ದಲಿತ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

Date:

ಉತ್ತರ ಪ್ರದೇಶದ ಅಮೇಥಿಯಲ್ಲಿ ದಲಿತ ಕುಟುಂಬದ ನಾಲ್ವರನ್ನು ಕೂಡಾ ಗುಂಡಿಕ್ಕಿ ಕೊಂದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. 27 ವರ್ಷದ ಆರೋಪಿ ಚಂದನ್ ವರ್ಮಾ ದಲಿತ ಸಮುದಾಯದ ಇಡೀ ಕುಟುಂಬವನ್ನೇ ಹತ್ಯೆಗೈಯಲು ಬಳಸಿದ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಶಿವತಂಗಂಜ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಮದನ್ ಕುಮಾರ್ ಸಿಂಗ್ ಅವರು ಕಾಲುವೆಯ ಟ್ರ್ಯಾಕ್ ಬಳಿ ಸಿಕ್ಕ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳುವಾಗ ಈ ಘಟನೆ ಸಂಭವಿಸಿದೆ. ಮದನ್ ಕುಮಾರ್ ಪಿಸ್ತೂಲ್ ಅನ್ನು ಪರಿಶೀಲಿಸುತ್ತಿದ್ದಾಗ, ಆರೋಪಿ ಚಂದನ್ ವರ್ಮಾ, ಮದನ್ ಕುಮಾರ್ ಅವರ ಬಂದೂಕನ್ನು ಕಸಿದುಕೊಂಡು ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಕ್ಷಣೆಗಾಗಿ, ಇನ್ಸ್‌ಪೆಕ್ಟರ್ ಸಚ್ಚಿದಾನಂದ ರೈ ಅವರು ಗುಂಡು ಹಾರಿಸಿದ್ದು, ಅದು ಆರೋಪಿಯ ಚಂದನ್ ವರ್ಮಾ ಬಲಗಾಲಿಗೆ ತಗುಲಿದೆ ಎಂದು ವರದಿಯಾಗಿದೆ. ದೆಹಲಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಶುಕ್ರವಾರ ರಾತ್ರಿ ನೋಯ್ಡಾದ ಟೋಲ್ ಪ್ಲಾಜಾ ಬಳಿ ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ದಲಿತ ದೌರ್ಜನ್ಯ | ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದೂರು ದಾಖಲಿಸಿದ್ದ ಕುಟುಂಬದ ನಾಲ್ವರ ಹತ್ಯೆ

ಚಂದನ್ ವರ್ಮಾ ಅಮೇಥಿಯ ಅಹೋರ್ವಾ ಭವಾನಿ ಪ್ರದೇಶದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕ ಸುನಿಲ್ ಕುಮಾರ್ (35), ಅವರ 32 ವರ್ಷದ ಪತ್ನಿ ಪೂನಂ ಮತ್ತು ದಂಪತಿಯ ಇಬ್ಬರು ಪುತ್ರಿಯರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಈ ಹಿಂದೆಯೇ ಚಂದನ್ ವರ್ಮಾ ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಪೂನಂ ದೂರು ದಾಖಲಿಸಿದ್ದರು.

ಅಪರಾಧ ಕೃತ್ಯಕ್ಕೆ ಬಳಸಿದ್ದ ಕಂಟ್ರಿ ನಿರ್ಮಿತ ಪಿಸ್ತೂಲ್ ಹಾಗೂ ಕಪ್ಪು ಬಣ್ಣದ ಎನ್‌ಫೀಲ್ಡ್ ಬುಲೆಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಂದು ತಿಂಗಳ ಹಿಂದೆ ಸುನೀಲ್ ಅವರ ಬಲಿಷ್ಠ ಜಾತಿಯ ವ್ಯಕ್ತಿಯೊಬ್ಬನ ವಿರುದ್ಧ ದಲಿತ ದೌರ್ಜನ್ಯದ ಆರೋಪದ ಮೇಲೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ದೂರು ದಾಖಲಿಸಿತ್ತು. ಆ ಕಾರಣಕ್ಕಾಗಿಯೇ, ಅವರ ಕುಟುಂಬವನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದರು.

ಆದರೆ ಆರೋಪಿಯ ಬಂಧನದ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಪೊಲೀಸ್ ಅಧೀಕ್ಷಕ ಅನೂಪ್ ಕುಮಾರ್ ಸಿಂಗ್, ಪೂನಂ ಜೊತೆ ಈ ಹಿಂದೆ ದೈಹಿಕ ಸಂಬಂಧ ಹೊಂದಿದ್ದ ವಿಚಾರದಲ್ಲಿ ಹತ್ಯೆ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...