ಮಾಲೆಗಾಂವ್ ಸ್ಫೋಟ ಪ್ರಕರಣ | ತೀರ್ಪಿಗೂ ಮುನ್ನ ನ್ಯಾಯಾಧೀಶರ ವರ್ಗಾವಣೆ; 17 ವರ್ಷಗಳಲ್ಲಿ ಐದನೇ ಬಾರಿ!

Date:

ಬಿಜೆಪಿ ಹಿರಿಯ ನಾಯಕಿ ಪ್ರಜ್ಞಾ ಸಿಂಗ್ ಠಾಕೂರ್‌ ಪ್ರಮುಖ ಆರೋಪಿಯಾಗಿರುವ 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ಎನ್‌ಐಎ ನ್ಯಾಯಾಲಯದ ನ್ಯಾಯಾಧೀಶ ಎ ಕೆ ಲಹೋಟೆ ಅವರನ್ನು ವರ್ಗಾಯಿಸಲಾಗಿದೆ. ನ್ಯಾಯಾಲಯ ಈ ಪ್ರಕರಣದ ತೀರ್ಪು ನೀಡಲು ಇನ್ನು ಕೆಲವೇ ದಿನಗಳು ಇರುವಾಗ ನ್ಯಾಯಾಧೀಶರ ವರ್ಗಾವಣೆಯಾಗಿದೆ. ಕಳೆದ 17 ವರ್ಷಗಳಲ್ಲಿ ಐದನೇ ಬಾರಿ ಈ ರೀತಿ ನಡೆದಿದೆ.

ಬಾಂಬೆ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್, ಲಹೋಟಿ ಮತ್ತು ಇತರ ನ್ಯಾಯಾಧೀಶರ ವರ್ಗಾವಣೆ ಆದೇಶವನ್ನು ಹೊರಡಿಸಿದೆ. ಜೂನ್ 9ರಂದು ಬೇಸಿಗೆ ರಜೆಯ ನಂತರ ನ್ಯಾಯಾಲಯಗಳು ಮತ್ತೆ ತೆರೆದಾಗ ಈ ಆದೇಶ ಜಾರಿಗೆ ಬರಲಿದೆ. ನ್ಯಾಯಾಧೀಶರನ್ನು ನಾಸಿಕ್‌ಗೆ ವರ್ಗಾಯಿಸಲಾಗಿದೆ.

ಇದನ್ನು ಓದಿದ್ದೀರಾ? ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ; ದ್ವೇಷ ಭಾಷಣದಲ್ಲೇ ಫೇಮಸ್ ಆಗಿದ್ದವರು ಔಟ್!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಿಚಾರಣೆ ಮುಕ್ತಾಯವಾಗಿರುವ ಪ್ರಕರಣಗಳು ತೀರ್ಪನ್ನು ಶೀಘ್ರವೇ ನೀಡುವಂತೆ ತಿಳಿಸಲಾಗಿದೆ. ಎಲ್ಲಾ ಭಾಗಶಃ ವಿಚಾರಣೆಗಳ ದಾಖಲೆಗಳನ್ನು ಮುಂದಿನ ನ್ಯಾಯಾಧೀಶರಿಗೆ ಹಸ್ತಾಂತರಿಸುವಂತೆ ಸೂಚಿಸಲಾಗಿದೆ.

17 ವರ್ಷಗಳ ಹಿಂದಿನ ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನಾಲ್ವರು ನ್ಯಾಯಾಧೀಶರು ಈಗಾಗಲೇ ವರ್ಗಾವಣೆಯಾಗಿದ್ದಾರೆ. ಇದೀಗ ವರ್ಗಾವಣೆಗೊಳ್ಳುತ್ತಿರುವ ಐದನೇ ನ್ಯಾಯಾಧೀಶರಾಗಿದ್ದಾರೆ.

ಈ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್, ಮೇಜರ್ (ನಿವೃತ್ತ) ರಮೇಶ್ ಉಪಾಧ್ಯಾಯ, ಅಜಯ್ ರಹಿರ್ಕರ್, ಸುಧಾಕರ್ ದ್ವಿವೇದಿ, ಸುಧಾಕರ್ ಚತುರ್ವೇದಿ ಮತ್ತು ಸಮೀರ್ ಕುಲಕರ್ಣಿ ಅವರು ಆರೋಪಿಗಳಾಗಿದ್ದಾರೆ. ಇವರೆಲ್ಲರ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ದೂರು ದಾಖಲಾಗಿದ್ದು, 17 ವರ್ಷಗಳಿಂದ ವಿಚಾರಣೆ ನಡೆಯುತ್ತಲೇ ಇದೆ.

