ಆ್ಯಪ್ ಮೂಲಕ 2,000 ರೂ. ಸಾಲ ಪಡೆದ ಯುವಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ

Date:

ತ್ವರಿತ ಸಾಲವನ್ನು ನೀಡುವ ಆ್ಯಪ್ ಮೂಲಕ 2,000 ರೂಪಾಯಿ ಸಾಲ ಪಡೆದ 27 ವರ್ಷದ ಯುವಕರೊಬ್ಬರು ಆ್ಯಪ್‌ನ ಸಿಬ್ಬಂದಿಗಳ ನಿರಂತರ ಕಿರುಕುಳದಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮೃತ ಯುವಕನನ್ನು ನರೇಂದ್ರ ಎಂದು ಗುರುತಿಸಲಾಗಿದ್ದು ಅವರು 47 ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದರು ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಅತ್ತೆ-ಮಾವ ‘ಬೈಕ್‌ ಇಎಂಐ’ ಕಟ್ಟಿಲ್ಲವೆಂದು ಅಳಿಯ ಆತ್ಮಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೀನುಗಾರಿಕೆ ನಡೆಸಿ ಜೀವನ ನಡೆಸುತ್ತಿದ್ದ ನರೇಂದ್ರ ಅವರಿಗೆ ಹವಾಮಾನ ವೈಪರೀತ್ಯದಿಂದಾಗಿ ಕೆಲವು ದಿನಗಳಿಂದ ಮೀನುಗಾರಿಕೆ ನಡೆಸಲು ಸಾಧ್ಯವಾಗಿಲ್ಲ. ಇದಕ್ಕಾಗಿ ತ್ವರಿತವಾಗಿ ಸಾಲ ನೀಡುವ ಆ್ಯಪ್ ಮೂಲಕ 2,000 ರೂ. ಸಾಲ ಪಡೆದಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನರೇಂದ್ರ ಅಸಲು ಮೊತ್ತವನ್ನು ಮರುಪಾವತಿ ಮಾಡಿದ್ದರು. ಆದರೆ ಈ ಆನ್‌ಲೈನ್ ಸಾಲ ನೀಡುವ ಸಂಸ್ಥೆಯು ಭಾರೀ ಪ್ರಮಾಣದ ಬಡ್ಡಿಯನ್ನು ಪಾವತಿಸುವಂತೆ ನರೇಂದ್ರ ಅವರಿಗೆ ಕಿರುಕುಳ ನೀಡಿದೆ. ಅಷ್ಟೊಂದು ಹಣ ನೀಡಲು ಸಾಧ್ಯವಿಲ್ಲ ಎಂದು ನರೇಂದ್ರ ಹೇಳಿದಾಗ, ನಿಮ್ಮ ಮತ್ತು ನಿಮ್ಮ ಪತ್ನಿಯ ನಗ್ನ ಫೋಟೋವನ್ನು ಮಾರ್ಫಿಂಗ್ ಮಾಡಿ ನಿಮ್ಮ ಸ್ನೇಹಿತರಿಗೆ ವಾಟ್ಯ್ಸಾಪ್‌ ಮೂಲಕ ಹಂಚಿಕೊಳ್ಳಲಾಗುವುದು ಎಂದು ಬೆದರಿಸಿದ್ದಾರೆ.

ಈ ಕಿರುಕುಳದ ಬಗ್ಗೆ ಯಾರಲ್ಲಿಯೂ ಹೇಳಿಕೊಳ್ಳದ ನರೇಂದ್ರ ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಮೃತರ ಕುಟುಂಬಸ್ಥರು ಪೊಲೀಸ್ ಕಮಿಷನರ್ ಹಾಗೂ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...