ತನ್ನ ಅನುಯಾಯಿಗಳಿಗೆ ಹೊಡೆದು, ಮೂತ್ರ ಕುಡಿಸುವ ಮಹಾರಾಷ್ಟ್ರದ ‘ಸ್ವಯಂ ಘೋಷಿತ ಬಾಬಾ’

Date:

‘ಸ್ವಯಂ ಘೋಷಿತ ಬಾಬಾ’ ಒಬ್ಬ ಆಧ್ಯಾತ್ಮಿಕ ಚಿಕಿತ್ಸೆ ನೀಡುವ ನೆಪದಲ್ಲಿ ಗ್ರಾಮಸ್ಥರನ್ನು ಕ್ರೂರವಾಗಿ ಥಳಿಸಿ, ಆತನ ಮೂತ್ರ ಕುಡಿಸುತ್ತಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಸಂಜಯ್ ಪಗಾರೆ ಎಂಬ ಈ ಸ್ವಯಂ ಘೋಷಿತ ಬಾಬಾ ಸುಮಾರು ಎರಡು ವರ್ಷಗಳಿಂದ ವೈಜಾಪುರ ತಹಸಿಲ್‌ನ ಶಿಯೂರ್ ಗ್ರಾಮದ ದೇವಸ್ಥಾನದಲ್ಲಿ ಈ ಮೌಢ್ಯ ಮತ್ತು ಹಿಂಸೆಯನ್ನು ನಡೆಯುತ್ತಿದ್ದಾನೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಜನ ಮರುಳೋ ಜಾತ್ರೆ ಮರುಳೋ; ಸ್ವಯಂಘೋಷಿತ ದೇವಮಾನವನ ಪಾದ ಮುಟ್ಟಲು ಪ್ರಾಣತೆತ್ತ ಜನರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಜಯ್ ಪಗಾರೆ ತನಗೆ ಅಲೌಕಿಕ ಶಕ್ತಿಗಳಿವೆ ಎಂದು ಹೇಳಿಕೊಂಡಿದ್ದಾನೆ. ತಾನು ಆತ್ಮಗಳನ್ನು ಓಡಿಸಬಲ್ಲೆ, ಅವಿವಾಹಿತರಿಗೆ ಮದುವೆ ಮಾಡಿಸಬಲ್ಲೆ, ಅಘೋರಿ ಆಚರಣೆಗಳ ಮೂಲಕ ದಂಪತಿಗಳು ಮಕ್ಕಳನ್ನು ಪಡೆಯಲು ಸಹಾಯ ಮಾಡಬಲ್ಲೆ ಎಂದು ಗ್ರಾಮಸ್ಥರನ್ನು ನಂಬಿಸಿದ್ದಾನೆ ಎನ್ನಲಾಗಿದೆ.

ಪುರುಷರು ಮತ್ತು ಮಹಿಳೆಯರು- ಎಲ್ಲರಿಗೂ ಕೋಲುಗಳಿಂದ ಹೊಡೆಯುತ್ತಿದ್ದ ಈತ, ತನ್ನ ಬೂಟುಗಳನ್ನು ತನ್ನ ಅನುಯಾಯಿಗಳ ಬಾಯಿಗೆ ತುರುಕುತ್ತಿದ್ದ. ದೇವಾಲಯದ ಸುತ್ತಲೂ ವೃತ್ತಾಕಾರದಲ್ಲಿ ಓಡಲು ಹೇಳುತ್ತಿದ್ದ. ಚಿಕಿತ್ಸೆಯೆಂದು ಹೇಳಿ ಯಾವುದೋ ಮರದ ಎಲೆಗಳನ್ನು ತಿನ್ನಿಸುತ್ತಿದ್ದ. ತನ್ನ ಮೂತ್ರವನ್ನು ಕುಡಿಸುತ್ತಿದ್ದ, ಇದು ಆಧ್ಮಾತ್ಮಿಕ ಚಿಕಿತ್ಸೆಯ ಭಾಗ ಎಂದು ಹೇಳಿಕೊಳ್ಳುತ್ತಿದ್ದ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ‘ಹಾಥರಸ್ ಕಾಲ್ತುಳಿತ ಆಕಸ್ಮಿಕವಲ್ಲ ಪಿತೂರಿ’ ಎಂದ ಭೋಲೆ ಬಾಬಾ ಪರ ವಕೀಲ!

ಮೌಢ್ಯ ವಿರೋಧಿ ಸಂಘಟನೆಯ ಕಾರ್ಯಕರ್ತರು ಗುಪ್ತ ಕ್ಯಾಮೆರಾಗಳನ್ನು ಬಳಸಿ ಈತನ ಈ ಕ್ರೂರ ಕೃತ್ಯವನ್ನು ಚಿತ್ರೀಕರಿಸಿದ್ದಾರೆ. ಒಂದು ವೀಡಿಯೊದಲ್ಲಿ, ಬಾಬಾ ನೆಲದ ಮೇಲೆ ಮಲಗಿರುವ ವ್ಯಕ್ತಿಯ ಮುಖದ ಮೇಲೆ ನಡೆದಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸದ್ಯ ಮೌಢ್ಯ ವಿರೋಧಿ ಸಂಘಟನೆಯ ಕಾರ್ಯಕರ್ತರ ದೂರಿನ ಆಧಾರದಲ್ಲಿ ಭಾರತೀಯ ದಂಡ ಸಂಹಿತೆಯಡಿ ಪ್ರಕರಣ ದಾಖಲಿಸಲಾಗಿದೆ. ವಂಚನೆ, ಹಲ್ಲೆ ಮತ್ತು ಮೌಢ್ಯ ಪ್ರಚಾರಕ್ಕಾಗಿ ಸಂಜಯ್ ಪಗಾರೆ ವಿರುದ್ಧ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...