ಮಹಾರಾಷ್ಟ್ರ | ಪಾಲ್ಘರ್‌ನಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು

Date:

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯಿಸರ್ ರೈಲು ನಿಲ್ದಾಣದ ಬಳಿ ಶನಿವಾರ ಗೂಡ್ಸ್ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೂಡ್ಸ್‌ ರೈಲು ಹಳಿ ತಪ್ಪಿರುವುದು ಯಾವುದೇ ಸ್ಥಳೀಯ ರೈಲುಗಳ ಪ್ರಯಾಣದ ಮೇಲೆ ಪರಿಣಾಮ ಬೀರಿಲ್ಲ ಎಂದು ಪಶ್ಚಿಮ ರೈಲ್ವೆಯ ಸಿಪಿಆರ್‌ಒ ತಿಳಿಸಿದ್ದಾರೆ.

“ಪಾಲ್ಘರ್‌ನ ಬೋಯಿಸರ್ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿವೆ. ರೈಲ್ವೆ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಗೂಡ್ಸ್ ರೈಲು ಹಳಿತಪ್ಪಿರುವುದು ಸ್ಥಳೀಯ ರೈಲುಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಅವುಗಳು ಸಮಯಕ್ಕೆ ಸರಿಯಾಗಿ ಸಂಚರಿಸುತ್ತಿದೆ” ಎಂದು ಪಶ್ಚಿಮ ರೈಲ್ವೆಯ ಸಿಪಿಆರ್‌ಒ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಜುಲೈ 26ರಂದು, ಒಡಿಶಾದ ಭುವನೇಶ್ವರ ರೈಲು ನಿಲ್ದಾಣದ ಬಳಿ ಅಂಗುಲ್‌ಗೆ ತೆರಳುತ್ತಿದ್ದ ಗೂಡ್ಸ್ ರೈಲಿನ ಎರಡು ಬೋಗಿಗಳು ಹಳಿತಪ್ಪಿದ್ದವು. ಜುಲೈ 22ರಂದು, ಪೂರ್ವ ರೈಲ್ವೆಯ ಪ್ರಕಾರ ರಾಣಾಘಾಟ್ ಯಾರ್ಡ್‌ನಲ್ಲಿ ಗೂಡ್ಸ್ ರೈಲಿನ ಹಿಂದಿನ ಬೋಗಿ ಹಳಿತಪ್ಪಿತ್ತು.

ಇದನ್ನು ಓದಿದ್ದೀರಾ?  ಬಿಹಾರ | ಹಳಿ ತಪ್ಪಿದ ಈಶಾನ್ಯ ಎಕ್ಸ್‌ಪ್ರೆಸ್ ರೈಲು; 4 ಸಾವು, 100 ಮಂದಿಗೆ ಗಾಯ

ಜುಲೈ 22ರಂದೇ ಅಲ್ವಾರ್ ಗೂಡ್ಸ್ ನಿಲ್ದಾಣದಿಂದ ರೇವಾರಿಗೆ ತೆರಳುತ್ತಿದ್ದ ಸರಕು ರೈಲು ಸರಿಸುಮಾರು 2:30 ಗಂಟೆಗೆ ಮಥುರಾ ಟ್ರ್ಯಾಕ್‌ನಲ್ಲಿ ಹಳಿತಪ್ಪಿತು. ಜುಲೈ 21ರಂದು, ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ರಾಣಾಘಾಟ್‌ನ ಗೂಡ್ಸ್ ಬೋಗಿ ಹಳಿತಪ್ಪಿತ್ತು.

ಜುಲೈ 21ರಂದು, ಅಲ್ವಾರ್ ಗೂಡ್ಸ್ ನಿಲ್ದಾಣದಿಂದ ರಾಜಸ್ಥಾನದ ರೇವಾರಿಗೆ ಸಾಗುತ್ತಿದ್ದ ಸರಕು ರೈಲು ಸರಿಸುಮಾರು 2:30ಕ್ಕೆ ಮಥುರಾ ಟ್ರ್ಯಾಕ್‌ನಲ್ಲಿ ಹಳಿತಪ್ಪಿತು. ಜುಲೈ 20ರಂದು, ಉತ್ತರ ಪ್ರದೇಶದ ಗಾಜಿಯಾಬಾದ್ ಮತ್ತು ಮೊರಾದಾಬಾದ್ ವಿಭಾಗಗಳ ನಡುವೆ ಗೂಡ್ಸ್ ರೈಲಿನ ಕನಿಷ್ಠ ಏಳು ಬೋಗಿಗಳು ಹಳಿತಪ್ಪಿದ್ದವು.

ನಿರಂತರವಾಗಿ ಇಂತಹ ರೈಲು ಅಪಘಾತಗಳು ನಡೆಯುತ್ತಿದ್ದರೂ ಸರ್ಕಾರ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  “ದಿನ ನಿತ್ಯ ರೈಲು ಅಪಘಾತಗಳು ನಡೆಯುತ್ತಿದೆ. ಆದರೆ ನಮ್ಮ ‘ರೀಲ್ ಮಿನಿಸ್ಟರ್’ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕವಿತೆ ಬರೆಯುವುದರಲ್ಲಿ ಸನ್ನದ್ಧರಾಗಿದ್ದಾರೆ” ಎಂದು ನೆಟ್ಟಿಗರೊಬ್ಬರು ಟೀಕಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...