ದೇಹಕ್ಕೆ ದೂರು ಪತ್ರಗಳನ್ನು ಕಟ್ಟಿಕೊಂಡು ತೆವಳುತ್ತಾ ಸರ್ಕಾರಿ ಕಚೇರಿಗೆ ಬಂದ ವ್ಯಕ್ತಿ

Date:

ವ್ಯಕ್ತಿಯೊಬ್ಬರು ಹಲವಾರು ದೂರು ಪತ್ರಗಳನ್ನು ದಾರದೊಂದಿಗೆ ಹೆಣೆದುಕೊಂಡು, ಅದನ್ನು ತಮ್ಮ ದೇಹಕ್ಕೆ ಕಟ್ಟಿಕೊಂಡು ವಿಭಾಗೀಯ ಆಯುಕ್ತರ ಕಚೇರಿಗೆ ತೆವಳುತ್ತಾ ಬಂದು ಪ್ರತಿಭಟನೆ ನಡೆಸಿರುವ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ನಡೆದಿದೆ.

ಹೋರ್ ಜಿಲ್ಲೆಯ ಬಿಷಂಖೇಡಿ ಗ್ರಾಮದ ನಿವಾಸಿ ಬಜರಂಗಿ ಎಂಬವರು ತಮ್ಮ ಗ್ರಾಮದ ಸಮಸ್ಯೆಗಳ ಕುರಿತು ಎಷ್ಟು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸದ ಕಾರಣ, ಅವರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರ ಗಮನ ಸೆಳೆದಿದ್ದಾರೆ.

ತಮ್ಮ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ತಮ್ಮ ಸಮಸ್ಯೆಯ ಬಗ್ಗೆ ಗಮನ ಸೆಳೆಯಲು ಈ ರೀತಿ ಪ್ರತಿಭಟನೆ ನಡೆಸಿರುವುದಾಗಿ ಬಜರಂಗಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ನನ್ನ ಗ್ರಾಮಕ್ಕೆ ನೀರು ಪಡೆಯುವುದಕ್ಕಾಗಿ ಇಲ್ಲಿಗೆ ಬಂದಿದ್ದೇನೆ. ನಾವು ಜಿಲ್ಲಾಧಿಕಾರಿ, ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ಪದೇ ಪದೇ ಮನವಿ ಸಲ್ಲಿಸಿದ್ದೇವೆ. ಆದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅಧಿಕಾರಿಗಳ ನಿಷ್ಕ್ರಿಯತೆಯಿಂದ ಹತಾಶೆಗೊಂಡು ನಮ್ಮ ಮನವಿ ಪತ್ರಗಳು ಮತ್ತು ದೂರು ಪತ್ರಗಳನ್ನು ದಾರದಲ್ಲಿ ಹೆಣೆದು, ದೇಹಕ್ಕೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದ್ದೇನೆ” ಎಂದು ಹೇಳಿದ್ದಾರೆ.

ಆದಾಗ್ಯೂ, ಅಧಿಕಾರಿಗಳು ಬಜರಂಗಿಯವರ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಗ್ರಾಮದಲ್ಲಿ ಮುದಾಯ ಕೇಂದ್ರದ ಬಳಿ ಮಾತ್ರ ನೀರಿನ ಕೊರತೆ ಕಂಡುಬಂದಿದೆ. ಈ ಸಮಸ್ಯೆಯನ್ನು ಪರಿಹರಿಸಲು, ಅಧಿಕಾರಿಗಳು ಬೋರ್‌ವೆಲ್ ಕೊರೆಸಲಾಗಿದ್ದು, ಟ್ಯಾಂಕ್‌ನಲ್ಲಿ ನೀರು ಸಂಗ್ರಹಿಸಲು ಪಂಪ್ ಅಳವಡಿಸಿದ್ದಾರೆ ಎಂದು ಸಾರ್ವಜನಿಕ ಆರೋಗ್ಯ ಎಂಜಿನಿಯರಿಂಗ್ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರದೀಪ್ ಸಕ್ಸೇನಾ ಹೇಳಿದ್ದಾರೆ.

2,100 ನಿವಾಸಿಗಳಿರುವ ಈ ಗ್ರಾಮದಲ್ಲಿ 20 ಕೈ ಪಂಪ್‌ಗಳಿದ್ದು, ಅವುಗಳಲ್ಲಿ 12 ಕಾರ್ಯನಿರ್ವಹಿಸುತ್ತಿವೆ. ಅಲ್ಲದೆ, ಹೆಚ್ಚಿನ ಮನೆಗಳು ತಮ್ಮದೇ ಆದ ನೀರಿನ ಮೂಲಗಳನ್ನು ಹೊಂದಿದ್ದಾರೆ ಎಂದು ಸಕ್ಸೇನಾ ತಿಳಿಸಿದ್ದಾರೆ.

ಮಧ್ಯಪ್ರದೇಶವು ಈ ಹಿಂದೆಯೂ ಇದೇ ರೀತಿಯ ವಿನೂತನ ಪ್ರತಿಭಟನೆಗಳನ್ನು ಕಂಡಿದೆ. ಕಳೆದ ವರ್ಷ ಜುಲೈನಲ್ಲಿ, ಮಂಡ್ಸೌರ್‌ನಲ್ಲಿ ವೃದ್ಧ ರೈತರೊಬ್ಬರು ತಮ್ಮ ಭೂಮಿಯನ್ನು ಕೆಲವರು ಕಬಳಿಸಿಕೊಂಡಿದ್ದಾರೆಂದು ದೂರು ನೀಡಿದರೂ, ಅಧಿಕಾರಿಗಳು ಕ್ರಮ ಕೈಗೊಂಡಿಲ್ಲವೆಂದು ಉರುಳುಸೇವೆ ಪ್ರತಿಭಟನೆ ಮಾಡಿದ್ದರು. ಡಿಸೆಂಬರ್‌ನಲ್ಲಿ, ಮತ್ತೊಬ್ಬ ರೈತ ದೇವಾಸ್‌ನಲ್ಲಿರುವ ತನ್ನ ಭೂ ವಿವಾದವನ್ನು ಪರಿಹರಿಸುವಲ್ಲಿ ಮ್ಯಾಜಿಸ್ಟ್ರೇಟ್‌ ಕಚೇರಿಯ ವಿಳಂಬವನ್ನು ಖಂಡಿಸಿ ತನ್ನ ಕುಟುಂಬದೊಂದಿಗೆ ಮೊಣಕಾಲುಗಳ ಮೇಲೆ ನಡೆದು ಗಮನ ಸೆಳೆದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...