ವ್ಯಕ್ತಿಯ ಮೃತದೇಹ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್‌ ಅಪಘಾತ; ಕುಟುಂಬದ ಇಬ್ಬರು ಸೇರಿ ಮೂವರ ಸಾವು

Date:

ವ್ಯಕ್ತಿಯೊಬ್ಬರ ಮೃತದೇಹವನ್ನು ಆ್ಯಂಬುಲೆನ್ಸ್‌ನಲ್ಲಿ ಕೊಂಡೊಯ್ಯುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿ ಇಬ್ಬರು ಕುಟುಂಬಸ್ಥರು ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಒಡಿಶಾದ ಭಾದ್ರಕ್ ಜಿಲ್ಲೆಯಲ್ಲಿ ನಡೆದಿದೆ.

26 ವರ್ಷದ ಯುವಕ ತನ್ನ ಸೋದರಳಿಯನೊಂದಿಗೆ ತನ್ನ ತಂದೆಯ ಮೃತದೇಹವನ್ನು ಆ್ಯಂಬುಲೆನ್ಸ್‌ನಲ್ಲಿ ಕೊಂಡೊಯ್ಯುತ್ತಿದ್ದರು. ಆದರೆ ರಾಷ್ಟ್ರೀಯ ಹೆದ್ದಾರಿ 16ರ ಸಮೀಪದಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಬೆಳಗಾವಿ | ಕುಂಭಮೇಳದಲ್ಲಿ ಕಾಲ್ತುಳಿತ; ಮೃತದೇಹ, ಗಾಯಾಳುಗಳನ್ನು ಕರೆತರಲು ಜಿಲ್ಲಾಡಳಿತ ಸಿದ್ಧತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರನ್ನು ಸಂಜಯ್ ಜೆನಾ (26), ಸುದಾಂಶು ಜೆನಾ (42) ಮತ್ತು ಆ್ಯಂಬುಲೆನ್ಸ್‌ ಚಾಲಕ ದಿಲೀಪ್ ಸಿಂಗ್ (43) ಎಂದು ಗುರುತಿಸಲಾಗಿದೆ. ಸಂಜಯ್ ತಾಯಿ ಸಬಿತ್ರಿ ಜೆನಾ ಅವರಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಸಮಸ್ಯೆ ಹೊಂದಿದ್ದ ಸಂಜಯ್ ತಂದೆ ದಿವಾಕರ್ ಜೆನಾ ಅವರು ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ದಿವಾಕರ್ ಜೆನಾ ಅವರ ಮೃತದೇಹವನ್ನು ಮನೆಗೆ ಕೊಂಡೊಯ್ಯುತ್ತಿದ್ದ ವೇಳೆ ಆ್ಯಂಬುಲೆನ್ಸ್‌ ಅಪಘಾತವಾಗಿದೆ ಎಂದು ಹೇಳಲಾಗಿದೆ.

ಪ್ರಸ್ತುತ ದೂರು ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...