ಸಂಸತ್ ಭದ್ರತಾ ಲೋಪದ 6ನೇ ಆರೋಪಿ ಬಂಧನ

Date:

ಸಂಸತ್ ಭದ್ರತಾ ಲೋಪ ಪ್ರಕರಣದ ಆರನೇ ಆರೋಪಿ ಮಹೇಶ್ ಕುಮಾವತ್ ಎಂಬಾತನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಒಂದು ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.

ರಾಜಸ್ಥಾನದ ನಾಗೌರ್ ಜಿಲ್ಲೆಯ ನಿವಾಸಿಯಾದ ಮಹೇಶ್, ಡಿಸೆಂಬರ್ 13 ರಂದು ದೆಹಲಿಗೆ ತೆರಳಿದ್ದು, ಇದೇ ದಿನದಂದು ಇಬ್ಬರು ವ್ಯಕ್ತಿಗಳು ಲೋಕಸಭೆಯ ಸಂದರ್ಶಕರ ಕೊಠಡಿಯಿಂದ ಸದನಕ್ಕೆ ಜಿಗಿದಿದ್ದರು.

ಘಟನೆಯ ನಂತರ ಪ್ರಮುಖ ಸಂಚುಕೋರ ಲಲಿತ್ ಝಾ ದೆಹಲಿಯಿಂದ ಪರಾರಿಯಾಗಿದ್ದರೆ, ರಾಜಸ್ಥಾನದ ಮಹೇಶ್‌ ಅಡಗಿಕೊಂಡಿದ್ದ. ಆರಂಭದಲ್ಲಿ ಬಂಧಿಸಲಾದ ನಾಲ್ವರು ಆರೋಪಿಗಳ ಮೊಬೈಲ್ ಫೋನ್‌ಗಳನ್ನು ನಾಶಪಡಿಸುವಲ್ಲಿ ಮಹೇಶ್ ಕೂಡ ಲಲಿತ್ ಜೊತೆ ಸೇರಿಕೊಂಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಟ್ಟು ಅಂಗವೈಕಲ್ಯವಲ್ಲ; ಸ್ಮೃತಿ ಇರಾನಿ ಹೇಳಿಕೆ ಯಾರನ್ನು ಮೆಚ್ಚಿಸಲು?

ಲಲಿತ್ ಮತ್ತು ಮಹೇಶ್ ಇಬ್ಬರೂ ಗುರುವಾರ ನವದೆಹಲಿಯ ಪೊಲೀಸ್ ಠಾಣೆಯಲ್ಲಿ ಒಟ್ಟಿಗೆ ಶರಣಾಗಿದ್ದರು. ಶುಕ್ರವಾರ ಲಲಿತ್‌ನನ್ನು ಬಂಧಿಸಿದ್ದರೆ, ಮಹೇಶ್‌ನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

ಡಿಸೆಂಬರ್‌ 13 ರಂದು, ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್ ಎಂಬುವವರು ಲೋಕಸಭೆಯ ಶೂನ್ಯ ವೇಳೆಯಲ್ಲಿ ಸಾರ್ವಜನಿಕ ಗ್ಯಾಲರಿಯಿಂದ ಲೋಕಸಭೆಯ ಸದನಕ್ಕೆ ಜಿಗಿದು ಹಳದಿ ಹೊಗೆ ಬಿಡುಗಡೆ ಮಾಡುವುದರೊಂದಿಗೆ ಘೋಷಣೆಗಳನ್ನು ಕೂಗಿದರು.

ಅದೇ ಸಮಯದಲ್ಲಿ, ಅಮೋಲ್ ಶಿಂಧೆ ಮತ್ತು ನೀಲಂ ದೇವಿ ಎಂಬುವವರು ಸಂಸತ್ ಹೊರಗೆ, ಹಳದಿ ಹೊಗೆಯನ್ನು ಬಿಡುಗಡೆ ಮಾಡುವುದರ ಜೊತೆಗೆ ಸರ್ವಾಧಿಕಾರವನ್ನು ಅನುಮತಿಸಲಾಗುವುದಿಲ್ಲ ಎಂಬ ಘೋಷಣೆಗಳನ್ನು ಕೂಗಿದರು. ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...