ಮಹಾರಾಷ್ಟ್ರ | ‘ಸಮೃದ್ಧಿ ಎಕ್ಸ್‌ಪ್ರೆಸ್‌ ವೇ’ನಲ್ಲಿ ಭೀಕರ ಅಪಘಾತ; ಏಳು ಮಂದಿ ಸಾವು

Date:

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ‘ಸಮೃದ್ಧಿ ಎಕ್ಸ್‌ಪ್ರೆಸ್‌ ವೇ’ ಎಂದೂ ಕರೆಯಲ್ಪಡುವ ‘ಮುಂಬೈ-ನಾಗಪುರ ಎಕ್ಸ್‌ಪ್ರೇಸ್‌ ವೇ’ನಲ್ಲಿ ಎರಡು ಕಾರುಗಳು ಢಿಕ್ಕಿ ಹೊಡೆಕೊಂಡಿರುವ ಪರಿಣಾಮ ಎಳು ಜನರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕಡವಂಚಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೃತರಾದವರು ಮುಂಬೈ ಮತ್ತು ಬುಲ್ಧಾನ ಜಿಲ್ಲೆಯ ಮಲಾಡ್‌ (ಪೂರ್ವ) ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

“ನಾಗ್‌ಪುರದಿಂದ ಮುಂಬೈಗೆ ಹೋಗುತ್ತಿದ್ದ ಮಲ್ಟಿ-ಯುಟಿಲಿಟಿ ವೆಹಿಕಲ್ (ಎಮ್‌ಯುವಿ) ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಘಾತದಲ್ಲಿ ಎಂಯುವಿ ಕ್ರ್ಯಾಶ್ ಬ್ಯಾರಿಯರ್ ಅನ್ನು ಮುರಿದು ರಸ್ತೆಯ ಎಡಭಾಗದಲ್ಲಿ ಬಿದ್ದಿದೆ. ಸ್ಥಳೀಯ ಗ್ರಾಮಸ್ಥರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ವಾಹನಗಳ ಜಖಂಗೊಂಡ ಅವಶೇಷಗಳಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ರಕ್ಷಿಸಿದರು ಎಂದು ಅವರು ಹೇಳಿದ್ದಾರೆ.

ಆರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ತರಲಾಗಿದೆ. ಮೂವರು ಗಾಯಗೊಂಡ ವ್ಯಕ್ತಿಗಳಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಜಿಎಂಸಿಎಚ್) ಸ್ಥಳಾಂತರಿಸಲಾಗಿದ್ದ ಓರ್ವ ಗಂಭೀರ ಗಾಯಗೊಂಡ ವ್ಯಕ್ತಿ ನಂತರ ಸಾವನ್ನಪ್ಪಿದ್ದಾರೆ ಎಂದು ಜಲ್ನಾದ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಉಮೇಶ್ ಜಾಧವ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡೆಂಗ್ಯೂ ಜ್ವರಕ್ಕೆ ಇಬ್ಬರು ಬಲಿ

ಮೃತರಲ್ಲಿ ಮೂವರು ಮುಂಬೈ ಮೂಲದವರಾಗಿದ್ದರೆ, ಇನ್ನು ಹಲವರು ಬುಲ್ಧಾನ ಜಿಲ್ಲೆಯವರಾಗಿದ್ದಾರೆ. ಛತ್ರಪತಿ ಸಂಭಾಜಿನಗರಕ್ಕೆ ಸ್ಥಳಾಂತರಗೊಂಡಿರುವ ಒಬ್ಬ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಗೊಂಡಿರುವ ಮೂವರು ಮುಂಬೈ ಮೂಲದವರು ಎಂದು ಅವರು ತಿಳಿಸಿದ್ದಾರೆ.

ಸಮೃದ್ಧಿ ಹೆದ್ದಾರಿಯು ಮುಂಬೈ ಮತ್ತು ನಾಗ್ಪುರವನ್ನು ಸಂಪರ್ಕಿಸುವ 701-ಕಿಲೋಮೀಟರ್ ಆರು ಲೇನ್ ಎಕ್ಸ್‌ಪ್ರೆಸ್‌ವೇ ಆಗಿದೆ. ನಾಗ್‌ಪುರದಿಂದ ಶಿರಡಿಗೆ ಸಂಪರ್ಕಿಸುವ ಹೆದ್ದಾರಿಯ ಮೊದಲ ಹಂತವನ್ನು ಡಿಸೆಂಬರ್ 2022ರಲ್ಲಿ ಉದ್ಘಾಟಿಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...