ನ್ಯಾಯಾಧೀಶರ ವರ್ಗಾವಣೆಯಿಂದ ಈ ಪ್ರಕರಣದ ವಿಚಾರಣೆ ಇನ್ನಷ್ಟೂ ತಡವಾಗುತ್ತಿದೆ, ನ್ಯಾಯ ಸಿಗುವುದು ವಿಳಂಬವಾಗುತ್ತಿದೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ವಿಶೇಷ ನ್ಯಾಯಾಧೀಶರ ನೇಮಕ ವಿಸ್ತರಣೆಗೆ ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಚಿಂತನೆ ನಡೆಸಿರುವುದಾಗಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮಾಲೆಗಾಂವ್‌ ಪ್ರಕರಣ | ವಿಚಾರಣೆಗೆ ಬಾರದಿದ್ದರೆ ಕ್ರಮ; ಪ್ರಮುಖ ಆರೋಪಿ ಪ್ರಜ್ಞಾ ಸಿಂಗ್‌ಗೆ ಕೋರ್ಟ್‌ ಎಚ್ಚರಿಕೆ

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಸಂತ್ರಸ್ತರ ಪರ ವಕೀಲ ಶಾಹಿದ್ ನದೀಮ್, “ನಾವು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ. ತೀರ್ಪು ಬರುವವರೆಗೆ ಅವರ (ನ್ಯಾಯಾಧೀಶರ) ಅಧಿಕಾರಾವಧಿಯನ್ನು ವಿಸ್ತರಿಸುವಂತೆ ಕೋರಿ ನಾವು ಈ ಹಿಂದೆ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಸಲ್ಲಿಸಿದ್ದೇವೆ” ಎಂದಿದ್ದಾರೆ.

ಶನಿವಾರ ನಡೆದ ಕೊನೆಯ ವಿಚಾರಣೆಯಲ್ಲಿ, ನ್ಯಾಯಾಧೀಶ ಲಹೋಟಿ ಅವರು ಏಪ್ರಿಲ್ 15ರೊಳಗೆ ಉಳಿದ ವಾದಗಳನ್ನು ಪೂರ್ಣಗೊಳಿಸಲು ಪ್ರಾಸಿಕ್ಯೂಷನ್ ಮತ್ತು ಪ್ರತಿವಾದಿಗಳಿಗೆ ನಿರ್ದೇಶನ ನೀಡಿದರು. ಅದಾದ ಬಳಿಕ ಈ ಪ್ರಕರಣದ ತೀರ್ಪು ನೀಡುವ ಸಾಧ್ಯತೆಯಿತ್ತು. ಆದರೆ ಅದಕ್ಕೂ ಮುನ್ನವೇ ನ್ಯಾಯಾಧೀಶರ ವರ್ಗಾವಣೆಯಾಗಿದೆ. ಈ ಪ್ರಕರಣದ ತನಿಖೆ ನಡೆಸುವವರು ತೀರ್ಪು ನೀಡುವುದಕ್ಕೂ ಮುನ್ನವೇ ವರ್ಗಾವಣೆಯಾಗುವುದು ಸದ್ಯ ಅನುಮಾನ ಹುಟ್ಟಿಸಿದೆ.

ಉತ್ತರ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮುಂಬೈನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಮಾಲೆಗಾಂವ್ ಪಟ್ಟಣದ ಮಸೀದಿ ಬಳಿ 2008ರ ಸೆಪ್ಟೆಂಬರ್ 29ರಂದು ಮೋಟಾರ್ ಸೈಕಲ್‌ಗೆ ಕಟ್ಟಲಾಗಿದ್ದ ಸ್ಪೋಟಕವು ಸ್ಪೋಟಗೊಂಡು ಆರು ಮಂದಿ ಸಾವನ್ನಪ್ಪಿದ್ದರು. ಸುಮಾರು 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ವಿಚಾರಣೆಯ ಸಮಯದಲ್ಲಿ ಪ್ರಾಸಿಕ್ಯೂಷನ್ 323 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದರೆ, ಪ್ರತಿವಾದಿ 8 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದರು. 2011ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ವರ್ಗಾಯಿಸುವ ಮೊದಲು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಪ್ರಕರಣದ ತನಿಖೆ ನಡೆಸುತ್ತಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...