ಮಲಯಾಳಂ ಚಿತ್ರರಂಗ | ನಟಿಯರ ಕ್ಯಾರವಾನ್‌ಗಳಲ್ಲಿ ಹಿಡನ್ ಕ್ಯಾಮೆರಾಗಳಿರುತ್ತಿತ್ತು: ನಟಿ ರಾಧಿಕಾ ಆರೋಪ

Date:

ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಮೇಲೆ ನಡೆಯುತ್ತಾ ಬಂದಿರುವ ಲೈಂಗಿಕ ಕಿರುಕುಳದ ಬಗ್ಗೆ ಪ್ರತಿ ದಿನ ದೂರುಗಳು ದಾಖಲಾಗುತ್ತಿರುವ ನಡುವೆ, “ಮಲಯಾಳಂ ಚಿತ್ರಗಳ ಶೂಟಿಂಗ್ ಸೆಟ್‌ಗಳಲ್ಲಿ ನಟಿಯರ ಕ್ಯಾರವಾನ್‌ಗಳಲ್ಲಿ ಹಿಡನ್ ಕ್ಯಾಮೆರಾಗಳಿರುತ್ತಿತ್ತು” ಎಂದು ಹಿರಿಯ ನಟಿ ರಾಧಿಕಾ ಶರತ್‌ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

“ನಟಿಯರ ಕ್ಯಾರವಾನ್‌ಗಳಲ್ಲಿ ಹಿಡನ್‌ ಕ್ಯಾಮೆರಾಗಳನ್ನು ಇರಿಸಿ ರೆಕಾರ್ಡ್ ಮಾಡಲಾಗಿದೆ. ಅದನ್ನು ನಟರುಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ವೀಕ್ಷಿಸುವುದನ್ನು ನಾನು ಖುದ್ದಾಗಿ ನೋಡಿದ್ದೇನೆ” ಎಂದು ದಕ್ಷಿಣ ಭಾರತದ ನಟಿ ರಾಧಿಕಾ ಶರತ್‌ ಕುಮಾರ್ ಶನಿವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ನ್ಯಾಯಮೂರ್ತಿ ಕೆ ಹೇಮಾ ಸಮಿತಿಯ ವರದಿ ಬಿಡುಗಡೆಯಾದ ಬೆನ್ನಲ್ಲೇ ಮಲಯಾಳಂ ವಾಹಿನಿಯೊಂದಕ್ಕೆ ಹಿರಿಯ ನಟಿ ಈ ಹೇಳಿಕೆಯನ್ನು ನೀಡಿದ್ದಾರೆ. ಆರ್‌ಎಂಪಿ ನಾಯಕಿ ಹಾಗೂ ಶಾಸಕಿ ಕೆ ಕೆ ರೆಮಾ ಸೇರಿದಂತೆ ಹಲವಾರು ಮಂದಿ ಈ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕೇರಳ | ಮಲಯಾಳಂ ನಟ, ಶಾಸಕ ಮುಖೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

“ಹೇಮಾ ಸಮಿತಿಯ ವರದಿ ಏಕೆ ವಿಳಂಬವಾಯಿತು” ಎಂದು ಆಶ್ಚರ್ಯ ವ್ಯಕ್ತಪಡಿಸಿರುವ ರಾಧಿಕಾ, “ಮಲಯಾಳಂ ಸಿನಿಮಾ ಉದ್ಯಮ ಮಾತ್ರವಲ್ಲದೆ ಇತರೆ ಸಿನಿಮಾ ಉದ್ಯಮಗಳಲ್ಲಿಯೂ ಮಹಿಳೆಯರ ಮೇಲೆ ಕಿರುಕುಳ ನಡೆಯುತ್ತಿದೆ ಮತ್ತು ಮಹಿಳೆಯರನ್ನು ಕೆಟ್ಟದಾಗಿ ನಡೆಸಿಕೊಳ್ಳುವುದು ಮುಂದುವರಿದಿದೆ” ಎಂದು ಹೇಳಿದರು.

ಈ ಬಗ್ಗೆ ತಮ್ಮ ವೈಯಕ್ತಿಕ ಅನುಭವವನ್ನು ಹಂಚಿಕೊಂಡ ರಾಧಿಕಾ ಶರತ್‌ಕುಮಾರ್, “ನಾನು ಆ ವಿಡಿಯೋಗಳನ್ನು ನೋಡಿದ್ದೇನೆ. ಕ್ಯಾರವಾನ್‌ಗಳಲ್ಲಿ ಮಹಿಳೆಯರು ಬಟ್ಟೆ ಬದಲಾಯಿಸುವ ವಿಡಿಯೋಗಳನ್ನು ನಟರು ತಮ್ಮ ಮೊಬೈಲ್‌ನಲ್ಲೇ ನೋಡುವುದನ್ನು ನಾನು ನೋಡಿದ್ದೇನೆ” ಎಂದು ತಿಳಿಸಿದರು.

“ನನಗೆ ತುಂಬಾ ಕೋಪ ಬಂತು. ನಾನು ಸುರಕ್ಷಿತರಾಗಿರಬೇಕೆಂದು ನಾನು ಭಾವಿಸಿದೆ. ಅದರಿಂದಾಗಿ ನಾನು ಕ್ಯಾರವಾನ್‌ ಬೇಡವೆಂದು ಹೇಳಿ, ನನ್ನ ಹೊಟೇಲ್‌ ಕೋಣೆಗೆ ಹಿಂತಿರುಗಿದೆ” ಎಂದು ನಟಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...