ಮಹಾರಾಷ್ಟ್ರ | ಮುಂಬೈನಲ್ಲಿ ಅಗ್ನಿ ದುರಂತ; ಆರು ಮಂದಿ ಸಜೀವ ದಹನ

Date:

ಏಳು ಮಹಡಿಯ ಕಟ್ಟಡದಲ್ಲಿ ಶುಕ್ರವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ಆರು ಮಂದಿ ಜೀವಂತವಾಗಿ ಸುಟ್ಟು ಹೋಗಿರುವ ಹೃದಯವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈನ ಗೋರೆಗಾಂವ್‌ನ ಆಜಾದ್‌ ನಗರದಲ್ಲಿರುವ ಜಯ ಭವಾನಿ ಕಟ್ಟಡದಲ್ಲಿ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. 12 ಮಂದಿ ಪುರುಷರು ಹಾಗೂ ಅಪ್ರಾಪ್ತ ವಯಸ್ಸಿನ ಬಾಲಕಿ ಸೇರಿದಂತೆ 28 ಮಂದಿ ಮಹಿಳೆಯರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳದಲ್ಲಿಯೇ ಆರು ಮಂದಿ ಮೃತಪಟ್ಟಿದ್ದು, ಚಿಕಿತ್ಸೆ ವೇಳೆ ಮತ್ತೋರ್ವ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಂಬೈನ ಗೋರೆಗಾಂವ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವುಗಳು ಸಂಭವಿಸಿರುವ ಬಗ್ಗೆ ತಿಳಿದು ನೋವಾಗಿದೆ. ನಾವು ಮುಂಬೈ ಪಾಲಿಕೆ ಮತ್ತು ಮುಂಬೈ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಎಲ್ಲ ನೆರವು ನೀಡಲಾಗುತ್ತಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಮತ್ತು ಸಾಂತ್ವನಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ” ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಟ್ವೀಟ್ ಮಾಡಿದ್ದಾರೆ.

“ಅಗ್ನಿಶಾಮಕ ದಳವು ಸ್ಥಳಕ್ಕೆ ಬರುವ ಮುನ್ನವೇ ಬೆಂಕಿಯು ಕಡ್ಡಡದ ಎಲ್ಲ ಭಾಗಗಳಿಗೂ ಆವರಿಸಿತ್ತು. ನೆಲಮಹಡಿಯಲ್ಲಿದ್ದ ಅಂಗಡಿಗಳು, ಸ್ಕ್ರ್ಯಾಪ್ ವಸ್ತುಗಳು ಮತ್ತು ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ” ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...