ಮಧ್ಯಾಹ್ನದ ಬಿಸಿಯೂಟ | ಮೊಟ್ಟೆ, ಸಿಹಿಗೆ ಹಣ ನೀಡಲ್ಲ ಎಂದ ಮಹಾರಾಷ್ಟ್ರ ಸರ್ಕಾರ

Date:

ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ನೀಡಲಾಗುತ್ತಿದ್ದ ಮೊಟ್ಟೆ ಮತ್ತು ಸಿಹಿ ತಿನಿಸಿಗೆ ಈವರೆಗೆ ನೀಡುತ್ತಿದ್ದ ಹಣವನ್ನು ಇನ್ನು ಮುಂದೆ ನೀಡದಿರಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.

ಶಾಲೆಯ ಆಡಳಿತ ಮಂಡಳಿಯು ಬೇರೆ ಎಲ್ಲಿಂದಾದರೂ ನಿಧಿ ವ್ಯವಸ್ಥೆ ಮಾಡಿದರೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ, ಸಿಹಿ ತಿನಿಸು (ಪಾಯಸ ಅಥವಾ ರಾಗಿ) ನೀಡಬಹುದು ಎಂದು ಸರ್ಕಾರ ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನು ಓದಿದ್ದೀರಾ? ದಾವಣಗೆರೆ | ಬಿಸಿಯೂಟ ತಯಾರಕರ ಕನಿಷ್ಟ ವೇತನ ಜಾರಿಗೆ ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1995ರಲ್ಲಿ ಜಾರಿಯಾದ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಭಾಗವಾಗಿ ಮೊಟ್ಟೆ, ಬಾಳೆಹಣ್ಣು, ಮೊದಲಾದ ಪೌಷ್ಠಿಕಾಂಶಯುತ ಆಹಾರವನ್ನು ನೀಡಲಾಗುತ್ತದೆ. ಸರಿಸುಮಾರು 450 ಗ್ರಾಂ ಕ್ಯಾಲೋರಿ ಮತ್ತು 8ರಿಂದ 12 ಗ್ರಾಂ ಪ್ರೋಟಿನ್‌ಯುಕ್ತ ಆಹಾರವನ್ನು ಮಕ್ಕಳಿಗೆ ನೀಡಬೇಕು ಎಂಬುದು ಈ ಯೋಜನೆಯ ಉದ್ದೇಶವಾಗಿದೆ.

2023ರ ನವೆಂಬರ್‌ನಲ್ಲಿ ಮಹಾರಾಷ್ಟ್ರ ಸರ್ಕಾರವು ವಿದ್ಯಾರ್ಥಿಗಳಿಗೆ ಮೊಟ್ಟೆ ಪುಲಾವ್, ಮೊಟ್ಟೆ ಬಿರಿಯಾನಿ, ಬೇಯಿಸಿದ ಮೊಟ್ಟೆ ಮತ್ತು ಬಾಳೆಹಣ್ಣು ಅಥವಾ ಇತರೆ ಸ್ಥಳೀಯ ಹಣ್ಣುಗಳನ್ನು ಮಧ್ಯಾಹ್ನದ ಬಿಸಿಯೂಟದಲ್ಲಿ ನೀಡಲಾಗುವುದು ಎಂದು ಘೋಷಿಸಿತ್ತು. ಆದರೆ ಹಿಂದುತ್ವ ಸಂಘಟನೆಗಳು ಇದರ ವಿರುದ್ಧವಾಗಿ ಪ್ರತಿಭಟನೆ ನಡೆಸಿತ್ತು. ಕೆಲವು ಶಾಲೆಗಳಲ್ಲಿ ಶೇಕಡ 40ರಷ್ಟು ಪೋಷಕರು ಮೊಟ್ಟೆ ನೀಡುವುದನ್ನು ವಿರೋಧಿಸಿದರು.

ಇದನ್ನು ಓದಿದ್ದೀರಾ? ಮೊಟ್ಟೆ ಬೆಲೆ ಏರಿಕೆ; ಮಧ್ಯಾಹ್ನದ ಬಿಸಿಯೂಟಕ್ಕೆ ಬಜೆಟ್‌ ಕೊರತೆ

ಈ ಎಲ್ಲಾ ಬೆಳವಣಿಗೆ ಬಳಿಕ ಈಗ ಮಹಾಯುತಿ ಸರ್ಕಾರ ತನ್ನ ಆದೇಶದಿಂದ ತಾನೇ ನುಣುಚಿಕೊಳ್ಳುತ್ತಿದೆ. ಮೊಟ್ಟೆ ನೀಡಲಾಗದು ಎಂದು ನೇರವಾಗಿ ಹೇಳದೆ, ನಿಧಿ ನೀಡುವುದಿಲ್ಲ ಎಂದಿದೆ. ಭಾರತ ಪ್ರಜಾಪ್ರಭುತ್ವ ದೇಶ. ಪ್ರಜಾಪ್ರಭುತ್ವವು ಎಂದಿಗೂ ಬಹುಮತದ ಆಧಾರದಲ್ಲಿ ನಡೆಯುತ್ತದೆ. ಆದರೆ ಮೊಟ್ಟೆ ಬೇಕು ಎಂಬ ಶೇಕಡ 60ರಷ್ಟು ಪೋಷಕರ ಬೇಡಿಕೆಯನ್ನು ಬದಿಗೊತ್ತಿ ಶಾಲೆಯನ್ನು ಮೊಟ್ಟೆ ನೀಡುವುದನ್ನು ವಿರೋಧಿಸಿದ ಶೇಕಡ 40ರಷ್ಟು ಮಂದಿಗೆ ಮಣೆ ಹಾಕಿದೆ. ಪೌಷ್ಠಿಕಾಂಶ ಆಹಾರ ಪಡೆಯುವುದು ಮಕ್ಕಳ ಹಕ್ಕು, ಆದರೆ ಹಕ್ಕನ್ನು ಸರ್ಕಾರವೇ ಕಿತ್ತುಕೊಳ್ಳುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...