ಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

Date:

ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಜಕೀಯ ವಿಶ್ಲೇಷಕ, ಹೋರಾಟಗಾರ ಯೋಗೇಂದ್ರ ಯಾದವ್ ಅವರ ಮೇಲೆ ಕೆಲವು ಪುಂಡರು ಹಲ್ಲೆ ನಡೆಸಿದ್ದಾರೆ. ಕಾರ್ಯಕ್ರಮದಲ್ಲಿ ಅವರು ಮಾತನಾಡದಂತೆ ತಡೆಯಲು 40-50 ಪುಂಡರ ಗುಂಪು ದಾಂಧಲೆ ನಡೆಸಿದೆ. ವೇದಿಕೆಯತ್ತ ನುಗ್ಗಿ ಯೋಗೇಂದ್ರ ಯಾದವ್ ಅವರನ್ನು ಎಳೆದಾಡಿದೆ.

ತಮ್ಮ ಮೇಲಿನ ಹಲ್ಲೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿಡುವ ಯಾದವ್, “ಕಾರ್ಯಕ್ರಮದಲ್ಲಿ ‘ಸಂವಿಧಾನ ರಕ್ಷಣೆ ಮತ್ತು ನಮ್ಮ ಮತ’ ಎಂಬ ಚರ್ಚೆ ನಡೆಯುತ್ತಿತ್ತು. ಈ ವೇಳೆ, ಭಾರತ್ ಜೋಡೋ ಅಭಿಯಾನದಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಮತ್ತು ನನ್ನ ಮೇಲೆ ಹಲ್ಲೆ ನಡೆದಿದೆ. ಪ್ರಜಾಪ್ರಭುತ್ವವನ್ನು ಪ್ರೀತಿಸುವವರ ಮೇಲೆ ಇಂತಹ ಹಲ್ಲೆಗಳು ನಡೆಯುತ್ತಲೇ ಇವೆ. ಪೊಲೀಸರ ಮಧ್ಯಪ್ರವೇಶಿಸಿದರೂ, ದಾಳಿಕೋರರು ತಮ್ಮ ವಿಧ್ವಂಸಕತೆಯನ್ನು ಮುಂದುವರೆಸಿದರು. ಪರಿಣಾಮ ಕಾರ್ಯಕ್ರಮವನ್ನು ರದ್ದುಗೊಳಿಸಬೇಕಾಯಿತು” ಎಂದು ತಿಳಿಸಿದ್ದಾರೆ.

”ಮಹಾರಾಷ್ಟ್ರಕ್ಕೆ ಕಳೆದ 25 ವರ್ಷಗಳಿಂದ ಆಗಾಗ್ಗೆ ಭೇಟಿ ನೀಡುತ್ತಿದ್ದೇವೆ. ಹಲವು ಕಾರ್ಯಕ್ರಮಗಳಲ್ಲಿ ಮಾತನಾಡಿದ್ದೇನೆ. ಇಂತಹ ಘಟನೆಯನ್ನು ಎಂದಿಗೂ ಎದುರಿಸಲಿಲ್ಲ. ಈ ಘಟನೆಯು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿವೆ. ಇಂತಹ ಘಟನೆಗಳು ನಮ್ಮ ಸಂಕಲ್ಪವನ್ನು ಬಲಪಡಿಸುತ್ತವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...