ಗಡಿ ಪ್ರದೇಶಗಳಲ್ಲಿನ ಮತದಾರರಿಗೆ ಬಿಎಸ್‌ಎಫ್‌ ಯೋಧರಿಂದ ಬೆದರಿಕೆ: ಮಮತಾ ಬ್ಯಾನರ್ಜಿ ಆರೋಪ

Date:

  • ಪಂಚಾಯತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಮತಾ ಬ್ಯಾನರ್ಜಿ ಮಾತು
  • 2021ರಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಬಿಎಸ್‌ಎಫ್‌ ಕಾಯ್ದೆಗೆ ತಿದ್ದುಪಡಿ

ರಾಜ್ಯದಲ್ಲಿ ನಡೆಯಲಿರುವ ಪಂಚಾಯತ್ ಚುನಾವಣೆಯಲ್ಲಿ ಮತದಾನ ಮಾಡದಂತೆ ಗಡಿ ಗ್ರಾಮಗಳಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಯೋಧರು ಜನರಿಗೆ ಬೆದರಿಕೆ ಒಡ್ಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಜೂನ್ 26) ಆರೋಪಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಸಂಬಂಧ ಬಿಎಸ್‌ಎಫ್ ಯೋಧರ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇರಿಸಬೇಕು ಎಂದು ಮಮತಾ ಅವರು ರಾಜ್ಯ ಪೊಲೀಸರಿಗೆ ಸೂಚನೆ ನೀಡಿದರು.

ಮಮತಾ ಬ್ಯಾನರ್ಜಿ ಅವರು ಪಂಚಾಯತ್ ಚುನಾವಣೆಯ ಹಿನ್ನೆಲೆ ಕೂಚ್ ಬೆಹಾರ್ನಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಡಿ ಗ್ರಾಮಗಳಲ್ಲಿ ಬಿಎಸ್ಎಫ್ ಯೋಧರು ಮನೆಗೆ ತೆರಳಿ ಪಂಚಾಯತ್‌ ಚುನಾವಣೆಯಲ್ಲಿ ಮತದಾನ ಮಾಡದಂತೆ ಜನರಿಗೆ ಬೆದರಿಕೆ ಒಡ್ಡುವ ಬಗ್ಗೆ ನನಗೆ ಮಾಹಿತಿ ದೊರೆತಿದೆ. ಜನರು ಯಾವುದೇ ಕಾರಣಕ್ಕೂ ಭಯಪಡದೆ ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ನಾನು ಮನವಿ ಮಾಡುತ್ತೇನೆ” ಎಂದು ಮಮತಾ ಹೇಳಿದ್ದಾರೆ.

“ಕಾನೂನು ಸುವ್ಯವಸ್ಥೆ ರಾಜ್ಯ ಪಟ್ಟಿಗೆ ಸೇರಿದ್ದು, ಕೇಂದ್ರ ಸರ್ಕಾರಕ್ಕೆ ಇದರಲ್ಲಿ ಯಾವುದೇ ಪಾತ್ರ ಇಲ್ಲ” ಎಂದು ಮಮತಾ ಕುಟುಕಿದರು.

ಮಮತಾ ಬ್ಯಾನರ್ಜಿ ಅವರು ಕಳೆದ ವರ್ಷ ರಾಜ್ಯದ ಗಡಿಯಲ್ಲಿ ಬಿಎಸ್ಎಫ್ ಯೋಧರು ಕಳ್ಳಸಾಗಣೆದಾರರೆಂಬ ಶಂಕೆಯ ಮೇರೆಗೆ ಗ್ರಾಮಸ್ಥರ ಮೇಲಿನ ಗುಂಡಿನ ದಾಳಿಯನ್ನು ಉಲ್ಲೇಖಿಸಿದರು.

“ಇಂತಹ ಘಟನೆಗಳಲ್ಲಿ ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ. ಬಿಎಸ್ಎಫ್ ಯೋಧರಿಗೆ ಯಾರ ಮೇಲೂ ಗುಂಡು ಹಾರಿಸಿ ಕೊಲ್ಲುವ ಅಧಿಕಾರವಿಲ್ಲ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ” ಎಂದು ಅವರು ಹೇಳಿದರು.

“ಮುಂದಿನ ತಿಂಗಳು ರಾಜ್ಯದಲ್ಲಿ ನಡೆಯುವ ಮೂರು ಹಂತದ ಪಂಚಾಯತ್ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಿಜೆಪಿಯನ್ನು ಸೋಲಿಸಲಿದೆ. ಕೇಂದ್ರದಲ್ಲೂ ಬಿಜೆಪಿಯನ್ನು ಸೋಲಿಸಿ ದೇಶದಲ್ಲಿ ಅಭಿವೃದ್ಧಿ ಪರ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ” ಎಂದು ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಗೋಮಾಂಸ ಕಳ್ಳಸಾಗಣೆ ಆರೋಪ, ಮುಸ್ಲಿಂ ವ್ಯಕ್ತಿ ಹತ್ಯೆ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 2021ರಲ್ಲಿ ಬಿಎಸ್‌ಎಫ್‌ ಕಾಯ್ದೆಗೆ ತಿದ್ದುಪಡಿ ತಂದಿತು. ಈ ತಿದ್ದುಪಡಿಯು ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಅಂತಾರಾಷ್ಟ್ರೀಯ ಗಡಿಯಿಂದ ಈ ಮುನ್ನ ಇದ್ದ 15 ಕಿ.ಮೀ ಬದಲಿಗೆ 50 ಕಿ.ಮೀ ವ್ಯಾಪ್ತಿಯಲ್ಲಿ ಶೋಧ, ವಶಪಡಿಸಿಕೊಳ್ಳುವಿಕೆ ಮತ್ತು ಬಂಧನ ಮಾಡಲು ಬಿಎಸ್‌ಎಫ್‌ಗೆ ಅಧಿಕಾರ ನೀಡುತ್ತದೆ.

ರಾಜ್ಯದಲ್ಲಿ ಜುಲೈ 8 ರಂದು ಪಂಚಾಯತ್‌ ಚುನಾವಣೆಯು ನಡಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...