ನಟಿ ಅತ್ಯಾಚಾರ ಪ್ರಕರಣ: ಮಲಯಾಳಂ ನಟ ದಿಲೀಪ್‌ ನಿರ್ದೋಷಿ ಎಂದು ಕೋರ್ಟ್ ತೀರ್ಪು

Date:

ಕೇರಳದ ಬಹುಚರ್ಚಿತ 2017ರ ನಟಿ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂನ ನಟ ದಿಲೀಪ್ (8ನೇ ಆರೋಪಿ) ಅವರನ್ನು ಎರ್ನಾಕುಲಂನ ಪ್ರಧಾನ ಸೆಷನ್ಸ್ ನ್ಯಾಯಾಲಯವು ದೋಷಮುಕ್ತಗೊಳಿಸಿದೆ. ಇದೇ ವೇಳೆ ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ (1ನೇ ಆರೋಪಿ) ಸೇರಿದಂತೆ ಆರು ಮಂದಿಯನ್ನು ನ್ಯಾಯಾಲಯವು ದೋಷಿಗಳೆಂದು ತೀರ್ಪು ನೀಡಿದೆ.

ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶರಾದ ಹನಿ ಎಂ. ವರ್ಗೀಸ್ ಅವರು ಸೋಮವಾರ ಈ ಮಹತ್ವದ ತೀರ್ಪನ್ನು ಪ್ರಕಟಿಸಿದರು. ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ (A1), ಮಾರ್ಟಿನ್ ಆಂಟನಿ (A2), ಮಣಿಕಂಠನ್ (A3), ವಿಜೀಶ್ (A4), ಸಲೀಂ (A5) ಮತ್ತು ಪ್ರದೀಪ್ (A6) ಅವರನ್ನು ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದೋಷಿಗಳೆಂದು ಘೋಷಿಸಲಾಗಿದೆ.

ಆದರೆ, ಈ ಕೃತ್ಯದ ಹಿಂದಿನ ಸಂಚು ರೂಪಿಸಿದ ಆರೋಪ ಹೊತ್ತಿದ್ದ ನಟ ದಿಲೀಪ್ (A8) ಮತ್ತು 7ನೇ ಆರೋಪಿ ಚಾರ್ಲಿ ಥಾಮಸ್ ಅವರ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅವರನ್ನು ಖುಲಾಸೆಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಡಿ.6 – ಭಾರತದ ಜಾತ್ಯತೀತ ಇತಿಹಾಸದ ಕರಾಳ ದಿನ

2017ರ ಫೆಬ್ರವರಿ 17ರಂದು ತ್ರಿಶೂರ್‌ನಿಂದ ಕೊಚ್ಚಿಗೆ ತೆರಳುತ್ತಿದ್ದ ನಟಿಯ ಕಾರನ್ನು ತಡೆದಿದ್ದ ದುಷ್ಕರ್ಮಿಗಳ ತಂಡ, ಚಲಿಸುತ್ತಿದ್ದ ವಾಹನದಲ್ಲಿಯೇ ನಟಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿತ್ತು. ಅಲ್ಲದೆ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕಿತ್ತು. ಈ ಪ್ರಕರಣದಲ್ಲಿ ‘ಪಲ್ಸರ್ ಸುನಿ’ ಪ್ರಮುಖ ಆರೋಪಿಯಾಗಿದ್ದ. ನಂತರದ ತನಿಖೆಯಲ್ಲಿ ವೈಯಕ್ತಿಕ ದ್ವೇಷದ ಕಾರಣದಿಂದ ನಟ ದಿಲೀಪ್ ಈ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂದು ಆರೋಪಿಸಿ ಜುಲೈ 2017ರಲ್ಲಿ ಅವರನ್ನು ಬಂಧಿಸಲಾಗಿತ್ತು. ಸುಮಾರು 85 ದಿನಗಳ ಜೈಲುವಾಸದ ನಂತರ ದಿಲೀಪ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಕಳೆದ ಎಂಟು ವರ್ಷಗಳಿಂದ ನಡೆದ ಸುದೀರ್ಘ ವಿಚಾರಣೆಯಲ್ಲಿ ಅನೇಕ ಸಾಕ್ಷಿಗಳು ಪ್ರತಿಕೂಲ ಸಾಕ್ಷ್ಯ ನುಡಿದಿದ್ದು ಪ್ರಕರಣದ ಹಾದಿಯನ್ನು ಕಠಿಣಗೊಳಿಸಿತ್ತು.

ನಟ ದಿಲೀಪ್ ವಿರುದ್ಧ ಪ್ರಮುಖವಾಗಿ ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಗಿತ್ತು. ಆದರೆ, ಪಲ್ಸರ್ ಸುನಿ ಮತ್ತು ಇತರ ಆರೋಪಿಗಳು ಕೃತ್ಯ ಎಸಗುವಲ್ಲಿ ದಿಲೀಪ್ ಅವರ ನೇರ ಪಾತ್ರ ಅಥವಾ ಪ್ರಚೋದನೆ ಇತ್ತು ಎಂಬುದಕ್ಕೆ ಪ್ರಬಲವಾದ ಸಾಕ್ಷ್ಯಾಧಾರಗಳನ್ನು ಒದಗಿಸಲು ಪ್ರಾಸಿಕ್ಯೂಷನ್ ವಿಫಲವಾಯಿತು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ದೋಷಿಗಳಾದ ಎ ಒಂದರಿಂದ ಎ ಆರರವರೆಗಿನ ಅಪರಾಧಿಗಳಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376D (ಸಾಮೂಹಿಕ ಅತ್ಯಾಚಾರ), 366 (ಅಪಹರಣ) ಮತ್ತು ಐಟಿ ಕಾಯ್ದೆಯಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ಮುಂದಿನ ದಿನಗಳಲ್ಲಿ ಪ್ರಕಟಿಸಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...