ತಪ್ಪು ತೀರ್ಪು ನೀಡಿದ್ದಾರೆಂದು ‘ರೆಫರಿ’ಗೆ ಕಾಲಿನಿಂದ ಒದ್ದ ಮಹಾರಾಷ್ಟ್ರ ಕುಸ್ತಿಪಟು; ವಿಡಿಯೋ ವೈರಲ್

Date:

ಕುಸ್ತಿ ಪಂದ್ಯಾವಳಿಯಲ್ಲಿ ತಪ್ಪು ತೀರ್ಪು ನೀಡಿದ್ದಾರೆಂದು ಕುಸ್ತಿಪಟು ಒಬ್ಬರು ‘ರೆಫರಿ’ಗೆ ಕಾಲಿನಿಂದ ಒದ್ದು, ದಾಂಧಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರೆಫರಿ ಮೇಲೆ ಹಲ್ಲೆ ನಡೆಸಿದ ಕುಸ್ತಿಪಟುವನ್ನು ಮಹಾರಾಷ್ಟ್ರದ ನಾಂದೇಡ್‌ನ ಶಿವರಾಜ್‌ ರಕ್ಷೆ ಎಂದು ಹೇಳಲಾಗಿದೆ.

ಅಹಲ್ಯಾನಗರದಲ್ಲಿ ‘ಕೇಸರಿ ಕುಸ್ತಿ ಪಂದ್ಯಾವಳಿ’ ಆಯೋಜಿಸಲಾಗಿತ್ತು. ಪಂದ್ಯಾವಳಿಯಲ್ಲಿ ಶಿವರಾಜ್‌ ರಕ್ಷೆ ಮತ್ತು ಪೃಥ್ವಿರಾಜ್ ಮೊಹೋಲ್‌ ನಡುವೆ ಸೆಮಿಫೈನಲ್‌ ಪಂದ್ಯ ನಡೆಯುತ್ತಿತ್ತು. ಪಂದ್ಯದಲ್ಲಿ ಪೃಥ್ವಿರಾಜ್ ಮೊಹೋಲ್ ಗೆದಿದ್ದಾರೆಂದು ರೆಫರಿಗಳು ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ, ರೆಫರಿಗಳು ತಪ್ಪು ತೀರ್ಪು ನೀಡಿದ್ದಾರೆ. ಅಪ್ರಮಾಣಿಕವಾಗಿ ತೀರ್ಪು ಪ್ರಕಟಿಸಿದ್ದಾರೆ ಎಂದು ರೆಫರಿ ಮೇಲೆ ಶಿವರಾಜ್ ರಕ್ಷೆ ಹಲ್ಲೆ ನಡೆಸಿದ್ದಾರೆ.

ಘಟನೆಯ ಬಳಿಕ ಶಿವರಾಜ್ ರಕ್ಷೆ ಅವರನ್ನು ಪಂದ್ಯಾವಳಿಯಿಂದ ಹೊರಗಿಡಲಾಗಿದೆ.

“ನನ್ನನ್ನು ತಪ್ಪಾಗಿ ಹೊರಗಿಡಲಾಗಿದೆ. ರೆಫರಿಯ ನಿರ್ಧಾರದಲ್ಲಿ ಸ್ಪಷ್ಟವಾಗಿ ಪಕ್ಷಪಾತವಿತ್ತು. ನಾನು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ದೂರು ನೀಡಿದ್ದೇನೆ. ತನಿಖೆಯಾಗಲಿ. ರೆಫರಿ ನಿರ್ಧಾರ ಸರಿಯಾಗಿದೆ ಎಂದಾದರೆ, ನಾನು ಆಟವನ್ನು ಬಿಡುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...