ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬರ್ದಾಮಾನ್‌ನಿಂದ ಕೋಲ್ಕತ್ತಾಗೆ ಬರುವ ಸಂದರ್ಭದಲ್ಲಿ ಕೆಟ್ಟ ಹವಾಮಾನದಿಂದಾಗಿ ಕಾರು ಅಪಘಾತಗೊಂಡಿದೆ.
ಹವಾಮಾನದಿಂದಾಗಿ ರಸ್ತೆ ಸರಿಯಾಗಿ ಕಾಣದೆ ಮಮತಾ ಅವರು ಪ್ರಯಾಣಿಸುತ್ತಿದ್ದ ಕಾರು ಬೆಂಗಾವಲು ಪಡೆಯ ಕಾರಿನ ಹತ್ತಿರ ಬಂದಿದೆ. ಕಾರಿನ ಚಾಲಕ ತಕ್ಷಣ ಬ್ರೇಕ್ ಹಾಕಿದ ಕಾರಣ ಮಮತಾ ಬ್ಯಾನರ್ಜಿ ಅವರ ತಲೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಕೋಲ್ಕತ್ತಾಗೆ ವಾಪಸ್ ಕರೆತರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯಾವುದು ರಾಮರಾಜ್ಯ? ಗಾಂಧೀಜಿ ಹೇಳಿದ್ದೇ, ಪ್ರಧಾನಿ ಪಾಲಿಸುತ್ತಿರುವುದೇ?





