ಕೇರಳ ಮಿನಿ ಪಾಕಿಸ್ತಾನ, ಭಯೋತ್ಪಾದಕರು ರಾಹುಲ್, ಪ್ರಿಯಾಂಕಾಗೆ ಮತ ನೀಡುತ್ತಾರೆ: ಮಹಾರಾಷ್ಟ್ರ ಸಚಿವ

Date:

ಬಿಜೆ‍ಪಿ ನಾಯಕ, ಮಹಾರಾಷ್ಟ್ರ ಬಂದರು ಹಾಗೂ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಅವರು ಕೇರಳವನ್ನು ‘ಮಿನಿ ಪಾಕಿಸ್ತಾನ’ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಕೇರಳದ ವಯನಾಡ್ ಕ್ಷೇತ್ರದಿಂದ ಗೆಲುವು ಸಾಧಿಸಿದ್ದನ್ನು ಉಲ್ಲೇಖಿಸಿ ರಾಣೆ ಈ ರೀತಿ ಹೇಳಿದ್ದಾರೆ.

‘ಕೇರಳ ಮಿನಿ ಪಾಕಿಸ್ತಾನ. ಅದಕ್ಕಾಗಿಯೇ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಅಲ್ಲಿಂದ ಗೆಲುವು ಸಾಧಿಸಿದ್ದಾರೆ. ಎಲ್ಲ ಭಯೋ ತ್ಪಾದಕರು ಅವರಿಗೆ ಮತ ಹಾಕುತ್ತಾರೆ. ನಾನು ಸತ್ಯವನ್ನೇ ಹೇಳುತ್ತಿದ್ದೇನೆ. ಇವರೆಲ್ಲರೂ ಭಯೋತ್ಪಾದಕರ ನೆರವಿನಿಂದ ಸಂಸದರಾಗುತ್ತಿದ್ದಾರೆ’ ಎಂದು ರಾಣೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಫ್ಜಲ್ ಖಾನ್ ಎದುರು ಛತ್ರಪತಿ ಶಿವಾಜಿಯ ಐತಿಹಾಸಿಕ ಗೆಲುವಿನ ಸಂಭ್ರಮ ವರ್ಷಾಚರಣೆ ವೇಳೆ ರಾಣೆ ಈ ಮಾತುಗಳನ್ನು ಆಡಿದ್ದಾರೆ.

2019ರಲ್ಲಿ ಕೇರಳದ ವಯನಾಡ್ ಹಾಗೂ ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧೆ ಮಾಡಿದ್ದ ರಾಹುಲ್ ಗಾಂಧಿ, ವಯನಾಡಿನಲ್ಲಿ ಗೆದ್ದಿದ್ದರು. 2024ರಲ್ಲೂ ರಾಹುಲ್ ವಯನಾಡಿನಲ್ಲಿ ಗೆಲುವು ಸಾಧಿಸಿದ್ದರು. ರಾಯಬರೇಲಿ ಕ್ಷೇತ್ರವನ್ನು ಉಳಿಸಿಕೊಂಡು ವಯನಾಡ್ ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಗೆದ್ದಿದ್ದರು.

ಕಾಂಗ್ರೆಸ್, ಎನ್‌ಸಿಪಿ ತಿರುಗೇಟು
‘ಮುಂಬರುವ ಚುನಾವಣೆಗಳಲ್ಲಿ ಕೇರಳದಲ್ಲಿ ಪಕ್ಷ ಸ್ಪರ್ಧೆ ಮಾಡುತ್ತದೆಯೋ ಇಲ್ಲವೋ ಎಂದು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಪ್ರಶ್ನಿಸಿ. ಇಂಥ ಅಸಂವಿಧಾನಿಕ ಹೇಳಿಕೆಗಳು ಬಿಜೆಪಿ ನಾಯಕರಿಂದ ಆಗಾಗ ಬರುತ್ತಿರುತ್ತದೆ’ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಟ್ವಿಟರ್‌ನಲ್ಲಿ ಕಿಡಿಕಾರಿದ್ದಾರೆ.

ಈ ಹೇಳಿಕೆ ಬಗ್ಗೆ ಗಮನಿಸಬೇಕು ಎಂದು ಎನ್‌ಸಿಪಿ (ಶರದ್‌ಚಂದ್ರ ಪವಾರ್) ಮುಖ್ಯಮಂತ್ರಿ ದೇವೇಂದ್ರ ಫಢ್ನವೀಸ್ ಅವರನ್ನು ಆಗ್ರಹಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...