಿರಂಜನ್ ರಾಯ್ ಒಡಿಶಾದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ.

ಬೆಂಗಳೂರಿನಲ್ಲಿ 29 ವರ್ಷದ ಯುವತಿಯನ್ನು ಕೊಂದು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ತುಂಬಲಾಗಿತ್ತು. ಈ ಕೃತ್ಯ ಎಸಗಿ ಊರಿಗೆ ಪರಾರಿಯಾಗಿದ್ದ ಶಂಕಿತ ಆರೋಪಿ ಒಡಿಶಾದ ಭದ್ರಕ್ ಪಟ್ಟಣದಲ್ಲಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಸೆಪ್ಟೆಂಬರ್ 21ರಂದು 29 ವರ್ಷದ ಮಹಾಲಕ್ಷ್ಮಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ಮುಕ್ತಿ ರಂಜನ್ ರಾಯ್ (30) ಎಂಬಾತನನ್ನು ಬಂಧಿಸಲು ಕರ್ನಾಟಕ ಪೊಲೀಸರು ಒಡಿಶಾದಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ ಆರೋಪಿ ಶವವಾಗಿ ಪತ್ತೆಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬೆಂಗಳೂರು | ಯುವತಿ ಮಹಾಲಕ್ಷ್ಮೀ ಕೊಲೆ ಪ್ರಕರಣ: ಆರೋಪಿಯ ಮಾಹಿತಿ ಲಭ್ಯ ಎಂದ ಕಮಿಷನರ್

ಇನ್ನು ಡೆತ್‌ನೋಟ್‌ ಕೂಡಾ ಪತ್ತೆಯಾಗಿದೆ ಎನ್ನಲಾಗಿದೆ. ಈ ಕೊಲೆಯನ್ನು ತಾನೇ ಮಾಡಿರುವುದಾಗಿ ಆರೋಪಿ ಮುಕ್ತಿ ರಂಜನ್ ರಾಯ್ ತಪ್ಪೊಪ್ಪಿಕೊಂಡಿರುವ ಡೆತ್‌ನೋಟ್ ಪತ್ತೆಯಾಗಿದೆ ಎಂದು ವರದಿಯಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಬೆಂಗಳೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಈ ಬಗ್ಗೆ ಟೈಮ್ಸ್‌ ಆಫ್‌ ಇಂಡಿಯಾಗೆ ಪ್ರತಿಕ್ರಿಯೆ ನೀಡಿದ ಭದ್ರಕ್ ಎಸ್‌ಪಿ ವರುಣ್ ಗುಂಟುಪಲ್ಲಿ, “ಬೆಂಗಳೂರಿನ ಕೊಲೆಗೆ ಸಂಬಂಧಿಸಿದಂತೆ ಬಂಧನಕ್ಕೆ ಹೆದರಿ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಂಡುಬಂದಿದೆ. ಬೆಂಗಳೂರು ಪೊಲೀಸರು ಕಳೆದ ಮೂರು ದಿನಗಳಿಂದ ಭದ್ರಕ್ ಮತ್ತು ಬಾಲಸೋರ್ ಜಿಲ್ಲೆಗಳಲ್ಲಿ ಶಂಕಿತ ಆರೋಪಿಯ ಶೋಧ ನಡೆಸುತ್ತಿದ್ದರು. ನಾವು ಅವರಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ನೀಡಿದ್ದೇವೆ” ಎಂದು ತಿಳಿಸಿದ್ದಾರೆ.

ವರದಿ ಪ್ರಕಾರ ಮುಕ್ತಿ ರಂಜನ್ ರಾಯ್ ಧುಸುರಿ ಪ್ರದೇಶದ ನಿವಾಸಿಯಾಗಿದ್ದು, ಬೆಂಗಳೂರಿನ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಈತ ಸೆಪ್ಟೆಂಬರ್ 24ರಂದು ಭದ್ರಕ್ ತಲುಪಿದ್ದ ಎಂದು ರಾಯ್ ಕುಟುಂಬ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...