ಮಹಾರಾಷ್ಟ್ರ | 57 ಸ್ಥಳೀಯ ಸಂಸ್ಥೆಗಳ ಫಲಿತಾಂಶ ಬಂದರೂ ಅಧಿಕಾರಕ್ಕಾಗಿ ಜನವರಿವರೆಗೂ ಕಾಯಬೇಕು

Date:

ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದರೂ, 57 ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸುಪ್ರೀಂಕೋರ್ಟ್ ನ ತೀರ್ಪಿಗಾಗಿ ಕಾಯುವ ಸ್ಥಿತಿ ನಿರ್ಮಾಣವಾಗಿದೆ.

ಒಟ್ಟು 288 ನಗರಸಭೆ ಮತ್ತು ನಗರಪಂಚಾಯಿತಿಗಳ ಪೈಕಿ 57 ಸ್ಥಳೀಯ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೀಡಿದ ಮೀಸಲಾತಿ ಪ್ರಮಾಣ ಶೇ 50 ಮೀರಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ಬಗ್ಗೆ ಜನವರಿ 21ರಂದು ತೀರ್ಪು ಹೊರಬೀಳಲಿದೆ. ಆಡಳಿತಾರೂಢ ಮಹಾಯುತಿ ಸರ್ಕಾರ ಬಹುಮತ ಸಾಧಿಸಿದ 39 ಹಾಗೂ ಎಂವಿಎ ಹೆಚ್ಚು ಸ್ಥಾನಗಳನ್ನು ಗೆದ್ದಿರುವ 17 ಸ್ಥಳೀಯ ಸಂಸ್ಥೆಗಳು ಇದರಲ್ಲಿ ಸೇರಿವೆ. ಒಂದು ಸ್ಥಳೀಯ ಸಂಸ್ಥೆ ಇತರ ಪಕ್ಷಗಳ ಪಾಲಾಗಿದೆ.

ಕೋಟಾ ಮಿತಿಯನ್ನು ಉಲ್ಲಂಘಿಸಿರುವ ವಿರುದ್ಧ ಸಲ್ಲಿಸಲಾಗಿರುವ ಹಲವು ಅರ್ಜಿಗಳ ಬಗ್ಗೆ ಕ್ರಮ ಕೈಗೊಂಡಿರುವ ಸುಪ್ರೀಂಕೋರ್ಟ್, “ಈ 57 ಸ್ಥಳೀಯ ಸಂಸ್ಥೆಗಳ ಚುನಾವಣೆಯು ಸುಪ್ರೀಂಕೋರ್ಟಿನ ಅಂತಿಮ ಆದೇಶಕ್ಕೆ ಬದ್ಧವಾಗಿರುತ್ತದೆ” ಎಂದು ನವೆಂಬರ್ 29ರಂದು ಆದೇಶಿಸಿತ್ತು. ಈ ಸ್ಥಳೀಯ ಸಂಸ್ಥೆಗಳ ಸದಸ್ಯ ಹುದ್ದೆಗಳ ಫಲಿತಾಂಶದ ಮೇಲೆಯೂ ಪರಿಣಾಮ ಬೀರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಸಂಸ್ಥೆಗಳ ಫಲಿತಾಂಶ ಘೋಷಣೆಯಾಗಿದ್ದರೂ, ಇದು ಅಂತಿಮ ಆದೇಶಕ್ಕೆ ಅನುಸಾರವಾಗಿರುತ್ತದೆ” ಎಂದು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೇರಳಕ್ಕೂ ಕಾಲಿಟ್ಟಿತು, ಕೋಮುದ್ವೇಷಿ ಗುಂಪುಹತ್ಯೆಯ ಪಿಡುಗು!

ಚುನಾವಣೆಯಲ್ಲಿ ಮಹಾಯುತಿ ಕೂಟಕ್ಕೆ ಭಾರಿ ಬಹುಮತ ಬಂದಿದ್ದರೂ, 39 ಸ್ಥಾನಗಳ ಗೆಲುವಿನ ಬಗ್ಗೆ ಸ್ಪಷ್ಟನೆಗೆ ಕಾಯಬೇಕಾದ ಸ್ಥಿತಿ ಇದೆ. ಈ ಪೈಕಿ ಬಿಜೆಪಿ 30, ಶಿವಸೇನೆ ಐದು, ಎನ್‌ಸಿಪಿ ನಾಲ್ಕು ಸ್ಥಾನಗಳನ್ನು ಗೆದ್ದಿವೆ. ಆದರೆ ಎಂವಿಗೆ ಕೂಡಾ ಇದೇ ಸ್ಥಿತಿ ಇದ್ದು, ಕಾಂಗ್ರೆಸ್ ನ 17, ಶಿವಸೇನೆ-ಯುಬಿಟಿ2 ಎರಡು ಹಾಗೂ ಎನ್ಸಿಪಿ-ಎಸ್ಪಿ ಗೆದ್ದಿರುವ ನಾಲ್ಕು ಸ್ಥಾನಗಳ ಅಂತಿಮ ಫಲಿತಾಂಶ ತೂಗುಯ್ಯಾಲೆಯಲ್ಲಿದೆ. “ಜನಾದೇಶ ಸ್ಪಷ್ಟವಾಗಿ ಮಹಾಯುತಿ ಪರವಾಗಿದೆ. ಆದರೆ ಸುಪ್ರೀಂಕೋರ್ಟ್ ನ ತೀರ್ಪನ್ನು ನಾವು ಗೌರವಿಸುತ್ತೇವೆ” ಎಂದು ಬಿಜೆಪಿ ರಾಜಕಾರಣಿಯೊಬ್ಬರು ಹೇಳಿದ್ದಾರೆ.

“ನಮ್ಮ ಒಟ್ಟು ಸ್ಥಾನಗಳ ಪೈಕಿ ಐದನೇ ಮೂರರಷ್ಟು ಸ್ಥಾನಗಳು ಪರಿಶೀಲನೆಗೆ ಒಳಪಟ್ಟಿವೆ. ಇದು ತಳಮಟ್ಟದಲ್ಲಿ ಜನಾದೇಶವನ್ನು ಪ್ರತಿಬಿಂಬಿಸುತ್ತದೆ ಹಾಗೂ ಸುಪ್ರೀಂಕೋರ್ಟ್ ಸ್ಥಿರತೆಯನ್ನು ಖಾತರಿಪಡಿಸುತ್ತದೆ ಹಾಗೂ ಈ ಸಂಸ್ಥೆಗಳನ್ನು ಅಸ್ಥಿರಗೊಳಿಸುವುದಿಲ್ಲ ಎಂಬ ನಿರೀಕ್ಷೆ ನಮ್ಮದು” ಎಂದು ಕಾಂಗ್ರೆಸ್ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.

ಈ 39 ಸ್ಥಳೀಯ ಸಂಸ್ಥೆಗಳ ಪೈಕಿ ನಾಗ್ಪುರ ಜಿಲ್ಲೆಯ ಎಂಟು, ಚಂದ್ರಾಪುರ ಜಿಲ್ಲೆಯ ಏಳು ಹಾಗೂ ನಾಸಿಕ್ ನ ಐದು ಸ್ಥಳೀಯ ಸಂಸ್ಥೆಗಳು ಸೇರಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...