ಈ ಸಭೆ ದೆಹಲಿ ಸುಗ್ರೀವಾಜ್ಞೆ ವಿಚಾರ ಚರ್ಚಿಸಲು ಅಲ್ಲ ಎಂದು ಆಪ್-ಕಾಂಗ್ರೆಸ್‌ಗೆ ಬುದ್ಧಿ ಹೇಳಿದ ಮಮತಾ ಬ್ಯಾನರ್ಜಿ

Date:

  • ಚಹಾ ಸೇವಿಸಿ, ಬಿಸ್ಕೆಟ್ ತಿಂದು ಬಗೆಹರಿಸಿಕೊಳ್ಳಿ. ಗಮನಿಸಬೇಕಾದ ಅನೇಕ ಸಮಸ್ಯೆಗಳಿವೆ
  • ದೊಡ್ಡ ಪಕ್ಷವಾಗಿ ಪ್ರತಿಪಕ್ಷಗಳನ್ನು ಬೆಂಬಲಿಸುವಂತೆ ಕಾಂಗ್ರೆಸ್‌ಗೆ ಒತ್ತಾಯ

ದೆಹಲಿ ಸುಗ್ರೀವಾಜ್ಞೆ ಕುರಿತು ಇರುವ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವಂತೆ ಆಮ್‌ ಆದ್ಮಿ ಪಕ್ಷ (ಎಎಪಿ) ಹಾಗೂ ಕಾಂಗ್ರೆಸ್‌ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲಹೆ ನೀಡಿದರು.

ಪಾಟ್ನಾದಲ್ಲಿ ಪ್ರತಿಪಕ್ಷಗಳ ಸಭೆಯಲ್ಲಿ ಮಮತಾ ಅವರು ಎರಡೂ ಪಕ್ಷಗಳಿಗೆ ಹೀಗೆ ಹೇಳಿದರು. ಚಹಾ ಬಿಸ್ಕತ್ ಸೇವಿಸುತ್ತ ಸುಗ್ರೀವಾಜ್ಞೆ ಸಮಸ್ಯೆ ಬಗೆಹರಿಸಿಕೊಳ್ಳಿ, ಇತರ ಗಂಭೀರ ಸಮಸ್ಯೆಗಳ ಪರಿಹಾರದತ್ತ ಗಮನ ಹರಿಸಿ ಎಂದೂ ಕಿವಿಮಾತು ಹೇಳಿದರು.

ಪ್ರತಿಪಕ್ಷಗಳ ಒಗ್ಗೂಡಿಸುವ ಕುರಿತ ಚರ್ಚೆಗಳು ನಡೆಯುವ ಈ ಸಭೆ ದೆಹಲಿ ಸುಗ್ರೀವಾಜ್ಞೆ ವಿಚಾರ ಚರ್ಚಿಸಲು ಸೂಕ್ತ ವೇದಿಕೆಯಲ್ಲ ಎಂದೂ ಮಮತಾ ಅವರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಗ್ರೀವಾಜ್ಞೆ ವಿಚಾರದಲ್ಲಿ ಎಎಪಿಯನ್ನು ಬೆಂಬಲಿಸುವ ಬಗ್ಗೆ ಕಾಂಗ್ರೆಸ್‌ ಸಭೆಯ ನಂತರ ತನ್ನ ನಿಲುವು ಪ್ರಕಟಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಪಟ್ಟು ಹಿಡಿದಾಗ ಮಮತಾ ಬ್ಯಾನರ್ಜಿ ಮಧ್ಯಪ್ರವೇಶಿಸಿ ಕೇಜ್ರಿವಾಲ್‌ ಅವರನ್ನು ಶಾಂತಗೊಳಿಸಿದರು.

ದೆಹಲಿ ಸುಗ್ರೀವಾಜ್ಞೆ ಕುರಿತು ಪ್ರತಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಎಪಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿದರು. ಸಂವಿಧಾನ ವಿರೋಧಿಯಾದ ಯಾವುದನ್ನೂ ಪಕ್ಷ ಬೆಂಬಲಿಸುವುದಿಲ್ಲ ಎಂದು ಖರ್ಗೆ ಹೇಳಿದ್ದರು.

ಕೆಲವು ಸಮಸ್ಯೆಗಳ ಬಗ್ಗೆ ದನಿ ಎತ್ತಲು ಪಕ್ಷವು ನಿರ್ದಿಷ್ಟ ಕಾರ್ಯವಿಧಾನವನ್ನು ಹೊಂದಿದೆ. ಸುಗ್ರೀವಾಜ್ಞೆ ವಿಚಾರದಲ್ಲಿ ನಂತರದ ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದು ಸಭೆಯಲ್ಲಿ ಕಾಂಗ್ರೆಸ್‌ ಹೇಳಿದೆ ಎಂದು ವರದಿಯಾಗಿದೆ.

