ಸೆಬಿ ಅಧ್ಯಕ್ಷೆ ವಿರುದ್ಧ ಲೋಕಪಾಲ್‌ಗೆ ದೂರು ನೀಡಿದ ಸಂಸದೆ ಮಹುವಾ ಮೊಯಿತ್ರಾ

Date:

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅಧ್ಯಕ್ಷೆ ಮಾಧಬಿ ಪುರಿ ಬುಚ್ ವಿರುದ್ಧ ಲೋಕಪಾಲ್‌ಗೆ ದೂರು ಸಲ್ಲಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಮೊಯಿತ್ರಾ ಪೋಸ್ಟ್ ಮಾಡಿದ್ದಾರೆ. “ಪುರಿ ಬುಚ್ ವಿರುದ್ಧ ನಾನು ಎಲೆಕ್ಟ್ರಾನಿಕ್ ಮತ್ತು ಭೌತಿಕ ರೂಪದಲ್ಲಿ ಲೋಕಪಾಲ್‌ಗೆ ದೂರು ಸಲ್ಲಿಸಿದ್ದೇನೆ” ಎಂದು ತಿಳಿಸಿದ್ದಾರೆ.

“ಲೋಕಪಾಲ್ ಪ್ರಾಥಮಿಕ ತನಿಖೆಗಾಗಿ ಮತ್ತು ನಂತರ ಪೂರ್ಣ ಎಫ್‌ಐಆರ್ ವಿಚಾರಣೆಗಾಗಿ 30 ದಿನಗಳ ಒಳಗೆ ಪ್ರಕರಣವನ್ನು ಸಿಬಿಐ/ಇಡಿಗೆ ನೀಡಬೇಕು. ಈ ಪ್ರಕರಣದಲ್ಲಿ ಒಳಗೊಂಡಿರುವ ಪ್ರತಿಯೊಂದು ಘಟಕದ, ಪ್ರತಿ ಮೂಲದ ತನಿಖೆಯಾಗಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ದೂರಿನಲ್ಲಿ ಮೊಯಿತ್ರಾ, ಸೆಬಿ ಅಧ್ಯಕ್ಷೆ ಬುಚ್ ಅವರನ್ನು ಸರಣಿ ಅಪರಾಧಿ ಎಂದು ಉಲ್ಲೇಖಿಸಿದ್ದಾರೆ. ದೂರಿನಲ್ಲಿ ಬುಚ್ ಅವರನ್ನು ಏಪ್ರಿಲ್ 2017ರಿಂದ ಅಕ್ಟೋಬರ್ 2021ರವರೆಗೆ ಸೆಬಿಯ ಸದಸ್ಯರಾಗಿ ನೇಮಕ ಮಾಡಿರುವುದನ್ನು ಮತ್ತು ಮಾರ್ಚ್ 2022ರಲ್ಲಿ ಅಧ್ಯಕ್ಷರಾಗಿ ಮಾಡಿರುವುದನ್ನು ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಮಾಧವಿ ಬುಚ್ ವಿರುದ್ಧ ತಿರುಗಿಬಿದ್ದ ಸೆಬಿ ಉನ್ನತಾಧಿಕಾರಿಗಳು

ಭಾರತದ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿ ಗ್ರೂಪ್‌ನ ವಂಚನೆಯನ್ನು ಕಳೆದ ವರ್ಷ ಬಹಿರಂಗಪಡಿಸಿದ್ದ ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್‌ ಕಂಪನಿ ಹಿಂಡನ್‌ಬರ್ಗ್‌ 2024ರ ಆಗಸ್ಟ್ 10ರಂದು ಭಾರತಕ್ಕೆ ಸಂಬಂಧಿಸಿದ ಮತ್ತೊಂದು ಸ್ಪೋಟಕ ವರದಿಯನ್ನು ಬಹಿರಂಗಪಡಿಸಿದೆ.

ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಅದಾನಿ ಮನಿ ಸೈಫನಿಂಗ್ ಹಗರಣದಲ್ಲಿ ಬಳಸಲಾದ ಆಫ್‌ಶೋರ್ ಫಂಡ್‌ನಲ್ಲಿ ಪಾಲನ್ನು ಹೊಂದಿದ್ದರು ಎಂದು ಹಿಂಡನ್‌ಬರ್ಗ್ ಆರೋಪಿಸಿದೆ.

ಆದರೆ ಈ ಆರೋಪವನ್ನು ಸೆಬಿ ಅಧ್ಯಕ್ಷೆ ಮತ್ತು ಅವರ ಪತಿ ಅಲ್ಲಗಳೆದಿದ್ದಾರೆ. ಈ ಆರೋಪಗಳು ಆಧಾರರಹಿತವಾಗಿದೆ. ನಮ್ಮ ಹಣಕಾಸು ವ್ಯವಹಾರಗಳು ತೆರೆದ ಪುಸ್ತಕವಿದ್ದಂತೆ. ಸೆಬಿಯಿಂದ ಶೋಕಾಸ್ ನೋಟಿಸ್ ಪಡೆದಿರುವ ಹಿಂಡನ್‌ಬರ್ಗ್ ಈಗ ಚಾರಿತ್ರ್ಯ ಹರಣಕ್ಕೆ ಮುಂದಾಗಿದೆ ಎಂದು ದಂಪತಿ ಹೇಳಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...