ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣ: ಭಾರತೀಯ ಸೇನೆ ವಾಪಸ್‌ಗೆ ಮಾಲ್ಡೀವ್ಸ್ ಅಧ್ಯಕ್ಷ ಕರೆ

Date:

ಭಾರತ ಹಾಗೂ ಮಾಲ್ಡೀವ್ಸ್ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದ್ದು, ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ತಮ್ಮ ದ್ವೀಪ ಸಮೂಹದಿಂದ ಮಾರ್ಚ್‌ 15ರೊಳಗೆ ಭಾರತೀಯ ಸೇನೆಯ ವಾಪಸಾತಿಗೆ ಕರೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೆಲ ದಿನಗಳ ಹಿಂದೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ ನಂತರ ಮಾಲ್ಡೀವ್ಸ್‌ನ ಮೂವರು ಸಚಿವರು ಪ್ರಧಾನಿ ಹಾಗೂ ಭಾರತದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಂತರದ ದಿನಗಳಲ್ಲಿ ಎರಡೂ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣಗೊಳ್ಳುತ್ತಾ ಹೋಯಿತು.

ಮೊದಲಿಗೆ ಮಾಲ್ಡೀವ್ಸ್ ಸರ್ಕಾರವು ಸಚಿವರ ಹೇಳಿಕೆಗೂ ಹಾಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿ ಮೂವರು ಸಚಿವರನ್ನು ಅಮಾನತುಗೊಳಿಸಿತು. ನಂತರ ಎರಡೂ ರಾಷ್ಟ್ರಗಳು ಆಯಾ ದೇಶಗಳ ರಾಯಭಾರಿಗಳನ್ನು ಕರೆದು ಹೇಳಿಕೆಗಳನ್ನು ಪಡೆದುಕೊಂಡವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂದು ಪಕೋಡ, ಇಂದು ಶ್ರೀರಾಮ ಭಜನೆ; ನಿರುದ್ಯೋಗ ನಿವಾರಣೆಯಾಯಿತೇ?

2023ರಲ್ಲಿ ಮಾಲ್ಡೀವ್ಸ್ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಮೊಹಮ್ಮದ್ ಮುಯಿಝು ಭಾರತದ ಸಂಬಂಧಗಳನ್ನು ಕಡಿಮೆಗೊಳಿಸಿ ಚೀನಾ ಜೊತೆಗಿನ ಸಂಬಂಧ ಹೆಚ್ಚಿಸುವುದಾಗಿ ಹೇಳಿದ್ದರು. ಆದರೀಗ ಅಧಿಕೃತವಾಗಿ ಭಾರತೀಯ ಸೇನೆಯ ವಾಪಸಾತಿಗೆ ಕರೆ ನೀಡಿದ್ದಾರೆ.

ಭಾರತವು ಕಳೆದ ಹಲವು ವರ್ಷಗಳಿಂದ ಹಿಂದಿನ ಸರ್ಕಾರಗಳ ಅನುಮತಿಯ ಮೇರೆಗೆ ಮಾಲ್ಡೀವ್ಸ್‌ನಲ್ಲಿ ಸೇನೆಯನ್ನು ಬೀಡುಬಿಟ್ಟಿದೆ. ಸರ್ಕಾರಿ ಅಂಕಿಅಂಶಗಳ ಪ್ರಕಾರ ಪ್ರಸ್ತುತ 88 ಭಾರತೀಯ ಸೇನಾ ಸಿಬ್ಬಂದಿ ಮಾಲ್ಡೀವ್ಸ್‌ನಲ್ಲಿ ಉಪಸ್ಥಿತರಿದ್ದಾರೆ. ಭಾರತೀಯ ಸೇನೆಯು ಕಡಲ ಭದ್ರತೆ ಹಾಗೂ ವಿಪತ್ತು ಪರಿಹಾರ ಕಾರ್ಯದಲ್ಲಿ ಮಾಲ್ಡೀವ್ಸ್‌ಗೆ ನೆರವು ನೀಡುತ್ತಿದೆ.

ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ ಮಾಲ್ಡೀವ್ಸ್ ಅಧಿಕಾರಿ ನಜೀಮ್ ಇಬ್ರಾಹಿಂ, “ಭಾರತೀಯ ಸೇನಾ ಸಿಬ್ಬಂದಿ ಮಾಲ್ಡೀವ್ಸ್‌ನಲ್ಲಿ ಉಳಿದುಕೊಳ್ಳಬಾರದು. ಇದು ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಆಡಳಿತ ನಿಯಮವಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...