ಮಹಾರಾಷ್ಟ್ರ ಮಳೆ : ಮನೆಯಿಂದ ಹೊರಗೆ ಬರದಂತೆ ಮುಂಬೈ ನಾಗರಿಕರಿಗೆ ಮನವಿ, ಪುಣೆಯಲ್ಲಿ ರೆಡ್ ಅಲರ್ಟ್

Date:

ಮುಂದಿನ ಕಲವು ದಿನಗಳಲ್ಲಿ ಮಹಾರಾಷ್ಟ್ರ ದ ಹಲವು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದ್ದು,  ಹಲವು ಜಾಗೃತಗೊಳಿಸುವ ಸರ್ಕಾರಿ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.

ತನ್ನ ಬುಲೆಟಿನ್‌ನಲ್ಲಿ ತಿಳಿಸಿರುವ ಹವಾಮಾನ ಇಲಾಖೆಯು, ಜುಲೈ 26 ಮತ್ತು 27 ರಂದು ಮಧ್ಯ ಮಹಾರಾಷ್ಟ್ರದ ಕೆಲವು ಭಾಗಗಳು, ಕೊಂಕಣ ಪ್ರದೇಶ ಮತ್ತು ರಾಜ್ಯದ ಇತರ ಪ್ರದೇಶಗಳಲ್ಲಿ ” ಭಾರೀ ಮಳೆ” ಆಗಲಿದೆ ಎಂದು ಹೇಳಿದೆ.

ಮುಂಬೈ ಮತ್ತು ಪುಣೆಯಲ್ಲಿಯೂ ಹವಾಮಾನ ಇಲಾಖೆಯು ‘ರೆಡ್ ಅಲರ್ಟ್’ ನೀಡಿದ್ದು, ಭಾರಿ ಮಳೆ ಸುರಿಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳೆಯ ಹಿನ್ನೆಲೆಯಲ್ಲಿ, ಶುಕ್ರವಾರ ಎಲ್ಲ ಶಾಲಾ-ಕಾಲೇಜುಗಳು ತೆರೆದಿರುತ್ತವೆ ಎಂದು ಬೃಹನ್‌ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಿನಕ್ಕೆ 14 ಗಂಟೆ ಕೆಲಸ ಅಮಾನವೀಯ ನಡೆ, ಸರ್ಕಾರ ತಿರಸ್ಕರಿಸಲಿ

“ಮುಂಬೈನಲ್ಲಿ ಪ್ರಸ್ತುತ ಹವಾಮಾನದಂತೆ ಮಳೆ ಸಾಮಾನ್ಯವಾಗಿದ್ದು, ಮೆಟ್ರೋಪಾಲಿಟನ್ ನಗರದಲ್ಲಿ ಜನಜೀವನವು ಸುಗಮವಾಗಿ ಮುಂದುವರಿಯಲು ಅನುವು ಮಾಡಿಕೊಡುತ್ತದೆ. ಬಿಎಂಸಿ ಪ್ರದೇಶದ ಎಲ್ಲ ಶಾಲಾ-ಕಾಲೇಜುಗಳು ಶುಕ್ರವಾರದಂದು ನಿಯಮಿತವಾಗಿ ತೆರೆದಿರುತ್ತವೆ. ಶಾಲಾ ಮತ್ತು ಕಾಲೇಜು ರಜೆಗಳಿಗೆ ಸಂಬಂಧಿಸಿದ ಯಾವುದೇ ಮಾಹಿತಿ ಅಥವಾ ವದಂತಿಗಳನ್ನು ನಂಬಬೇಡಿ. ಬಿಎಂಸಿಯ ಅಧಿಕೃತ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕು” ಎಂದು ಬಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಅವರೊಂದಿಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯನ್ನು ಕರೆದಿದ್ದರು.

ಸಭೆಯ ನಂತರ ಮಾತನಾಡಿದ ಮುಖ್ಯಮಂತ್ರಿಗಳು, ಪುಣೆ, ಮಾವಲ್ ಮತ್ತು ಮುಲ್ಶಿ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಮುಂಬೈ ನಗರ ಮತ್ತು ಉಪನಗರಗಳಲ್ಲಿಯೂ ಹೆಚ್ಚು ಮಳೆಯಾಗಿದೆ. ಮುಂಬೈನಲ್ಲಿ ಯಾವುದೇ ವಿಪತ್ತು ಎದುರಿಸಲು ಆಡಳಿತವು ಸಂಪೂರ್ಣ ಸಜ್ಜಾಗಿದೆ. ಪರಿಹಾರ ಕಾರ್ಯಾಚರಣೆಗಳನ್ನು ವೇಗಗೊಳಿಸಲು ಮತ್ತು ಸಹಾಯ ನೀಡಲು ರಾಜ್ಯಾದ್ಯಂತ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಘಟಕಗಳು, ಭೂಸೇನೆ, ನೌಕಾಪಡೆ, ಪೊಲೀಸ್, ಅಗ್ನಿಶಾಮಕ ದಳ ಮತ್ತು ವೈದ್ಯರ ತಂಡಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಹೇಳಿದರು.

“ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನೆ, ನೌಕಾಪಡೆ, ಪೊಲೀಸ್, ಅಗ್ನಿಶಾಮಕ ದಳ, ಆರೋಗ್ಯ ವ್ಯವಸ್ಥೆಗಳ ಘಟಕಗಳು ಪರಸ್ಪರ ಸಮನ್ವಯ ಸಾಧಿಸಿ ಸಹಾಯ ಮಾಡಲು ಸೂಚಿಸಲಾಗಿದೆ” ಎಂದು ಏಕನಾಥ್ ಶಿಂಧೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...