ಮಹಾರಾಷ್ಟ್ರ | ಮಸೀದಿಯಲ್ಲಿ ಚಾಕು ಇರಿತ: ಕಾಂಗ್ರೆಸ್ ಹಿರಿಯ ನಾಯಕ ಹಿದಾಯತುಲ್ಲಾ ಪಟೇಲ್ ಸಾವು

Date:

ಅಕೋಲಾ ಜಿಲ್ಲೆಯ ಅಕೋಟ್ ತಾಲ್ಲೂಕಿನ ಮೊಹಲಾ ಗ್ರಾಮದಲ್ಲಿರುವ ಮಸೀದಿಯಲ್ಲಿ ಚಾಕುವಿನಿಂದ ಇರಿತಕ್ಕೊಳಗಾದ ಕಾಂಗ್ರೆಸ್‌ ನ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರ ಕಾಂಗ್ರೆಸ್ ಉಪಾಧ್ಯಕ್ಷ ಹಿದಾಯತುಲ್ಲಾ ಪಟೇಲ್ (66) ಅವರು ಚಿಕಿತ್ಸೆ ವೇಳೆ ಬುಧವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜನವರಿ 6ರಂದು ಮಧ್ಯಾಹ್ನ 1.30ರ ಸುಮಾರಿಗೆ ಪಟೇಲ್ ಅವರು ಮಸೀದಿಯಲ್ಲಿ ನಮಾಝ್ ಮುಗಿಸಿ ಹೊರಬರುತ್ತಿದ್ದ ವೇಳೆ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಆರೋಪಿಯು ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ದಾಳಿಯಲ್ಲಿ ಪಟೇಲ್ ಅವರ ಕುತ್ತಿಗೆ ಮತ್ತು ಎದೆ ಭಾಗಕ್ಕೆ ಗಂಭೀರ ಗಾಯಗಳಾಗಿ ತೀವ್ರ ರಕ್ತಸ್ರಾವ ಉಂಟಾಗಿತ್ತು ಎಂದು ತಿಳಿದು ಬಂದಿದೆ.

ಗಾಯಗೊಂಡ ಅವರನ್ನು ಸ್ಥಳೀಯರು ತಕ್ಷಣ ಅಕೋಟ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಟೇಲ್ ಅವರು ರಕ್ತದಲ್ಲಿ ತೊಯ್ದ ಬಟ್ಟೆಗಳೊಂದಿಗೆ ಮಸೀದಿಯಿಂದ ಹೊರಬರುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಸುಪ್ರೀಮ್’ ನೀಡಿದ ಎರಡು ವ್ಯತಿರಿಕ್ತ ತೀರ್ಪುಗಳು! ಅರವಿಂದ್‌ಗೆ ಒಂದು ನ್ಯಾಯ, ಉಮರ್‌ಗೆ ಮತ್ತೊಂದೇ?

ಘಟನೆಯ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಧಿವಿಜ್ಞಾನ ತಜ್ಞರ ನೆರವಿನಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಆರೋಪಿಯನ್ನು ಬಂಧಿಸಲು ಆರು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ತನಿಖೆಯ ವೇಳೆ 22 ವರ್ಷದ ಉಬೇದ್ ಖಾನ್ ಕಲು ಖಾನ್ ಅಲಿಯಾಸ್ ರಾಜಿಕ್ ಖಾನ್ ಪಟೇಲ್ ಎಂಬ ಆರೋಪಿಯನ್ನು ಅಕೋಟ್ ತಾಲ್ಲೂಕಿನ ಪಣಜ್ ಗ್ರಾಮದಿಂದ ರಾತ್ರಿ 8 ಗಂಟೆ ಸುಮಾರಿಗೆ ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ. ಚಂದ್ರಕಾಂತ್ ರೆಡ್ಡಿ ತಿಳಿಸಿದ್ದಾರೆ.

ಅಕೋಟ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...