2002 ಗಲಭೆಯ ಬಿಬಿಸಿ ಸಾಕ್ಷ್ಯಚಿತ್ರ; ವಿಪಕ್ಷಗಳ ವಿರೋಧದ ನಡುವೆ ನಿರ್ಣಯ ತಂದ ಬಿಜೆಪಿ ರಾಜ್ಯಗಳು

Date:

  • 2002ರ ಗುಜರಾತ್‌ ಗಲಭೆಗಳನ್ನು ಒಳಗೊಂಡಿರುವ ಸಾಕ್ಷ್ಯಚಿತ್ರ
  • ಭಾರತದಲ್ಲಿ ಬಿಡುಗಡೆಗೂ ಮೊದಲೇ ನಿಷೇಧಿಸಿದ್ದ ಕೇಂದ್ರ ಸರ್ಕಾರ

ಗುಜರಾತ್ ಗಲಭೆ ಕುರಿತು ಬಿಬಿಸಿ ಸಾಕ್ಷ್ಯಚಿತ್ರದ ವಿರುದ್ಧ ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಮಹಾರಾಷ್ಟ್ರವು ಗಲಭೆ ಕುರಿತ ನಿರ್ಣಯ ಅಂಗೀಕರಿಸಿದ ಬಿಜೆಪಿ ಆಡಳಿತದ ನಾಲ್ಕನೇ ರಾಜ್ಯ. ವಿಪಕ್ಷಗಳ ವಿರೋಧದ ನಡುವೆಯೇ ಈ ನಿರ್ಣಯಗಳನ್ನು ಅಂಗೀಕರಿಸಲಾಗಿದೆ. 

ಶನಿವಾರ (ಮಾ.26) ಬಿಜೆಪಿ ಶಾಸಕ ಅತುಲ್ ಭಟ್ಕಳಕರ್ ಮಂಡಿಸಿದ ನಿರ್ಣಯವನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು. ಕಲಾಪ ಕೈಗೆತ್ತಿಕೊಂಡಾಗ ಪ್ರತಿಪಕ್ಷಗಳು ಸದನದಲ್ಲಿ ಹಾಜರಿರಲಿಲ್ಲ.

ಮಾರ್ಚ್ 23ರಂದು, ಅಸ್ಸಾಂ ವಿಧಾನಸಭೆಯಲ್ಲಿ ಬಿಬಿಸಿ ಸಾಕ್ಷ್ಯಚಿತ್ರದ ವಿರುದ್ಧ ನಿರ್ಣಯ ಅಂಗೀಕರಿಸಲಾಗಿತ್ತು. ಸಾಕ್ಷ್ಯಚಿತ್ರವು ನಿರ್ಣಯ ಮಂಡಿಸಿದ ಬಿಜೆಪಿ ಶಾಸಕ ಭುಬೊನ್ ಪೆಗು “ದುರುದ್ದೇಶಪೂರಿತ, ಅಪಾಯಕಾರಿ ಕಾರ್ಯಸೂಚಿಯ ವಿರುದ್ಧ ಧಾರ್ಮಿಕ ಸಮುದಾಯಗಳನ್ನು ಪ್ರಚೋದಿಸುತ್ತದೆ ಹಾಗೂ ಭಾರತದ ಜಾಗತಿಕ ಸ್ಥಾನಮಾನ ಹಾಳುಮಾಡುತ್ತದೆ. ಇದಕ್ಕೆ ಅಗತ್ಯ ಸಂಭವನೀಯ ಕ್ರಮ ಜರುಗಿಸಬೇಕೆಂದು” ಒತ್ತಾಯಿಸಲಾಯಿತು. ರಾಜ್ಯ ವಿಧಾನಸಭೆಗೆ ಸಂಬಂಧಿಸಿದ ಪ್ರಶ್ನೆಯಲ್ಲ ಎಂದು ಕಾಂಗ್ರೆಸ್ ಶಾಸಕ ದೇಬದ್ರತಾ ಸೈಕಿಯಾ ಅವರು ನಿರ್ಣಯವನ್ನು ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಟ್ವಿಟರ್‌ ಬಯೋ ಬದಲಿಸಿದ ರಾಹುಲ್‌ ಗಾಂಧಿ

ಮಾರ್ಚ್ 13ರಂದು, ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಶೈಲೇಂದ್ರ ಜೈನ್, ಖಾಸಗಿ ಸದಸ್ಯರ ನಿರ್ಣಯವನ್ನು ಮಂಡಿಸಿದರು ಮತ್ತು ಸಚಿವ ನರೋತ್ತಮ್ ಮಿಶ್ರಾ ಅವರು ಅನುಮೋದಿಸಿದ ನಂತರ ರಾಜ್ಯ ಶಾಸಕಾಂಗವು ಬಿಬಿಸಿ ವಿರುದ್ಧ ಖಂಡನಾ ನಿರ್ಣಯ ಅಂಗೀಕರಿಸಿತು.

ಮಾರ್ಚ್ 11ರಂದು ಗುಜರಾತ್ ವಿಧಾನಸಭೆಯು ಸಾಕ್ಷ್ಯಚಿತ್ರದ ವಿರುದ್ಧ ನಿರ್ಣಯ ಮಂಡಿಸಿದ ಮೊದಲನೆಯ ರಾಜ್ಯವಾಗಿದೆ. ಬಿಜೆಪಿಯ ಸೋಜಿತ್ರಾ ಶಾಸಕ ವಿಪುಲ್ ಪಟೇಲ್ ಮಂಡಿಸಿದ ಖಾಸಗಿ ಸದಸ್ಯರ ನಿರ್ಣಯವನ್ನು ಆಡಳಿತ ಪಕ್ಷದ ಶಾಸಕರು ಸುಮಾರು 90 ನಿಮಿಷಗಳ ಕಾಲ ಚರ್ಚಿಸಿದ ನಂತರ ಅಂಗೀಕರಿಸಲಾಯಿತು. ಆಡಳಿತ ಪಕ್ಷದ ನಿರ್ಣಯಕ್ಕೆ ಕಾಂಗ್ರೆಸ್ ಶಾಸಕರು ವಿರೋಧಿಸಿದ್ದರು.

2002ರ ಗುಜರಾತ್‌ ಗಲಭೆಗಳನ್ನು ಒಳಗೊಂಡಿರುವ ‘ಇಂಡಿಯಾ: ದಿ ಮೋದಿ ಕ್ವಷ್ಚನ್’ ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರವನ್ನು ಬಿಬಿಸಿ ತಯಾರಿಸಿದೆ. ಗುಜರಾತ್ ಗಲಭೆಯಲ್ಲಿ ಅಂದಿನ ಸಿಎಂ ಆಗಿದ್ದ ನರೇಂದ್ರ ಮೋದಿ ಅವರು ಕೈಗೊಂಡ ನಿರ್ಧಾರಗಳನ್ನು ಸಾಕ್ಷ್ಯಚಿತ್ರದಲ್ಲಿ ಟೀಕಿಸಲಾತ್ತು. ಸಾಕ್ಷ್ಯಚಿತ್ರವನ್ನು 2 ಭಾಗಗಳಲ್ಲಿ ನಿರ್ಮಾಣ ಮಾಡಲಾಗಿದೆ. ಆದರೆ ಈ ವಿವಾದಿತ ಸಾಕ್ಷ್ಯಚಿತ್ರವನ್ನು ಬಿಡುಗಡೆಗೂ ಮೊದಲೇ ಕೇಂದ್ರ ಸರ್ಕಾರ ನಿಷೇಧಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...