ಲೈಂಗಿಕ ದೌರ್ಜನ್ಯವೆಸಗಿದ ಆರೋಪ: ಬಂಗಾಳ ರಾಜ್ಯಪಾಲರ ರಾಜೀನಾಮೆಗೆ ಮಮತಾ ಆಗ್ರಹ

Date:

ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹೊತ್ತಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ ವಿ ಆನಂದ್‌ ಬೋಸ್‌ ಅವರು ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

ರಾಜ್ಯಪಾಲರ ವಿರುದ್ಧ ಕೋಲ್ಕತ್ತಾ ಪೊಲೀಸರು ತನಿಖೆಯನ್ನು ಮುಂದುವರೆಸುತ್ತಿದ್ದು, ಆರೋಪಿ ಸ್ಥಾನದಲ್ಲಿರುವ ಅವರು ರಾಜ್ಯದ ಸಾಂವಿಧಾನಿಕ ಮುಖ್ಯಸ್ಥನ ಹುದ್ದೆಯಲ್ಲಿ ಮುಂದುವರಿಯದೆ ರಾಜ ಭವನಕ್ಕೂ ಕೂಡ ಭೇಟಿ ನೀಡಬಾರದು ಎಂದು ಹೇಳಿದರು.

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಚುನಾವಣಾ ಪ್ರಚಾರ ಕೈಗೊಂಡ ಅವರು, ತಾನು ರಾಜ್ಯಪಾಲರ ಪಕ್ಕದಲ್ಲಿ ಕುಳಿತರೆ ಅದು ಪಾಪಕ್ಕೆ ಸಮಾನವಾಗುತ್ತದೆ. ರಾಜ್ಯಪಾಲರು ತಮ್ಮ ವಿರುದ್ಧ ಇಂತಹ ಆರೋಪಗಳು ಕೇಳಿ ಬಂದರೂ ತಾವು ಏಕೆ ರಾಜೀನಾಮೆ ನೀಡಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮಮತಾ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮ್ಮನ್ನು ಏನೆಂದು ಭಾವಿಸಿಕೊಂಡಿದ್ದೀರಿ? ಮಹಿಳೆಗೆ ಏಕೆ ಚಿತ್ರಹಿಂಸೆ ನೀಡಿದ್ದೀರಿ. ರಾಜ್ಯಪಾಲರು ಹೇಳುತ್ತಾರೆ ‘ದೀದಿಗಿರಿ’ಯನ್ನು ಸಹಿಸಿಕೊಳ್ಳುವುದಿಲ್ಲ. ನಾನು ಹೇಳುತ್ತೇನೆ ನಿಮ್ಮ ದಾದಾಗಿರಿ ಇಲ್ಲಿ ಕೆಲಸ ಮಾಡುವುದಿಲ್ಲ” ಎಂದು ರಾಜ್ಯಪಾಲರ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

“ರಾಜ್ಯಪಾಲರು ತಿರುಚಿದ ವಿಡಿಯೋ ಬಿಡುಗಡೆ ಮಾಡಿದ್ದಾರೆ. ನಾನು ಪೂರ್ಣ ದೃಶ್ಯ ನೋಡಿದ್ದೇನೆ. ಇದು ಆಘಾತಕಾರಿ ದೃಶ್ಯಗಳನ್ನು ಒಳಗೊಂಡಿದೆ. ಸತ್ಯ ಇನ್ನಷ್ಟೇ ಹೊರಬರಬೇಕಿದೆ. ನಾನು ಇನ್ನೊಂದು ವಿಡಿಯೋವನ್ನು ನೋಡಿದ್ದು, ನಿಮ್ಮ ನೆಡವಳಿಕೆ ನಾಚಿಕೆಗೇಡು. ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವವರೆಗೂ ನಾನು ರಾಜಭವನಕ್ಕೆ ಭೇಟಿ ನೀಡುವುದಿಲ್ಲ” ಎಂದು ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನದ 361(2) ಹಾಗೂ (3) ವಿಧಿಯ ಅನ್ವಯ ರಾಷ್ಟ್ರಪತಿ ಹಾಗೂ ರಾಜ್ಯಪಾಲರ ವಿರುದ್ಧ ಯಾವುದೇ ಅಪರಾಧಿ ವಿಚಾರಣೆಗಳು ಎದುರಾದರೆ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರಿಯುವಂತೆ ವಿನಾಯಿತಿ ನೀಡಿದೆ.

ಆದಾಗ್ಯೂ ಕೋಲ್ಕತ್ತಾ ಪೊಲೀಸ್ ಮಹಿಳೆಯ ವಿರುದ್ಧ ದೂರುಗಳನ್ನು ಸ್ವೀಕರಿಸಿದ್ದು, ಆದರೆ ಯಾವುದೇ ವ್ಯಕ್ತಿಯ ವಿರುದ್ಧ ವಿಚಾರಣೆಯನ್ನು ಗುರಿಪಡಿಸಿಲ್ಲ.

ರಾಜ್ಯಪಾಲರು ರಾಜಭವನಕ್ಕೆ ಪೊಲೀಸ್‌ ಸಿಬ್ಬಂದಿ ಬರುವುದನ್ನು ಮೇ.2ರಿಂದ ನಿಷೇಧಿಸಿದ್ದಾರೆ.  ಪೊಲೀಸರಿಗೆ ಸಹಕರಿಸಬೇಡಿ ಹಾಗೂ ಸಿಸಿಟಿವಿ ದೃಶ್ಯಗಳನ್ನು ನೀಡಬೇಡಿ ಎಂದು ರಾಜ್ಯಪಾಲರು ತಿಳಿಸಿದ್ದಾರೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...