ಪುಣೆ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧನ

Date:

ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ಸಿನಲ್ಲಿ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಸುಮಾರು 75 ಗಂಟೆಗಳ ಕಾಲ ಆತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿ, ಶ್ರೀರೂರ್ ತಹಸಿಲ್‌ನಿಂದ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿ ಮಂಗಳವಾರ ಬೆಳಿಗ್ಗೆ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ. ಆತ ಆರಂಭದಲ್ಲಿ ಮಹಿಳೆಯನ್ನು ಅಕ್ಕ ಎಂದು ಕರೆದು ಮಾತಾಡಿಸಿದ್ದ. ಬಳಿಕ ಸತಾರಾಕ್ಕೆ ಹೋಗುವ ಬಸ್ ಮತ್ತೊಂದು ಪ್ಲಾಟ್‌ಫಾರ್ಮ್‌ಗೆ ಬಂದಿದೆ ಎಂದು ಹೇಳಿ, ನಿಲ್ಲಿಸಿದ್ದ ಖಾಲಿ ಬಸ್‌ ಬಳಿ ಕರೆದೊಯ್ದಿದ್ದ. ಮಹಿಳೆ ಬಸ್ಸಿನೊಳಗೆ ಲೈಟ್‌ ಆನ್‌ ಇರದ ಕಾರಣ ಬಸ್‌ ಹತ್ತಲು ಹಿಂಜರಿದಿದ್ದಳು. ಈ ವೇಳೆ, ಇದೇ ಸರಿಯಾದ ಬಸ್‌ ಎಂದು ಹೇಳಿ ಒಳಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಮಿಳುನಾಡಿನಲ್ಲಿ ಸದ್ದು ಮಾಡುತ್ತಿರುವ ವಿಜಯ್ ಮತ್ತು #GetOut ಫಲಕಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಯು ಹಲವಾರು ತಿಂಗಳುಗಳಿಂದ ಪೊಲೀಸರ ಸೋಗಿನಲ್ಲಿ ಓಡಾಡಿಕೊಂಡಿದ್ದ ಎಂದು ಹೇಳಲಾಗಿದೆ. ಆತನ ವಿರುದ್ಧ ಪುಣೆ ಮತ್ತು ಅಹಲ್ಯಾನಗರ ಜಿಲ್ಲೆಗಳಲ್ಲಿ ಕಳ್ಳತನ, ದರೋಡೆ ಮತ್ತು ಸರಗಳ್ಳತನದ ಪ್ರಕರಣಗಳಿವೆ. ಪ್ರಕರಣ ಒಂದರಲ್ಲಿ ಆತ 2019ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

ಆರೋಪಿಗಳನ್ನು ಬಂಧಿಸಲು ಮಹಾರಾಷ್ಟ್ರದಾದ್ಯಂತ ಒಟ್ಟು 13 ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿತ್ತು. ಶೋಧ ಕಾರ್ಯಾಚರಣೆಯ ಭಾಗವಾಗಿ ಸ್ನಿಫರ್ ಡಾಗ್ಸ್ ಮತ್ತು ಡ್ರೋನ್‌ಗಳನ್ನು ಸಹ ನಿಯೋಜಿಸಲಾಗಿತ್ತು. ಆರೋಪಿ ಇರುವಿಕೆಯ ಬಗ್ಗೆ ಮಾಹಿತಿ ನೀಡಿದವರಿಗೆ ಪುಣೆ ಪೊಲೀಸರು ಈ ಹಿಂದೆ 1 ಲಕ್ಷ ರೂ. ನಗದು ಬಹುಮಾನವನ್ನು ಸಹ ಘೋಷಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...