ಮಹಾರಾಷ್ಟ್ರ | ಅಜಿತ್ ಪವಾರ್ ಬಣದ ಎನ್‌ಸಿಪಿ ಮುಖಂಡ ಬಾಬಾ ಸಿದ್ದೀಕಿಗೆ ಗುಂಡಿಟ್ಟು ಹತ್ಯೆ

Date:

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ಸದಸ್ಯ ಬಾಬಾ ಸಿದ್ದೀಕಿಯ ಮೇಲೆ ಗುಂಡು ಹಾರಿಸಿ, ಹತ್ಯೆ ಮಾಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮುಂಬೈನ ಬಾಂದ್ರಾದಲ್ಲಿ ಈ ದಾಳಿ ನಡೆದಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಝೀಶಾನ್ ಅವರ ಕಚೇರಿಯ ಸಮೀಪ ಕಾರಿನಲ್ಲಿ ಕುಳಿತಿದ್ದ ವೇಳೆ ಶನಿವಾರ ರಾತ್ರಿ 9.30ರ ಸುಮಾರಿಗೆ ಸಿದ್ದೀಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ತಿಳಿದು ಬಂದಿದೆ. ಕೂಡಲೇ ಲೀಲಾವತಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತಾದರೂ, ಫಲ ನೀಡಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕ್ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಸಂಬಂಧ ಹೊಂದಿದ್ದರು ಮತ್ತು ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಶಾಸಕನಾಗಿದ್ದ ಝೀಶನ್ ಸಿದ್ದೀಕಿ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಕೂಡಲೇ ಕಾರ್ಯ ಪ್ರವೃತ್ತರಾದ ಮುಂಬೈ ಪೊಲೀಸರು ಇಬ್ಬರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.

ಬಾಬಾ ಸಿದ್ದೀಕಿ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆಯೇ ಬಾಲಿವುಡ್ ನಟರಾದ ಸಲ್ಮಾನ್ ಖಾನ್, ಸಂಜಯ್ ದತ್ ಸೇರಿದಂತೆ ಹಲವು ಪ್ರಮುಖರು ಧಾವಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...