ಕಳ್ಳತನ ಆರೋಪ: 40 ಮೂಳೆ ಮುರಿಯುವಂತೆ ಹಲ್ಲೆಗೈದು ದುಷ್ಟರ ಗುಂಪು; ಸಂತ್ರಸ್ತ ಸಾವು

Date:

ಕಳ್ಳತನ ಮಾಡಿದ್ದಾರೆಂಬ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ದುಷ್ಟರ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದ್ದು, ಸಂತ್ರಸ್ತ ದೇಹದ 40 ಮೂಳೆಗಳು ಮುರಿದಿರುವ ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಆಗ್ಗಾಗ್ಗೆ ಹಲ್ಲೆ, ಕೊಲೆಯಂತಹ ಗಂಭೀರ ಘಟನೆಗಳು ವರದಿಯಾಗುತ್ತಿವೆ. ಇದೀಗ, ಇಂದೋರ್‌ನ ಆಜಾದ್‌ ನಗರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ದುಷ್ಟರ ಗುಂಪು ವ್ಯಕ್ತಿಯನ್ನು ಹೊಡೆದು ಕೊಂದಿದೆ. ಮೃತನನ್ನು ಉಮೇಂದ್ರ ಸಿಂಗ್ ಠಾಕೂರ್ (28) ಎಂದು ಗುರುತಿಸಲಾಗಿದೆ.

ಇಂದೋರ್‌ನಲ್ಲಿ ಸೇತುವೆ ನಿರ್ಮಾಣ ಕಾಮಕಾರಿ ನಡೆಯುತ್ತಿದ್ದು, ಕಾಮಗಾರಿಗೆ ಬಳಸುವ ಅಗತ್ಯ ಸಾಮಗ್ರಿಗಳನ್ನು ಕೆಲಸ ನಡೆಯುತ್ತಿದ್ದ ಸ್ಥಳದಲ್ಲಿ ಇರಿಸಲಾಗಿತ್ತು. ಅಲ್ಲಿದ್ದ ಕಬ್ಬಿಣದ ಸರಳಗಳನ್ನು ಉಮೇಂದ್ರ ಠಾಕೂರ್ ಕದಿಯಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆ ಕಾರಣಕ್ಕಾಗಿಯೇ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿಗಳು ಆತನ ಮೇಲೆ ಭೀಕರ ಹಲ್ಲೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಎಲ್ಲ ರಾಜ್ಯಗಳಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಇದು ಪರೋಕ್ಷ NRC, CAA ಜಾರಿ ಅಲ್ಲವೇ?

ಗಂಭೀರವಾಗಿ ಗಾಯಗೊಂಡಿದ್ದ ಉಮೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆತನ ದೇಹದಲ್ಲಿ ಸುಮಾರು 40 ಮೂಳೆಗಳು ಮುರಿದಿವೆ ಎಂಬುದು ಗೊತ್ತಾಗಿದೆ.

ಭೀಕರ ಹಲ್ಲೆಯಿಂದಾಗಿ ಆತ ಕೈಗಳು, ಕಾಲುಗಳು ಹಾಗೂ ಪಕ್ಕೆಲುಬುಗಳು ಮುರಿದಿವೆ. ದೇಹದ ಅನೇಕ ಸ್ಥಳಗಳಲ್ಲಿ ಮೂಳೆಗಳು ಮುರಿದುಹೋಗಿವೆ. ದೇಹದ ಒಳಗೆ ರಕ್ತಸ್ರಾವವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಕೃತ್ಯ ಎಸಗಿರುವ ಆರೋಪಿಗಳನ್ನು ಗುರುತಿಸಿದ್ದು, ಅವರ ಬಂಧನಕ್ಕೆ ಹುಟುಕಾಟ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...