ವಾಮಾಚಾರ ಆರೋಪ; ಪಾಕಿಸ್ತಾನ ಮಹಿಳೆ ಸೀಮಾ ಹೈದರ್ ಮನೆಗೆ ನುಗ್ಗಲು ಯತ್ನಿಸಿದ ವ್ಯಕ್ತಿ

Date:

ವಾಮಾಚಾರ ಮಾಡಿದ ಆರೋಪ ಮಾಡಿ ಪಾಕಿಸ್ತಾನ ಮಹಿಳೆ ಸೀಮಾ ಹೈದರ್ ಮನೆಗೆ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿದ ಘಟನೆ ಶನಿವಾರ ನಡೆದಿದೆ. ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ಆರೋಪಿಯನ್ನು ಗುಜರಾತ್‌ನ ಸುರೇಂದರ್ ನಗರದ ನಿವಾಸಿ ತೇಜಸ್ ಎಂದು ಗುರುತಿಸಿದ್ದಾರೆ. ಆತ ಮಾನಸಿಕ ಅಸ್ವಸ್ಥನಂತೆ ತೋರುತ್ತಿದೆ. ಆತ ಸಂಜೆ ಸುಮಾರು 7 ಗಂಟೆಗೆ ಸೀಮಾ ಮನೆಗೆ ನುಗ್ಗಲು ಯತ್ನಿಸಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಭಾರತದಿಂದ ಪಾಕಿಸ್ತಾನಕ್ಕೆ ತೆರಳುತ್ತಿರುವ ಸಾಮಾನ್ಯರು, ಸಂಕಟದ ಕತೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತೇಜಸ್ ಗುಜರಾತ್ ಮೂಲದವನಾಗಿದ್ದು, ಗುಜರಾತ್‌ನಿಂದ ನವದೆಹಲಿಗೆ ಹೋಗುವ ರೈಲಿನ ಸಾಮಾನ್ಯ ಕೋಚ್ ಮೂಲಕ ಪ್ರಯಾಣಿಸಿ ಬಂದಿದ್ದಾನೆ. ನವದೆಹಲಿ ರೈಲ್ವೆ ನಿಲ್ದಾಣದಿಂದ ಬಸ್ ಮೂಲಕ ಸೀಮಾ ನೆಲೆಸಿರುವ ಗ್ರಾಮಕ್ಕೆ ತಲುಪಿದ್ದಾನೆ. ಆತನ ಮೊಬೈಲ್ ಫೋನ್‌ನಲ್ಲಿ ಸೀಮಾ ಸ್ಕ್ರೀನ್‌ಶಾಟ್‌ಗಳಿವೆ” ಎಂದು ರಬುಪುರ ಕೊಟ್ವಾಲಿಯ ಉಸ್ತುವಾರಿ ವಹಿಸಿರುವ ಅಧಿಕಾರಿ ಸುಜೀತ್ ಉಪಧ್ಯಾಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

“ತೇಜಸ್ ಬಂಧನ ಮಾಡಲಾಗಿದೆ. ವಿಚಾರಣೆ ನಡೆಸಿದಾಗ ಸೀಮಾ ತನ್ನ ಮೇಲೆ ಮಾಟಮಂತ್ರ (ವಾಮಾಚಾರ) ಮಾಡಿದ್ದಾರೆ ಎಂದು ತೇಜಸ್ ಪೊಲೀಸರಿಗೆ ತಿಳಿಸಿದ್ದು, ಈ ಬಗ್ಗೆ ಹೆಚ್ಚಿನ ವಿಚಾರಣೆ, ತನಿಖೆ ನಡೆಯುತ್ತಿದೆ” ಎಂದು ಸುಜೀತ್ ತಿಳಿಸಿದ್ದಾರೆ.

ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜಾಕೋಬಾಬಾದ್ ಮೂಲದ 32 ವರ್ಷದ ಸೀಮಾ ಹೈದರ್ 2023ರಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿದ್ದರು. ತಾನು ಇಷ್ಟಪಟ್ಟ ಭಾರತದ 27 ವರ್ಷದ ಸಚಿನ್ ಮೀನಾ ಅವರನ್ನು ವಿವಾಹವಾಗಲು ಪಾಕಿಸ್ತಾನ ತೊರೆದು ಅಕ್ರಮವಾಗಿ ಸೀಮಾ ಭಾರತ ಪ್ರವೇಶಿಸಿದ್ದರು.

ತನ್ನ ಮಕ್ಕಳನ್ನು ಕರೆದುಕೊಂಡು 2023ರ ಮೇ ತಿಂಗಳಲ್ಲಿ ಕರಾಚಿಯಲ್ಲಿರುವ ಮನೆಯಿಂದ ನೇಪಾಳ ಮೂಲಕ ಭಾರತಕ್ಕೆ ಪ್ರಯಾಣ ಬೆಳೆಸಿದರು. ಆ ವರ್ಷದ ಜುಲೈನಲ್ಲೇ ಗ್ರೇಟರ್ ನೋಯ್ಡಾ ಪ್ರದೇಶದಲ್ಲಿ ಸಚಿನ್ ಮೀನಾ ಜೊತೆ ಸೀಮಾ ನೆಲೆಸಿರುವುದು ಭಾರತೀಯ ಅಧಿಕಾರಿಗಳ ಗಮನಕ್ಕೆ ಬಂದಾಗ ಸುದ್ದಿಯಾದರು. ಅವರಿಬ್ಬರು ಈಗ ವಿವಾಹವಾಗಿರುವುದಾಗಿ ಹೇಳಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...