ಸುಗ್ರೀವಾಜ್ಞೆ ವಿರುದ್ಧವಾಗಿ ಎಎಪಿಗೆ ಬೆಂಬಲಿಸುವ ವಿಚಾರದಲ್ಲಿ ಕಾಂಗ್ರೆಸ್‌ ತನ್ನ ನಿಲುವು ಸ್ಪಷ್ಟಪಡಿಸದಿದ್ದರೆ ಪ್ರತಿಪಕ್ಷಗಳ ಸಭೆಯನ್ನು ಬಹಿಷ್ಕರಿಸುವುದಾಗಿ ಈ ಹಿಂದೆ ಕೇಜ್ರಿವಾಲ್‌ ಹೇಳಿದ್ದರು. ಆದರೆ ಅಂತಹ ಯಾವ ಬೆಳವಣಿಗೆಯೂ ಆಗಲಿಲ್ಲ ಎಂದು ಹೇಳಲಾಗಿದೆ.

ಸಭೆಯಲ್ಲಿ ಹಾಜರಿದ್ದ ಇತರ ಪ್ರತಿಪಕ್ಷಗಳು ಸುಗ್ರೀವಾಜ್ಞೆ ವಿಚಾರದಲ್ಲಿ ಕಾಂಗ್ರೆಸ್‌ ನಿಲುವು ಬೆಂಬಲಿಸಿದವು. ಸಭೆಯಲ್ಲಿ ಭಾಷಣದ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸುಗ್ರೀವಾಜ್ಞೆ ವಿಚಾರವನ್ನು ಪ್ರಸ್ತಾಪಿಸಲಿಲ್ಲ. ಇದು ಎಎಪಿ ಮುನಿಸಿಗೆ ಕಾರಣವಾಯಿತು.

“ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು ರಾಹುಲ್‌ ಗಾಂಧಿ ಮತ್ತು ಕೇಜ್ರಿವಾಲ್‌ ಅವರ ಸಮಾನ ದೂರದಲ್ಲಿ ಕುಳಿತಿದ್ದರು. ಇಬ್ಬರ ನಡುವೆ ದೆಹಲಿ ಸುಗ್ರೀವಾಜ್ಞೆ ವಿಚಾರ ಕಾವು ಪಡೆಯುತ್ತಿದ್ದಂತೆ ಮಮತಾ ಮಧ್ಯಪ್ರವೇಶಿಸಿದರು. ಚಹಾ ಸೇವಿಸಿ, ಬಿಸ್ಕೆಟ್ ತಿಂದು ಬಗೆಹರಿಸಿಕೊಳ್ಳಿ. ಗಮನ ಹರಿಸಬೇಕಾದ ಅನೇಕ ಸಮಸ್ಯೆಗಳಿವೆ, ಅವುಗಳ ಪರಿಹಾರದತ್ತ ನೋಡಿ ಎಂದು ತಿಳಿಸಿದರು” ಎಂದು ವರದಿ ಹೇಳಿದೆ.

ಬಿಜೆಪಿ ಮಣಿಸಲು ಕಾಂಗ್ರೆಸ್‌ಗೆ ಎಲ್ಲ ಪ್ರತಿಪಕ್ಷಗಳು ಬೆಂಬಲ ನೀಡುವುದು ಮುಖ್ಯವಾಗಿದೆ ಎಂದು ಮಮತಾ ಸಭೆಯಲ್ಲಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೇಘಾಲಯ | ಉದ್ಘಾಟನೆಗೊಂಡ ಆರು ತಿಂಗಳಲ್ಲೇ ಪಿ.ಎ ಸಂಗ್ಮಾ ಫುಟ್ಬಾಲ್‌ ಕ್ರೀಡಾಂಗಣ ತಡೆಗೋಡೆ ಕುಸಿತ

2024ರ ಲೋಕಸಭೆ ಚುನಾವಣೆಯಲ್ಲಿ ಪ್ರತಿ ರಾಜ್ಯದಲ್ಲಿಯೂ ದೊಡ್ಡ ಪಕ್ಷವೊಂದರ ನೇತೃತ್ವದಲ್ಲಿ ಪ್ರತಿಪಕ್ಷಗಳ ಹೋರಾಟ ಇರಬೇಕು. ಕಾಂಗ್ರೆಸ್ ಎಲ್ಲ ಪಕ್ಷಗಳ ನೇತೃತ್ವ ವಹಿಸಬೇಕು ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಸಭೆಯಲ್ಲಿ ಹೇಳಿದರು.

ಶಿಮ್ಲಾದಲ್ಲಿ ಜುಲೈ ಎರಡನೇ ವಾರ ಮುಂದಿನ ಪ್ರತಿಪಕ್ಷಗಳ ಸಭೆ ನಡೆಯಲಿದೆ. ಅದರ ನಂತರದಲ್ಲಿ ದಕ್ಷಿಣ ರಾಜ್ಯಗಳಲ್ಲಿ ಸಭೆ ನಡೆಯಲಿದೆ ಎಂದು ಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...