ಬೆಂಗಳೂರಿನ ಪ್ರತಿಪಕ್ಷಗಳ ಸಭೆಗೆ ಹಾಜರಾಗಲಿರುವ ಮಮತಾ ಬ್ಯಾನರ್ಜಿ; ಔತಣಕೂಟಕ್ಕೆ ಗೈರು

Date:

ಬೆಂಗಳೂರಿನಲ್ಲಿ ಜುಲೈ 18, 2023ರ ಮಂಗಳವಾರ, ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಅದಕ್ಕೆ ಪೂರ್ವಭಾವಿಯಾಗಿ, ಜುಲೈ 17ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಪಕ್ಷಗಳಿಗೆ ಔತಣಕೂಟ ಆಯೋಜಿಸಿದ್ದು, ಅದರಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗಿಯಾಗುವುದಿಲ್ಲವೆಂದು ಟಿಎಂಸಿ ತಿಳಿಸಿದೆ.

ಮಮತಾ ಬ್ಯಾನರ್ಜಿ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಶಸ್ತ್ರಚಿಕಿತ್ಸೆ ನಂತರದ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕಾಗಿರುವುದರಿಂದ ಜುಲೈ 17 ರಂದು ಪ್ರತಿಪಕ್ಷಗಳ ಔತಣಕೂಟದಲ್ಲಿ ಭಾಗವಹಿಸುವುದಿಲ್ಲ. ಆದರೆ ಜುಲೈ 18 ರಂದು ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಮೊದಲ ಸಭೆಯಲ್ಲಿ 15 ಪಕ್ಷಗಳು ಭಾಗವಹಿಸಿದ್ದವು. ಬೆಂಗಳೂರಿನ ಸಭೆಗೆ ಆಮ್ ಆದ್ಮಿ ಸೇರಿದಂತೆ 24 ಪಕ್ಷಗಳಿಗೆ ಸಭೆಗೆ ಆಹ್ವಾನ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನ ಮಹಿಳಾ ಸಬಲೀಕರಣ ಯೋಜನೆಗಳು ಗೊಂದಲದ ಗೂಡಾಗಿವೆ; ಬಿಜೆಪಿ ಟೀಕೆ

ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ವಿಧಾನಸಭಾ ಚುನಾವಣೆಯ ಗೆಲುವು ಮೋದಿ ಸರ್ಕಾರದ ವಿರುದ್ಧದ ಹೋರಾಟಕ್ಕೆ ಹೊಸ ಆಯಾಮ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಗೆ ಹೆಚ್ಚಿನ ಮಹತ್ವ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...