6 ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ 1,267 ರೈತರ ಆತ್ಮಹತ್ಯೆ

Date:

ಕಳೆದ 6 ತಿಂಗಳಲ್ಲಿ ಮಹಾರಾಷ್ಟ್ರ ದಲ್ಲಿ 1267 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಅಮರಾವತಿ ವಿಭಾಗದ ವಿದರ್ಭ ಪ್ರಾಂತ್ಯದಲ್ಲಿ 557 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಜ್ಯ ಸರ್ಕಾರದ ಅಂಕಿಅಂಶಗಳು ತಿಳಿಸಿವೆ.

ಅಂಕಿಅಂಶಗಳ ಪ್ರಕಾರ ಜನವರಿಯಿಂದ ಜೂನ್‌ವರೆಗೆ ಛತ್ರಪತಿ ಸಾಂಬಾಜಿ ನಗರ ವಿಭಾಗದಲ್ಲಿ ಎರಡನೇ ಅತೀ ಹೆಚ್ಚು 430 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾಸಿಕ್‌ ವಿಭಾಗದಲ್ಲಿ 137 ಹಾಗೂ ನಾಗ್ಪುರ ವಿಭಾಗದಲ್ಲಿ 130 ಹಾಗೂ ಪುಣೆ ವಿಭಾಗದಲ್ಲಿ 13 ಮಂದಿ ಸಾವಿಗೀಡಾಗಿದ್ದಾರೆ.

ಕರಾವಳಿಯ ಕೊಂಕಣ್‌ ವಿಭಾಗದಲ್ಲಿ ಒಂದೂ ಸಾವು ವರದಿಯಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ(ಎನ್‌ಸಿಆರ್‌ಬಿ) ಪ್ರಕಾರ 2022ರಲ್ಲಿ ದೇಶದಲ್ಲಿಯೇ ಶೇ 37.6 ರಷ್ಟು ರೈತರು ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ‘ಭಗವಂತ’ನಿಗೇ ಎಚ್ಚರಿಕೆ ಕೊಟ್ಟರೆ ಭಾಗವತ್?

ಎನ್‌ಸಿಆರ್‌ಬಿ ಪ್ರಕಾರ 2022ರಲ್ಲಿ ಕೃಷಿ ವಲಯದಲ್ಲಿ ತೊಡಗಿಸಿಕೊಂಡ 11290 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಲ್ಲಿ 5207 ರೈತರು, 6083 ಕೃಷಿ ಕಾರ್ಮಿಕರು ಪ್ರಾಣ ತ್ಯಜಿಸಿದ್ದಾರೆ.

ದೇಶದ ಒಟ್ಟು 1,70,924 ಆತ್ಮಹತ್ಯೆಗಳನ್ನು ಪರಿಗಣಿಸಿದರೆ ರೈತರ ಸಂಖ್ಯೆ ಶೇ 6.6 ರಷ್ಟಿದೆ.

2021ರಲ್ಲಿ ದೇಶದಲ್ಲಿ 10,881 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, 5318 ರೈತರು ಹಾಗೂ 5563 ಕೃಷಿ ಕಾರ್ಮಿಕರು ಸಾವಿಗೀಡಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಶೇ.37.3 ರಷ್ಟು ದಾಖಲಾಗಿದೆ.

ಎನ್‌ಸಿಆರ್‌ಬಿ ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಒಟ್ಟು 1,64,033 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಲ್ಲಿ ರೈತರ ಪ್ರಮಾಣ ಶೇ.6.6 ರಷ್ಟಿದೆ.

2020ರಲ್ಲಿ ದೇಶಾದ್ಯಂತ 1.53,052 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು, ರೈತರ ಪ್ರಮಾಣ ಶೇ.7 ರಷ್ಟಿದೆ. ಈ ಅವಧಿಯಲ್ಲಿ 10677 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಇದರ ಪ್ರಮಾಣ ಶೇ 37.7 ರಷ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...